ರಾಯಚೂರಿನಲ್ಲಿ ಒಂದೇ ಕುಟುಂಬದ ಮೂವರ ಕೊಲೆ! ಅಳಿಯನೇ ಹತ್ಯೆ ಮಾಡಿರುವ ಶಂಕೆ

ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿ ಮತ್ತು ಸಾಯಿಗೆ ಮದುವೆ ಆಗಿತ್ತು. ಮದುವೆ ಬಳಿಕ ಆರೋಪಿ ಸಾಯಿ ಹಾಗೂ ವೈಷ್ಣವಿ ಮಧ್ಯೆ ಜಗಳ ಶುರುವಾಗಿತ್ತು. ಆರೋಪಿ ಸಾಯಿ ನಿನ್ನೆ ಅತ್ತೆ ಮನೆಗೆ ಬಂದಿದ್ದ.

ರಾಯಚೂರಿನಲ್ಲಿ ಒಂದೇ ಕುಟುಂಬದ ಮೂವರ ಕೊಲೆ! ಅಳಿಯನೇ ಹತ್ಯೆ ಮಾಡಿರುವ ಶಂಕೆ
ಕೊಲೆಯಾದ ಒಂದೇ ಕುಟುಂಬದ ಮೂವರು
TV9kannada Web Team

| Edited By: sandhya thejappa

Sep 29, 2021 | 12:57 PM

ರಾಯಚೂರು: ಒಂದೇ ಕುಟುಂಬದ ಮೂವರನ್ನು ಕೊಲೆ ಮಾಡಿರುವ ಘಟನೆ ರಾಯಚೂರು ಹೊರವಲಯ ಯರಮರಸ್ನಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದ ಅಳಿಯನೇ ಮೂವರನ್ನು ಹತ್ಯೆಗೈದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಸಂತೋಷಿ(45), ವೈಷ್ಣವಿ(25) ಮತ್ತು ಆರತಿ(16) ಕೊಲೆಯಾಗಿದ್ದಾರೆ. ನಿನ್ನೆ (ಸೆ.28) ಮನೆಯಲ್ಲಿ ಜಗಳವಾಗಿದ್ದು, ಅಳಿಯ ಸಾಯಿ ಎಂಬಾತ ಕೊಲೆ ಮಾಡಿರಬಹುದು ಅಂತ ಅನುಮಾನ ಮೂಡಿದೆ. ರಾಯಚೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಎಸಿಪಿ ಹರಿಬಾಬುರಿಂದ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿ ಮತ್ತು ಸಾಯಿಗೆ ಮದುವೆ ಆಗಿತ್ತು. ಮದುವೆ ಬಳಿಕ ಆರೋಪಿ ಸಾಯಿ ಹಾಗೂ ವೈಷ್ಣವಿ ಮಧ್ಯೆ ಜಗಳ ಶುರುವಾಗಿತ್ತು. ಆರೋಪಿ ಸಾಯಿ ನಿನ್ನೆ ಅತ್ತೆ ಮನೆಗೆ ಬಂದಿದ್ದ. ಈ ವೇಳೆ ಮನೆಯವರ ಜೊತೆ ಜಗಳವಾಗಿದ್ದು, ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂಬ ಶಂಕೆ ಮೂಡಿದೆ. ಮೂವರಿಗೂ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ.

ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾಗೇರಿ ಬಳಿ ಅಪರಿಚಿತ ವ್ಯಕ್ತಿಯ ಬರ್ಬರ ಕೊಲೆಯಾಗಿದೆ. ವ್ಯಕ್ತಿಯನ್ನು ಹತ್ಯೆಗೈದು ಶವಕ್ಕೆ ಬೆಂಕಿಹಚ್ಚಿದ್ದಾರೆ. ಅರೆಬೆಂದ ಶವವನ್ನು ಚೀಲದಲ್ಲಿ ತುಂಬಿ ಎಸೆದಿದ್ದಾರೆ. ಅಂದಾಜು 45 ವರ್ಷ ವಯಸ್ಸಿನ ವ್ಯಕ್ತಿ ಕೊಲೆಯಾಗಿದ್ದಾನೆ ಎಂದು ಊಹಿಸಲಾಗಿದೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವಾಟರ್‌ಮ್ಯಾನ್ ಆತ್ಮಹತ್ಯೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ವಾಟರ್‌ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದಿಂದ ತೆಗೆದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ

ಮೇಕೆಯ ಬೆನ್ನೇರಿ ಕುಳಿತು ಹಣ್ಣುಗಳನ್ನು ಸವಿಯುತ್ತಿರುವ ಮರಿ ಮಂಗನ ವಿಡಿಯೋ ವೈರಲ್; 12 ಮಿಲಿಯನ್ ವೀಕ್ಷಣೆ ಪಡೆದ ದೃಶ್ಯವಿದು

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

(Accused Son in law kills Single family Three members in Raichur)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada