ರಾಯಚೂರು: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ದುರ್ಘಟನೆ ನಡೆದಿದೆ. ಬೈಕ್ಗೆ ಡಿಕ್ಕಿ ಹೊಡೆದು ಭತ್ತದ ಗದ್ದೆಗೆ ಬಸ್ ನುಗ್ಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಬಳಗಾನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಚಿನ್ನದಂಗಡಿ ಕೀಲಿ ಮುರಿದು ಕಳ್ಳತನಕ್ಕೆ ಯತ್ನ:
ವಿಜಯಪುರ: ಚಿನ್ನದ ಅಂಗಡಿಯ ಕೀಲಿ ಮುರಿದು ಕಳ್ಳತನ ಮಾಡಲು ಹೋಗಿ ಅಂಗಡಿ ಮಾಲೀಕನ ಕೈಗೆ ಕಳ್ಳ ಸಿಕ್ಕಿಬಿದ್ದಿರುವಂತಹ ಘಟನೆ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ನಿನ್ನೆ ಸಾಯಂಕಾಲ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಅನಿಲ ಎಂಬ ಯುವಕನಿಂದ ಕಳ್ಳತನಕ್ಕೆ ಯತ್ನಿಸಲಾಗಿದೆ. ಚಿನ್ನದ ಅಂಗಡಿ ಬಾಗಿಲ ಬೀಗ ಒಡೆಯುವಾಗ ಅಂಗಡಿ ಮಾಲೀಕ ಆಗಮಿಸಿದ್ದಾರೆ. ಬಸವರಾಜ್ ಅಂಗಡಿ ಓಂ ಸಾಯಿನಾಥ್ ಜ್ಯುವೆಲರ್ಸ್ ಅಂಗಡಿ ಮಾಲೀಕ.
ಕದೀಮನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ಯಿ ಘಟನೆ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರು ಬಿಎಂಟಿಸಿ ಚಾಲಕ ಆತ್ಮಹತ್ಯೆ ಪ್ರಕರಣ: ಬಿಎಂಟಿಸಿ ಡಿಪೋ ಮ್ಯಾನೇಜರ್ ಎಫ್ಐಆರ್ ವಿರುದ್ಧ ದಾಖಲು
ರಾಮನಗರ ಜಿಲ್ಲೆಯಲ್ಲಿ ರಣಮಳೆಗೆ ಮತ್ತೊಬ್ಬರು ಬಲಿ
ರಾಮನಗರ: ಕೆರೆಯ ಕೋಡಿ ನೀರಿನಲ್ಲಿ ಕೊಚ್ಚಿ ಹೋಗಿ ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹರಿಸಂದ್ರ ಗ್ರಾಮದ ಬಳಿ ನಡೆದಿದೆ. ತಿಮ್ಮಸಂದ್ರ ಗ್ರಾಮದ ಸಿಜೇಂದ್ರ(21) ಮೃತ ಯುವಕ. ನಿನ್ನೆ ಸಂಜೆ ಕೆರೆ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ. ಇಂದು ಕೆರೆಯಿಂದ 300 ಮೀ. ದೂರದಲ್ಲಿ ಶವ ಪತ್ತೆಯಾಗಿದೆ. ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವು
ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಇಬ್ಬರ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲೂಕಿನ ಗುಡುದೂರು ಬ್ರಿಡ್ಜ್ ಬಳಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ನಾಲೆಯಲ್ಲಿ ನಾಪತ್ತೆಯಾಗಿದ್ದಾನೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.