AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ತಂಗಿಗೆ ಮೆಸೇಜ್ ಮಾಡಬೇಡ ಎಂದು ವಾರ್ನಿಂಗ್ ಕೊಡಲು ಹೋದ ಅಣ್ಣನಿಗೆ ಚಾಕು ಇರಿತ, ಆರೋಪಿಗಳಿಬ್ಬರಿಗೆ ಗಾಯ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದೆ. ತನ್ನ ತಂಗಿಗೆ ಮೆಸೇಜ್ ಮಾಡಬೇಡ ಎಂದು ವಾರ್ನ್ ಮಾಡಲು ಹೋದ ಅಣ್ಣನನ್ನ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

Raichur News: ತಂಗಿಗೆ ಮೆಸೇಜ್ ಮಾಡಬೇಡ ಎಂದು ವಾರ್ನಿಂಗ್ ಕೊಡಲು ಹೋದ ಅಣ್ಣನಿಗೆ ಚಾಕು ಇರಿತ, ಆರೋಪಿಗಳಿಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 24, 2023 | 1:27 PM

Share

ರಾಯಚೂರು: ತಂಗಿಗೆ ಮೆಸೇಜ್ ಮಾಡ ಬೇಡ ಎಂದು ಬುದ್ಧಿವಾದ ಹೇಳಲು ಹೋಗಿದ್ದ ಅಣ್ಣನ ಹತ್ಯೆ(Murder) ಮಾಡಲಾಗಿರುವ ಭೀಕರ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ದೇವರಾಜ್(23) ಎಂಬಾತನನ್ನು ಹತ್ಯೆ ಮಾಡಲಾಗಿದೆ. ಆರೋಪಿಗಳಾದ ಬಸವರಾಜ್ ಹಾಗೂ ಹನುಮಂತ ಎಂಬುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿ ಬಸವರಾಜ್, ಮೃತ ದೇವರಾಜ್​ನ ತಂಗಿ ಹಿಂದೆ ಬಿದ್ದಿದ್ದ. ಆಕೆಗೆ ಪ್ರೀತಿಸುವಂತೆ ಕಿರುಕುಳ ನೀಡ್ತಿದ್ದ. ಮೆಸೇಜ್ ಮಾಡೋದು, ಸಿಕ್ಕಸಿಕ್ಕಲ್ಲಿ ಮಾತನಾಡಿಸುವುದನ್ನು ಮಾಡುತ್ತಿದ್ದ. ಈ ಬಗ್ಗೆ ತಂಗಿ ಅಣ್ಣನ ಬಳಿ ಅಳಲು ತೋಡಿಕೊಂಡಿದ್ದಳು. ಹೀಗಾಗಿ ದೇವರಾಜ್ ಆರೋಪಿ ಬಸವರಾಜ್​ಗೆ ಬೈದು ಬುದ್ಧಿವಾದ ಹೇಳಿದ್ದ. ಇದರಿಂದ ಸಿಟ್ಟಿಗೆದ್ದ ಬಸವರಾಜ್ ಪಾಠ ಕಲಿಸಲೇ ಬೇಕು ಎಂದು ನಿರ್ಧರಿಸಿ ತನ್ನ ಸ್ನೇಹಿತ ಲಿಂಗಣ್ಣನಿಂದ ಮೆಸೇಜ್ ಮಾಡಿಸಿದ್ದ. ಇದರಿಂದ ಮತ್ತಷ್ಟು ಕೆರಳಿದ ಮೃತ ದೇವರಾಜ್ ಇವನಿಗೆ ಈ ರೀತಿ ಹೇಳಿದ್ರೆ ಅರ್ಥ ಆಗಲ್ಲ ಎಂದು ನಿನ್ನೆ(ಜೂನ್ 23) ಮತ್ತೆ ಮಾತಾಡಲು ಹೋಗಿದ್ದಾನೆ. ಈ ವೇಳೆ ದೇವರಾಜ್ ಹಾಗೂ ಬಸವರಾಜ್ ಕಡೆಯವರ ಮಧ್ಯೆ ಗಲಾಟೆ ನಡೆದಿದೆ. ಆಗ ಬಸವರಾಜ್ ಚಾಕುವಿನಿಂದ ಇರಿದು ದೇವರಾಜ್​ನನ್ನು ಹತ್ಯೆಗೈದಿದ್ದಾನೆ. ಘಟನೆಯಲ್ಲಿ ಆರೋಪಿಗಳಾದ ಬಸವರಾಜ್ ಹಾಗೂ ಹನುಮಂತನಿಗೂ ಗಾಯಗಳಾಗಿದ್ದು ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಜಾತಿ ನಿಂದನೆ ಆರೋಪದಡಿ ಮೃತ ದೇವರಾಜ್ ಹಾಗೂ ಮೌನೇಶ್ ವಿರುದ್ಧ ಪ್ರತಿ ದೂರು ದಾಖಲಾಗಿದೆ.

ಇದನ್ನೂ ಓದಿ: Belagavi News: ಪ್ರಿಯಕರನ ಜೊತೆ ಸೇರಿಕೊಂಡು ಮಗನನ್ನೇ ಕೊಲೆ ಮಾಡಿದ ತಾಯಿ

ನದಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಧಾರ ನದಿಗೆ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಕಲೇಶಪುರ ಬಾಳೆಗದ್ದೆ ನಿವಾಸಿ ಧರ್ಮಯ್ಯ (40) ಮೃತ ದುರ್ದೈವಿ. ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಧರ್ಮಯ್ಯ‌ ಅವರು ನದಿಗೆ ಹಾರು ಪ್ರಾಣ ಬಿಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನದಿ ಬದಿಯಲ್ಲಿ ಧರ್ಮಯ್ಯ ಅವರ ಶೂ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡಬ ಪೊಲೀಸರು, ಶೌರ್ಯ ತಂಡದ ಸದಸ್ಯರು ಮೃತದೇಹಕ್ಕಾಗಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್