ಲೇಡಿ ಪಿಎಸ್ಐ ವಿರುದ್ಧ ಕಿರುಕುಳ ಆರೋಪ: ಡೆತ್ನೋಟ್ ಬರೆದಿಟ್ಟು ಯುವಕ ನಾಪತ್ತೆ, ಕುಟುಂಬದಲ್ಲಿ ಆತಂಕ
ರೈತರ ಜೊತೆಗಿನ ಕಿರಿಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಯುವಕನೊಬ್ಬ ಡೆತ್ನೋಟ್ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿದ್ದಾನೆ.
ರಾಯಚೂರು: ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ (Lady PSI) ಕಿರುಕುಳ ತಾಳಲಾರದೇ ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ನಾಪತ್ತೆಯಾಗಿದ್ದಾನೆ. ಸಿರವಾರದ ತಾಯಣ್ಣ ನೀಲಗಲ್ ಎನ್ನುವ ಯುವಕ ನಿನ್ನೆ(ಡಿಸೆಂಬರ್ 03) ರಾತ್ರಿಯಿಂದ ನಾಪತ್ತೆಯಾಗಿದ್ದು, ಸಿರವಾರ ಠಾಣೆಯ ಪಿಎಸ್ಐ ಗೀತಾಂಜಲಿ ಶಿಂಧೆ ಅವರು ಮೂರು ತಿಂಗಳಿಂದ ವಿನಾಕಾರಣ ಠಾಣೆಗೆ ಕರೆಸಿ ನನಗೆ ಕಿರುಕುಳ ನೀಡುತ್ತಿದ್ದರು ಎಂದು ತಾಯಣ್ಣ ಆರೋಪ ಮಾಡಿದ್ದಾರೆ. ಅಲ್ಲದೇ ಲೆಟರ್ನಲ್ಲಿ (Death Note) ಆತ್ಮಹತ್ಯೆ (Suicide) ಮಾಡಿಕೊಳ್ಳುವುದಾಗಿ ಉಲ್ಲೇಖಿಸಿದ್ದು, ತನ್ನ ಸಾವಿಗೆ ಪಿಎಸ್ ಐ ಕಾರಣ ಎಂದು ಬರೆದಿದ್ದಾರೆ. ಇದರಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.
ಸಂಬಂಧಿಕರ ಜಮೀನಿನ ಭತ್ತ ಕಟಾವು ಮಾಡಿದ್ದ ಆರೋಪವನ್ನು ತಾಯಣ್ಣ ಹೊತ್ತಿದ್ದ. ದೂರು ನೀಡಿದ ಹಿನ್ನೆಲೆಯಲ್ಲಿ ನಿನ್ನೆ (ಡಿ.02) ತಾಯಣ್ಣನನ್ನು ಪಿಎಸ್ಐ ಗೀತಾಂಜಲಿ ಶಿಂಧೆ ಠಾಣೆಗೆ ಕರೆಸಿದ್ದರು. ಬಹಳ ಹೊತ್ತು ಲಾಕಪ್ನಲ್ಲಿ ಕೂರಿಸಿದ್ದರಿಂದ ಮನನೊಂದು ನಾಪತ್ತೆತಾಗಿರುವುದಾಗಿ ಯುವಕ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾನೆ.
ಸದ್ಯ ನಾಪತ್ತೆಯಾಗಿರುವ ತಾಯಣ್ಣನ ವಿರುದ್ಧ ಪ್ರಕರಣಗಳಿರುವ ಮಾಹಿತಿ ಇದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಲೇಡಿ ಪಿಎಸ್ಐ, ವಿಚಾರಣೆ ನೆಪದಲ್ಲಿ ತಾಯಣ್ಣನಿಗೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇನ್ನು ತಾಯಣ್ಣ ಬರೆದಿರುವ ಲೆಟರ್ನಲ್ಲಿ ಏನಿದೆ ಎನ್ನುವುದು ಈ ಕೆಳಗಿನಂತಿದೆ.
ನಾನು ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಇದಕ್ಕೆ ಪಿಎಸ್ಐ ಗೀತಾಂಜಲಿ ಶಿಂಧೆ ಅವರೇ ಕಾರಣ. ನನಗೆ ನಿರಂತರ ಕಿರುಕುಳ ನೀಡುತ್ತಿದ್ದು, ದೌರ್ಜನ್ಯ ಎಸಗುತ್ತಿದ್ದಾರೆ. ಇದರಿಂದ ಭಯಭೀತನಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನಗೆ ಹೊರಗಡೆ ಹೋದಾಗಲೆಲ್ಲ ಜೀಪ್ ನಿಲ್ಲಿಸಿ, ನನಗೆ ಹೊಡೆದಂತಹ ಅನೇಕ ಪ್ರಸಂಗಗಳು ಇವೆ. ಅದನ್ನು ಈವರೆಗೂ ನಾನು ಯಾರಿಗೂ ಹೇಳಿಕೊಂಡಿರಲಿಲ್ಲ. ಇದೀಗ ನಾನು ಬಹಳಷ್ಟು ನೊಂದಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ.
ವಿಚಾರಣೆ ನೆಪದಲ್ಲಿ ನಿನ್ನೆ(ಡಿ.02) ಸಾಯಂಕಾಲ ನನ್ನನ್ನು ಠಾಣೆಗೆ ಕರೆಸಿದರು. ನಾನು ಮಾವನ ಮನೆಯಿಂದ ನೇರವಾಗಿ ಪೊಲೀಸ್ ಠಾಣೆಗೆ ಹೋದೆ. ಆದರೆ, ನನ್ನನ್ನು ವಿಚಾರಣೆ ಮಾಡದೇ ಲಾಕಪ್ನಲ್ಲಿ ಕೆಲ ಕಾಲ ಕೂರಿಸಿ ಹಿಂಸೆ ನೀಡಿದರು. ಸ್ವಲ್ಪ ಸಮಯದ ಬಳಿಕ ನನ್ನನ್ನು ಬಿಡುಗಡೆ ಮಾಡಿದರು. ಆದರೆ, ಯಾವುದೇ ವಿಚಾರಣೆ ಮಾತ್ರ ಮಾಡಲಿಲ್ಲ. ಇದರಿಂದ ನಾನು ಬಹಳ ನೊಂದಿದ್ದೇನೆ. ನನ್ನನ್ನು ಏಕಾಏಕಿ ಲಾಕಪ್ನಲ್ಲಿ ಹಾಕಿದ್ದಾರೆ. ಇದು ತುಂಬಾ ನೋವಾಗಿದೆ.
ಗೀತಾಂಜಲಿ ಅವರು ನನಗೆ 3 ತಿಂಗಳಿಂದ ತುಂಬಾ ಚಿತ್ರಹಿಂಸೆ ನೀಡುತ್ತಿದ್ದಾರೆ. ಯಾವ ದಾರಿಯಲ್ಲೂ ಕಂಡರೂ ಒದ್ದು ಒಳಗೆ ಹಾಕುತ್ತೇನೆ ಎಂದು ಬೆದರಿಸಿದ್ದಾರೆ. ಇದನ್ನು ನಾನು ಯಾರಿಗೂ ಹೇಳಲಾಗದೇ ಮನಸ್ಸಿನಲ್ಲೇ ಕೊರಗುತ್ತಿದ್ದೇನೆ. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಎರಡು ಪುಟಗಳ ಸುದೀರ್ಘ ಡೆತ್ ನೋಟ್ ಬರೆದಿರುವ ತಾಯಣ್ಣ ಕೊನೆಯಲ್ಲಿ ನನ್ನ ಎಲ್ಲ ಕುಟುಂಬ ಸದಸ್ಯರನ್ನು ನಾನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೇ ನನ್ನ ಕೊನೆಯ ಬರಹ ನೋಡಿಕೊಳ್ಳಿ. ಮಿಸ್ ಯು ಅಮ್ಮ ಎಂದು ಬರೆದಿದ್ದಾನೆ.
ನಿನ್ನೆಯಷ್ಟೇ(ಡಿ.02) ರೈತರೊಬ್ಬರ ಟ್ರ್ಯಾಕ್ಟರ್ ಹೊತ್ತುಕೊಂಡು ಹೋಗುತ್ತಿದ್ದ ವೇಳೆ ಸ್ಪಲ್ಟ ಪೊಲೀಸ್ ಜೀಪ್ಗೆ ಟಚ್ ಆಗಿದ್ದು, ಈ ಹಿನ್ನೆಲೆಯಲ್ಲಿ ಇದೇ ಲೇಡಿ ಪಿಎಸ್ಐ ಗೀತಾಂಜಲಿ ಸಿಂಧೆ ಕಿರಿಕ್ ಮಾಡಿದ್ದರು. ಅಲ್ಲದೇ ಈ ಸಂಬಂಧ ರೈತರು, ಪಿಎಸ್ ಐ ಗೀತಾಂಜಲಿ ನಡುವೆ ನಡೆದಿದ್ದ ಮಾತಿನ ಚಕಮಕಿ ನಡೆದಿತ್ತು. ಪಿಎಸ್ಐ ಕಿರಿಕ್ ವಿಡಿಯೋ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಲೇಡಿ ಪಿಎಸ್ಐ ವಿರುದ್ಧ ಕಿರುಳು ಆರೋಪ ಕೇಳಿಬಂದಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ