ರಾಯಚೂರು, ಸೆ.08: ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿದ್ದು, ಈ ವೇಳೆ ಜಗಳ ಬಿಡಿಸಲು ಹೋಗಿದ್ದ 60 ವರ್ಷದ ವೃದ್ದ ಸಾವನ್ನಪ್ಪಿದ ಘಟನೆ ರಾಯಚೂರಿನ ಸಿಂಧನೂರು(Sindhanur) ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ. ವೀರಬಸಪ್ಪ ಮೃತ ವ್ಯಕ್ತಿ. ನಿನ್ನೆ(ಸೆ.07) ಏರಿಯಾದಲ್ಲಿ ಕೂರಿಸಲಾಗಿದ್ದ ಗಣೇಶನ ವಿಸರ್ಜನೆ ವೇಳೆ ಗಲಾಟೆ ನಡೆದಿದ್ದು, ಅಲ್ಲಿಯೇ ಇದ್ದ ವೀರಬಸಪ್ಪ ಜಗಳ ಬಿಡಿಸಲು ಹೋಗಿದ್ದ.
ಆಗ ಮೃತ ವೀರಬಸಪ್ಪ ಕೆನ್ನೆಗೆ ಆರೋಪಿ ಮಹೇಶ್ ಹೊಡೆದಿದ್ದಾನೆ. ಈ ವೇಳೆ ಕುಸಿದು ಬಿದ್ದು ವೃದ್ದ ಸಾವನ್ನಪ್ಪಿದ್ದಾರೆ. ಈ ಕುರಿತು ಮೃತನ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ನೀಡಿದ್ದಾರೆ. ಈ ಬಗ್ಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಓರ್ವ ಅಪ್ರಾಪ್ತ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹೇಶ್, ಪರಶುರಾಮ ಹಾಗೂ ಓರ್ವ ಅಪ್ರಾಪ್ತ ಬಂಧಿತರು.
ಇದನ್ನೂ ಓದಿ:ಮಂಗಳೂರು: ಎರಡು ದಿನ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಭೀಕರ ರಸ್ತೆ ಅಪಘಾತದಲ್ಲಿ ಸಾವು, ಪತಿ ಗಂಭೀರ
ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ದೋಣಿಮಲೈ ಕ್ರಾಸ್ ಬಳಿಯ ನಾರಿಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಡೂರು ನಿವಾಸಿ ಫಾರುಕ್ (45) ಮೃತ ದುರ್ದೈವಿ. ಬಾಬಯ್ ದೇವಸ್ಥಾನಕ್ಕೆ ಹೋಗಿ ಮರಳುವ ವೇಳೆ ದುರ್ಘಟನೆ ನಡೆದಿದೆ. ಸೇತುವೆ ಮೇಲಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದಿರೋ ಶಂಕೆ ವ್ಯಕ್ತವಾಗಿದ್ದು, ಹಳ್ಳದ ನೀರಿನಿಂದ ಮೃತದೇಹವನ್ನು ಅಧಿಕಾರಿಗಳು ಹೊರತೆಗೆದಿದ್ದಾರೆ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ಥತೆ ಎಂದು ಹೇಳಲಾಗುತ್ತಿದೆ. ಈ ಕುರಿತು UDR ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ