Bharat Jodo Yatra: ಇಂದಿನಿಂದ ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ, ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಭಾಗಿ ಸಾಧ್ಯತೆ

ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಯಾತ್ರೆಯ ವೇಳೆ ನಿತ್ಯ 10ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸುವ ಗುರಿ ಇರಿಸಿಕೊಳ್ಳಲಾಗಿದೆ.

Bharat Jodo Yatra: ಇಂದಿನಿಂದ ರಾಯಚೂರಿನಲ್ಲಿ ಭಾರತ್ ಜೋಡೊ ಯಾತ್ರೆ, ರಾಹುಲ್ ಗಾಂಧಿ ಜೊತೆ ಪ್ರಿಯಾಂಕಾ ಭಾಗಿ ಸಾಧ್ಯತೆ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 21, 2022 | 7:26 AM

ರಾಯಚೂರು: ರಾಹುಲ್ ಗಾಂಧಿ (Rahul Gandhi) ನಾಯಕತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ  ಪಾದಯಾತ್ರೆಯು (Bharat Jodo Yatra) ಇಂದಿನಿಂದ (ಅ 21) ಸಂಚರಿಸಲಿದೆ. ಒಟ್ಟು ಮೂರು ದಿನ, ಅಂದರೆ ಅ 23ರವರೆಗೆ ಜಿಲ್ಲೆಯ ವಿವಿಧೆಡೆ ಭಾರತ್ ಜೋಡೊ ಪಾದಯಾತ್ರೆಯ ಅಂಗವಾಗಿ ಕಾಂಗ್ರೆಸ್ ನಾಯಕರು ಸಂಚರಿಸಲಿದ್ದಾರೆ. ನಾಳೆ ಯಾತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸುವ ನಿರೀಕ್ಷೆಯಿದೆ. ಈ ಬಗ್ಗೆ ರಾಜ್ಯ ನಾಯಕರು ಈಗಾಗಲೇ ಈಗಾಗಲೇ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರು ನಿನ್ನೆ (ಅ 20) ರಾತ್ರಿ ಮಂತ್ರಾಲಯ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನದ ದರ್ಶನ ಪಡೆದು, ಮಂತ್ರಾಲಯದಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಮಂತ್ರಾಲಯದಿಂದ ರಾಷ್ಟ್ರೀಯ ಹೆದ್ದಾರಿ 167ರ ಮೂಲಕ ಯಾತ್ರೆ ಆರಂಭವಾಗಿದೆ.

ತುಂಗಭದ್ರಾ ಸೇತುವೆಯ ಮೂಲಕ ಮುನ್ನಡೆಯಲಿರುವ ಯಾತ್ರೆಯು ಗಿಲ್ಲೆಸುಗೂರು, ಕೆರೆಬುದೂರು, ಯರಗೇರಾ, ರಾಯಚೂರು ನಗರ, ಶಕ್ತಿನಗರ ಮಾರ್ಗದಲ್ಲಿ ಮುನ್ನಡೆಯಲಿದೆ. ಈ ವೇಳೆ ರೈತರು, ಸ್ಥಳೀಯರ ಜೊತೆಗೆ ರಾಹುಲ್ ಗಾಂಧಿ ಸಂವಾದ ನಡೆಸಲಿದ್ದಾರೆ. ನಾಳೆ (ಅ 22) ರಾಯಚೂರಿನ ಗ್ರಾಮೀಣ ಭಾಗದಿಂದ ನಗರಕ್ಕೆ ಯಾತ್ರೆ ತಲುಪಲಿದೆ. ರಾಯಚೂರು ಜಿಲ್ಲೆಯಲ್ಲಿ ನಡೆಯಲಿರುವ ಯಾತ್ರೆಯ ವೇಳೆ ನಿತ್ಯ 10ರಿಂದ 20 ಸಾವಿರ ಕಾರ್ಯಕರ್ತರನ್ನು ಸೇರಿಸುವ ಗುರಿ ಇರಿಸಿಕೊಳ್ಳಲಾಗಿದೆ. ಅ 23ರ ಬೆಳಿಗ್ಗೆ ರಾಯಚೂರಿನಿಂದ ಕೃಷ್ಣಾ ನದಿ ಸೇತುವೆ ಮಾರ್ಗವಾಗಿ ಯಾತ್ರೆಯು ತೆಲಂಗಾಣಕ್ಕೆ ತೆರಳಲಿದೆ.

ಬಿಗಿ ಬಂದೋಬಸ್ತ್

ರಾಹುಲ್ ಗಾಂಧಿ ಯಾತ್ರೆಗೆ ರಾಯಚೂರು ಜಿಲ್ಲಾ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಮೂರು ದಿನಗಳ ಯಾತ್ರೆಯ ಭದ್ರತೆಗೆ 2,000 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ,6 ಡಿಎಸ್​ಪಿ, 26 ಸರ್ಕಲ್ ಇನ್​ಸ್ಪೆಪೆಕ್ಟರ್, 73 ಪಿಎಸ್​ಐ, 173 ಎಎಸ್​ಐ, 1,408 ಕಾನ್​ಸ್ಟೆಬಲ್, 96 ಮಹಿಳಾ ಸಿಬ್ಬಂದಿ, 200 ಹೋಮ್ ಗಾರ್ಡ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪರ್ಯಾಯ ಮಾರ್ಗ

ಮಂತ್ರಾಲಯದ ರಾಷ್ಟ್ರೀಯ ಹೆದ್ದಾರಿ ಮೂಲಕವೇ ಭಾರತ್ ಜೋಡೊ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೆರಳಲಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ 5ರಿಂದ ರಾತ್ರಿ‌ 7 ಗಂಟೆಯವರೆಗೂ ಭಾರಿ ಸರಕು ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

Published On - 7:26 am, Fri, 21 October 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್