AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸರ್ಕಾರಿ ಬಸ್​ಗೆ ಬೈಕ್​​ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ನಾಲೆಯಲ್ಲಿ ನಾಪತ್ತೆಯಾಗಿದ್ದಾನೆ.

Crime News: ಸರ್ಕಾರಿ ಬಸ್​ಗೆ ಬೈಕ್​​ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ
ಬೈಕ್​ಗೆ ಡಿಕ್ಕಿ ಹೊಡೆದು ಭತ್ತದ ಗದ್ದೆಗೆ ನುಗ್ಗಿದ ಬಸ್.
TV9 Web
| Edited By: |

Updated on: Aug 30, 2022 | 2:55 PM

Share

ರಾಯಚೂರು: ಸರ್ಕಾರಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​​ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ದುರ್ಘಟನೆ ನಡೆದಿದೆ. ಬೈಕ್​ಗೆ ಡಿಕ್ಕಿ ಹೊಡೆದು ಭತ್ತದ ಗದ್ದೆಗೆ ಬಸ್ ನುಗ್ಗಿದೆ.  ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಬಳಗಾನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಚಿನ್ನದಂಗಡಿ ಕೀಲಿ ಮುರಿದು ಕಳ್ಳತನಕ್ಕೆ ಯತ್ನ:

ವಿಜಯಪುರ: ಚಿನ್ನದ ಅಂಗಡಿಯ ಕೀಲಿ ಮುರಿದು ಕಳ್ಳತನ ಮಾಡಲು ಹೋಗಿ ಅಂಗಡಿ ಮಾಲೀಕನ ಕೈಗೆ ಕಳ್ಳ ಸಿಕ್ಕಿಬಿದ್ದಿರುವಂತಹ ಘಟನೆ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ನಿನ್ನೆ ಸಾಯಂಕಾಲ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಅನಿಲ ಎಂಬ ಯುವಕನಿಂದ ಕಳ್ಳತನಕ್ಕೆ ಯತ್ನಿಸಲಾಗಿದೆ. ಚಿನ್ನದ ಅಂಗಡಿ ಬಾಗಿಲ ಬೀಗ ಒಡೆಯುವಾಗ ಅಂಗಡಿ ಮಾಲೀಕ ಆಗಮಿಸಿದ್ದಾರೆ. ಬಸವರಾಜ್ ಅಂಗಡಿ ಓಂ ಸಾಯಿನಾಥ್ ಜ್ಯುವೆಲರ್ಸ್ ಅಂಗಡಿ ಮಾಲೀಕ. ಕದೀಮನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ಯಿ ಘಟನೆ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಬಿಎಂಟಿಸಿ ಚಾಲಕ ಆತ್ಮಹತ್ಯೆ ಪ್ರಕರಣ: ಬಿಎಂಟಿಸಿ ಡಿಪೋ‌ ಮ್ಯಾನೇಜರ್ ಎಫ್​ಐಆರ್ ವಿರುದ್ಧ​ ದಾಖಲು

ರಾಮನಗರ ಜಿಲ್ಲೆಯಲ್ಲಿ ರಣಮಳೆಗೆ ಮತ್ತೊಬ್ಬರು ಬಲಿ

ರಾಮನಗರ: ಕೆರೆಯ ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ಬಳಿ ನಡೆದಿದೆ. ತಿಮ್ಮಸಂದ್ರ ಗ್ರಾಮದ ಸಿಜೇಂದ್ರ(21) ಮೃತ ಯುವಕ. ನಿನ್ನೆ ಸಂಜೆ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ. ಇಂದು ಕೆರೆಯಿಂದ 300 ಮೀ. ದೂರದಲ್ಲಿ ಶವ ಪತ್ತೆಯಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವು

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ನಾಲೆಯಲ್ಲಿ ನಾಪತ್ತೆಯಾಗಿದ್ದಾನೆ. ಮಸ್ಕಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!