ರಾಯಚೂರು, ಜು.24: ದರ್ವೇಶ್ ಗ್ರೂಪ್(Darvesh group) ಕಂಪನಿಯಿಂದ ಬಹುಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ತೀವ್ರ ಸ್ವರೂಪ ಪಡೆಯುತ್ತಿದೆ. ಈ ಹಿನ್ನಲೆ ಪ್ರಕರಣವನ್ನು ಸಿಐಡಿ(CID)ಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ರಾಯಚೂರಿನ ಸಿಇಎನ್ ಠಾಣೆಯಲ್ಲಿ ವಂಚನೆ ಆರೋಪ ಕುರಿತು ಕೇಸ್ ದಾಖಲಾಗಿತ್ತು. ಸದ್ಯ ಪ್ರಕರಣ ಸಿಐಡಿಗೆ ವರ್ಗಾವಣೆ ಹಿನ್ನೆಲೆ ಶೀಘ್ರದಲ್ಲೇ ಸಿಐಡಿ ತಂಡ ರಾಯಚೂರಿಗೆ ಭೇಟಿ ನೀಡಲಿದ್ದಾರೆ. ಪ್ರಕರಣದ ಸದ್ಯದ ತನಿಖಾ ವರದಿ, ಹೂಡಿಕೆದಾರರ ಹಾಗೂ ಕಂಪನಿ ಮಾಲೀಕರ ಮಾಹಿತಿಯನ್ನ ರಾಯಚೂರು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳಿಂದ ಸಿಐಡಿ ಪಡೆಯಲಿದೆ.
ತಮ್ಮ ಏಜೆಂಟ್ರುಗಳ ಮೂಲಕ ಹಣ ಪಡೆದು ಅವರ ಮೂಲಕವೇ ಗ್ರಾಹಕರಿಗೆ ಬಡ್ಡಿ ನೀಡಲಾಗುತ್ತಿತ್ತು. ಹೀಗಾಗಿ ಸಾವಿರಾರು ಜನ, ಸುಮಾರು 400 ರಿಂದ 500 ಕೋಟಿ ರೂಪಾಯಿಯನ್ನ ಹೂಡಿಕೆ ಮಾಡಿದ್ದಾರೆ. ಆದ್ರೆ, ಇತ್ತೀಚೆಗೆ ಹೋರಾಟಗಾರರು ಇದೇ ಕಂಪನಿ ವಿರುದ್ಧ ಪ್ರತಿಭಟನೆ ನಡೆಸಿ, ಹೂಡಿಕೆದಾರರಲ್ಲೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಆತನನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಈ ಘಟನೆ ಬಳಿಕ ಕೆಲ ಹೂಡಿಕೆದಾರರು ಸೆಲ್ಫಿ ವಿಡಿಯೋ ಮಾಡಿಕೊಂಡು ಹಣ ವಾಪಸ್ ನೀಡದೇ ಇದ್ದಲ್ಲಿ ನದಿಯ ಬ್ರಿಡ್ಜ್ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಕಂಪನಿಗೆ ವಾರ್ನಿಂಗ್ ಕೊಡುತ್ತಿದ್ದಾರೆ.
ಇದನ್ನೂ ಓದಿ:ರಾಯಚೂರಿನಲ್ಲಿ ದರ್ವೇಶ್ ಗ್ರೂಪ್ನಿಂದ ಬಹುಕೋಟಿ ವಂಚನೆ ಆರೋಪ! ಹೂಡಿಕೆದಾರ ಆತ್ಮಹತ್ಯೆಗೆ ಯತ್ನ
ಇನ್ನು ಇಷ್ಟೆಲ್ಲಆರೋಪಗಳು ಬಂದರೂ ಕಂಪನಿ ಮಾತ್ರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡದೇ ಇರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಘಟನೆ ಬಗ್ಗೆ ದರ್ವೇಶ್ ಕಂಪೆನಿಯ ಮಾಲೀಕರಾದ ಮೊಹಮ್ಮದ್ ಹುಸೇನ್ ಸುಜಾ, ಸಯ್ಯದ್ ಮಸ್ಕಿನ್ ಹಾಗೂ ಸಯ್ಯದ್ ವಿರುದ್ದ ರಾಯಚೂರಿನ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಘಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸಿಐಡಿಗೆ ವರ್ಗಾಹಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:48 pm, Wed, 24 July 24