ರಾಯಚೂರು, ಆ.25: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿ ವಿದ್ಯಾರ್ಥಿ (Student) ಸಾವನ್ನಪ್ಪಿದ ಘಟನೆ ರಾಯಚೂರು (Raichur) ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ. ಟ್ರ್ಯಾಕ್ಟರ್ ಡಿಕ್ಕಿಯ ರಭಸಕ್ಕೆ ಮಲ್ಲೇಶ್(18) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಇವರು ರಾಯಚೂರು ನಗರದ SRPS ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಕೊತ್ತದೊಡ್ಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅದರ ರಭಸಕ್ಕೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ಜಿಲ್ಲೆಯಲ್ಲಿ ಹರಿಯುವ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ. ಆದರೂ ಕೂಡ ಜಿಲ್ಲಾಡಳಿತ ಮಾತ್ರ ಈ ಬಗ್ಗೆ ತಲೆಕೆಡಸಿಕೊಂಡಿಲ್ಲ. ಇದೀಗ ಅಕ್ರಮ ಮರಳು ತುಂಬಿಕೊಂಡು ಇಡಪನೂರು ಕಡೆಯಿಂದ ರಾಯಚೂರು ನಗರಕ್ಕೆ ಹೊರಟಿದ್ದ ಟ್ರ್ಯಾಕ್ಟರ್ ವೇಗವಾಗಿ ಚಲಿಸುವ ವೇಳೆ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದ್ದು, ಬಳಿಕ ಟ್ರ್ಯಾಕ್ಟರ್ ಚಾಲಕ ಆರೋಪಿ ನಾಗರಾಜ್ ಕೊತ್ತದೊಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನು ಈ ಮರಳು ತುಂಬಿದ್ದ ಟ್ರ್ಯಾಕ್ಟರ್ಗಳು ರಾಮಣ್ಣ ಎಂಬುವರಿಗೆ ಸೇರಿದ್ದಾಗಿದ್ದು, ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಬಸಲಿಂಗಪ್ಪ ಎಂಬಾತ ಹೆದ್ದಾರಿ ಮೇಲೆ ಹಿಮ್ಮುಖವಾಗಿ ಟ್ರಾಕ್ಟರ್ ಓಡಿಸಿ ಕೇಸ್ ಹಾಕಿಸಿಕೊಂಡಿದ್ದಾನೆ. ಇತ ನಾಗರಪಂಚಮಿ ದಿನ ವೇಗವಾಗಿ ಹಿಮ್ಮುಖವಾಗಿ ಟ್ರಾಕ್ಟರ್ ಓಡಿಸಿ 1.4 ಲಕ್ಷ ಗೆದ್ದಿದ್ದ. ಇದೀಗ ರಾಜ್ಯ ಹೆದ್ದಾರಿ ಮೇಲೆ ಹಿಮ್ಮುಖವಾಗಿ ಟ್ರಾಕ್ಟರ್ ಓಡಿಸಿದ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ವೈರಲ್ ಆಗಿದ್ದಕ್ಕೆ ವಡಗೇರ ಠಾಣೆಯ ಪೊಲೀಸರಿಂದ
ಐಪಿಸಿ ಸೆಕ್ಷನ್ 279, 336 ಅಡಿ ಕೇಸ್ ದಾಖಲು ಮಾಡಲಾಗಿದೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ