ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಚರಂಡಿ ಬಂದ್ ಮಾಡಿಸಿ ಎಂದು ಟಿವಿ9 ಕ್ಯಾಮೆರಾ ಎದುರು ಅಳಲು ತೋಡಿಕೊಂಡಿದ್ದಾರೆ.

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ
ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡ ಗ್ರಾಮಸ್ಥ
Follow us
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು

Updated on:Aug 10, 2023 | 12:34 PM

ರಾಯಚೂರು, ಆ.10: ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ(Contaminated Water) ಪ್ರಕರಣ ಸಂಭವಿಸಿದೆ. ಸುಮಾರು ಮೂರು ಸಾವಿರ ಜನರಿರೋ ಗ್ರಾಮದಲ್ಲಿ 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಈ ಹಿಂದೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿತ್ತು. ಇದೀಗ ಮತ್ತೆ ರಾಯಚೂರು ಜಿಲ್ಲೆಯ ಮತ್ತೊಂದು ತಾಲೂಕಿನಲ್ಲಿ ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ ಬಂದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಚರಂಡಿ ಬಂದ್ ಮಾಡಿಸಿ ಎಂದು ಟಿವಿ9 ಕ್ಯಾಮೆರಾ ಎದುರು ಅಳಲು ತೋಡಿಕೊಂಡಿದ್ದಾರೆ.

ಚಿತ್ತಾಪುರ ಪಂಚಾಯಿತಿ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ಸುಮಾರು 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮನೆಯಂಗಳಲ್ಲಿ ಮಲಗಿ ಅಸ್ವಸ್ಥರು ಪರದಾಡುತ್ತಿರುವ ದೃಶ್ಯಗಳು ಗ್ರಾಮದಲ್ಲಿ ಕಂಡು ಬಂದಿದ್ದು ಕರಳು ಹಿಂಡುವಂತಿದೆ. ಇಷ್ಟೆಲ್ಲಾ ಆದರೂ ಚಿತ್ತಾಪುರ ಪಂಚಾಯಿತಿ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ನಿತ್ಯ ನಾಲ್ಕೈದು ಹೊಸ ಪ್ರಕರಣಗಳು ಉಲ್ಬಣವಾಗುತ್ತಿವೆ. ಗ್ರಾಮದಲ್ಲಿ ಸ್ವಚ್ಛತೆ ಬಗ್ಗೆ ಕ್ರಮವಹಿಸದೇ ಚಿತ್ತಾಪುರ ಪಂಚಾಯಿತಿ ದಿವ್ಯ ನಿರ್ಲಕ್ಷ್ಯ ಮಾಡಿದ್ದು ಕಳೆದ ಒಂದು ವಾರದಿಂದ ಸಮಸ್ಯೆ ಉಲ್ಭವಾಗಿದ್ರೂ ಯಾವುಏ ಕ್ರಮಕ್ಕೆ ಮುಂದಾಗಿಲ್ಲ. ಸ್ವಚ್ಛತೆ ಬಗ್ಗೆ ಚಿತ್ತಾಪುರ ಪಂಚಾಯಿತಿ ಪಿಡಿಓ ಶಶಿಕಲಾ ಪಾಟೀಲ್ ನಿರ್ಲಕ್ಷ್ಯ ತೋರಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ 6 ಜನ ಸಾವು ಪ್ರಕರಣ: ಕಾಲರಾ ಮಾದರಿಯ ಬ್ಯಾಕ್ಟೀರಿಯ ಪತ್ತೆ, ಕೇಸ್​ ಬುಕ್

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರಿನ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಕಳೆದ ಮೇ ತಿಂಗಳಲ್ಲಿ ಅರಕೇರಾ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕ ಮೃತಪಟ್ಟಿದ್ದ. ಪ್ರಕರಣ ಸಂಬಂಧ ಕರ್ತವ್ಯಲೋಪ ಆರೋಪದಡಿ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿಯ ಪಿಡಿಒ ರೇಣುಕಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್​ ಸಿಇಒ ಶಶಿಧರ್ ಆದೇಶ ಹೊರಡಿಸಿದ್ದರು.

ಇನ್ನು ಅದೇ ತಿಂಗಳಲ್ಲಿ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅನೇಕ ಜನರು ಅಸ್ವಸ್ಥಗೊಂಡಿದ್ದರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಬಳಲಿದ್ದರು. ಈ ಸಂಬಂಧ ಸರ್ಕಾರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತ್ತು. ಘಟನೆ ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಸೂಚಿಸಿತ್ತು. ಆದರೂ ಕೂಡ ಈಗ ಮತ್ತೆ ಘಟನೆ ಮರುಕಳಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನ ನರಳುವಂತಾಗಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:48 am, Thu, 10 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು