Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ

ಅಕ್ರಮ ಮರಳು ಅಡ್ಡೆ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರು ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರ ನಡೆದಿದೆ. ಇದರ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಅವರು ಆರೋಪ ಮಾಡಿದ್ದಾರೆ.

Raichur: ಮರಳು ಅಡ್ಡೆಗಳ ಮೇಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​ ದಾಳಿ
ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್​​
Follow us
Rakesh Nayak Manchi
|

Updated on: Jun 23, 2023 | 9:08 AM

ರಾಯಚೂರು: ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಮಾಹಿತಿ ತಿಳಿದ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ (Kariyamma Nayak) ಅವರು ತಮ್ಮ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ದಂಧೆ (Sand Mining) ನಡೆಸಲಾಗುತ್ತಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ಬೆಂಬಲಿಗರೊಂದಿಗೆ ದಾಳಿ ನಡೆಸಿದ ಶಾಸಕಿ, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ ದೇವದುರ್ಗ (Devadurga) ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಜೆಸಿಬಿ, ಮೂರು ಟಿಪರ್​​ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮರಳು ದಂಧೆಯಲ್ಲಿ ಅಧಿಕಾರಿಗಳೇ ಶಾಮೀಲಾಗಿದ್ದಾರೆಂದು ಆರೋಪ ಕೇಳಿಬಂದಿದ್ದು, ಪ್ರಕರಣ ದಾಖಲಿಸಿಕೊಂಡು ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರಿಯಮ್ಮ ನಾಯಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Illegal Sand Mafia: ಭೀಮಾ ತೀರದಲ್ಲಿ ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್​​ಕಾನ್​ಸ್ಟೇಬಲ್​ ಭಯಾನಕ ಹತ್ಯೆ

ಕಾರ್ಯಕ್ರಮ ಮುಗಿಸಿ ಹೋಗೊವಾಗ ಮರಳು ಟಿಪ್ಪರ್ ಅಡ್ಡಹಾಕಿದ ಬಗ್ಗೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್, ನನ್ನನ್ನ ಲಾರಿ ಹತ್ತಿಸಿ ಸಾಯಿಸುತ್ತೇನೆ ಅಂತಾರೆ. ತಾಕತ್ ಇದ್ದರೆ ಬನ್ನಿ, ಇಲ್ಲೆ ಇರುತ್ತೇನೆ ಬಂದು ಕೊಲ್ಲಿ ಅಂತ ಚಾಲೆಂಜ್ ಹಾಕಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಶಾಸಕರಿಗೆ (ಶಿವನಗೌಡ ನಾಯಕ್)ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳೇ ಅಕ್ರಮ ಮರಳು ದಂಧೆಗೆ ಹೊಣೆಗಾರರಾಗಿದ್ದು, ಈ ಸಂಬಂಧ ಕ್ರಮ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ