ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬ ಸಾವು; ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, ಇಬ್ಬರು ಅಧಿಕಾರಿಗಳ ಮೇಲೆ ಕ್ರಮ

ನೀರಿನ ಶುದ್ದೀಕರಣ ಹಾಗು ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆದಿದೆ. ಶುದ್ದೀಕರಣ ಘಟಕದಲ್ಲಿನ ಪ್ರಯೋಗಾಲಯ ಎರಡು ತಿಂಗಳಿಂದ ಕಾರ್ಯನಿರ್ವಹಿಸಿಲ್ಲ,

ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮತ್ತೊಬ್ಬ ಸಾವು; ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ, ಇಬ್ಬರು ಅಧಿಕಾರಿಗಳ ಮೇಲೆ ಕ್ರಮ
ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ
Follow us
TV9 Web
| Updated By: ಆಯೇಷಾ ಬಾನು

Updated on:Jun 08, 2022 | 1:33 PM

ರಾಯಚೂರು: ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಮೂರು ಜನ ಮೃತಪಟ್ಟಿದ್ದಾರೆ. ಆದ್ರೆ ಈಗ ಈ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಅಂದ್ರೂನ್ ಖಿಲ್ಲಾ ನಿವಾಸಿ ಅಬ್ದುಲ್ ಕರೀಂ(50) ಇಂದು ಸಾವನ್ನಪ್ಪಿದ್ದಾರೆ. ಕಲುಷಿತ ನೀರು ಕುಡಿದಿದ್ದರಿಂದ ಅಬ್ದುಲ್ ವಾಂತಿ ಹಾಗೂ ಭೇದಿ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅಬ್ದುಲ್ ಕಳೆದ 3 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಕಿಡ್ನಿ ವೈಫಲ್ಯದಿಂದ ಎಲೆಕ್ಟ್ರಿಷಿಯನ್‌ ಅಬ್ದುಲ್ ಕರೀಂ ಮೃತಪಟ್ಟಿದ್ದಾರೆ. ಈ ಮೂಲಕ ಕಲುಷಿತ ನೀರು ಕುಡಿದು ಈವರೆಗೆ ನಾಲ್ವರು ಕೊನೆಯುಸಿರೆಳೆದಿದ್ದಾರೆ.

ಇನ್ನು ಪ್ರಕರಣ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ಅರ್ಚನಾ ನೇತೃತ್ವದ ತಂಡ ರಾಂಪುರ ಬಳಿಯ ನೀರು ಶುದ್ಧೀಕರಣ ಘಟಕದಲ್ಲಿ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಲುಷಿತ ನೀರು ಸರಬರಾಜಿಗೆ ಸಂಬಂಧಿಸಿದ ಲೋಪ ಬಗ್ಗೆ ತನಿಖೆ ನಡೆಯುತ್ತಿದೆ. ಮೂರು ದಿನಗಳಲ್ಲಿ ವರದಿ ನೀಡಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆ ರಾಯಚೂರು ನಗರಕ್ಕೆ ಆಗಮಿಸಿರುವ ತನಿಖಾ ತಂಡ ತನಿಖೆ ನಡೆಸುತ್ತಿದೆ. ಇದನ್ನೂ ಓದಿ: ವಿಜಯೇಂದ್ರ ಚೆನ್ನಾಗಿ ಕೆಲಸ ಮಾಡುತ್ತಿದ್ದಾನೆ, ಅವನಿಗೆ ಉತ್ತಮ ಭವಿಷ್ಯವಿದೆ ಎಂದರು ಯಡಿಯೂರಪ್ಪ

ಈ ಬಗ್ಗೆ ಮಾತನಾಡಿರುವ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಅರ್ಚನಾ, ನೀರಿನ ಶುದ್ದೀಕರಣ ಹಾಗು ಸರಬರಾಜು ಮಾಡುವಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ. ಇಬ್ಬರು ಅಧಿಕಾರಿಗಳ ಮೇಲೆ ಕ್ರಮವಾಗಿದೆ. ಉಳಿದವರ ತಪ್ಪಿನ ಬಗ್ಗೆ ಪರಿಶೀಲನೆ ನಡೆದಿದೆ. ಶುದ್ದೀಕರಣ ಘಟಕದಲ್ಲಿನ ಪ್ರಯೋಗಾಲಯ ಎರಡು ತಿಂಗಳಿಂದ ಕಾರ್ಯನಿರ್ವಹಿಸಿಲ್ಲ, ಸಿಬ್ಬಂದಿಯೂ ಇಲ್ಲ. ನೀರು ಶುದ್ದೀಕರಣಕ್ಕೆ ಬೇಕಾದ ಅಗತ್ಯ ರಾಸಾಯನಿಕಗಳನ್ನ ಸಂಗ್ರಹಿಸಿಟ್ಟಿಲ್ಲ. ನಗರದಲ್ಲಿ ನೀರು ಸರಬರಾಜು ಮಾಡುವ ಪೈಪ್ ಲೈನ್ ಬದಲಾಯಿಸುತ್ತಿದ್ದಾರೆ. ಘಟಕದ ಜೊತೆ ಪೈಪ್ ಲೈನ್ ಬಗ್ಗೆಯೂ ಮಾಹಿತಿ ಕಲೆ ಹಾಕುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಸದ್ಯ ಪ್ರಸ್ತಾಪವಿಲ್ಲ. ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೀರಿನ ಶುದ್ದೀಕರಣ ಹಾಗೂ ಸರಬರಾಜು ವ್ಯವಸ್ಥೆಯ ಲೋಪಗಳನ್ನ ಪರಿಶೀಲಿಸುತ್ತಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ನಗರಸಭೆಗೆ ಸೂಚನೆ ನೀಡುತ್ತಿದ್ದೇವೆ ಎಂದು ಅರ್ಚನಾ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಾಲ್ವರು ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ನಾಲ್ವರು ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿರುವ ಬಗ್ಗೆ ಮಾಹಿತಿ ಇದೆ. ಇಂತಹ ಘಟನೆ ನಡೆಯಬಾರದಿತ್ತು, ನನಗೂ ಬಹಳ ನೋವಾಗಿದೆ. ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ಡಿಸಿಗೆ ಸೂಚನೆ ನೀಡಿದ್ದೇನೆ. ಸ್ಥಳೀಯ ಆಡಳಿತ, ಸರ್ಕಾರದಿಂದ 15 ಲಕ್ಷ ಪರಿಹಾರ ನೀಡಿದ್ದೇವೆ. ನನ್ನ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದರಿಂದ ಇಲ್ಲೇ ಇದ್ದೇನೆ. ಸ್ವಕ್ಷೇತ್ರದಲ್ಲಿ ಬಿಡುವಿಲ್ಲದೆ ಜನರ ಸಮಸ್ಯೆ ಆಲಿಸುತ್ತಿದ್ದೇನೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹುಬ್ಬಳ್ಳಿಯಲ್ಲಿ ತಿಳಿಸಿದ್ದಾರೆ.

Published On - 1:06 pm, Wed, 8 June 22

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು