ರಾಯಚೂರಿನಲ್ಲಿ ಮೈಮೇಲೆ ಚರಂಡಿ ನೀರು ಸುರಿದುಕೊಂಡು ಪ್ರತಿಭಟನೆ

ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಸತೀಶ್, ಸಫಾಯಿ ಕರ್ಮಚಾರಿಗಳ ತುರ್ತು ಸಭೆ ಕರೆದಿದ್ದಾರೆ. 80 ಜನರಿಗೆ ಗುರುತಿನ ಚೀಟಿ ನೀಡುವ ಕುರಿತು ವಿಶೇಷ ವರದಿ ನೀಡಲು ಖಡಕ್ ಸೂಚನೆ ನೀಡಿದ್ದಾರೆ.

ರಾಯಚೂರಿನಲ್ಲಿ ಮೈಮೇಲೆ ಚರಂಡಿ ನೀರು ಸುರಿದುಕೊಂಡು ಪ್ರತಿಭಟನೆ
ಚರಂಡಿ ನೀರು ಸುರಿದುಕೊಂಡು ಪ್ರತಿಭಟನೆ
Follow us
TV9 Web
| Updated By: sandhya thejappa

Updated on:Sep 21, 2021 | 2:51 PM

ರಾಯಚೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಮೈಮೇಲೆ ಚರಂಡಿ ನೀರು ಸುರಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ. ಸಫಾಯಿ ಕರ್ಮಚಾರಿಗಳ ಗುರುತಿನ ಚೀಟಿಗಾಗಿ ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ತಡೆದರೂ ಚರಂಡಿ ನೀರಿನಲ್ಲಿ ಕುಳಿತು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸಫಾಯಿ ಕರ್ಮಾಚಾರಿ ಗೀತಾಸಿಂಗ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪೊಲೀಸರ ಎದುರೇ ಮೈ ಮೇಲೆ ನೀರು ಸುರಿದುಕೊಂಡಿದ್ದಾರೆ.

ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ ಸತೀಶ್, ಸಫಾಯಿ ಕರ್ಮಚಾರಿಗಳ ತುರ್ತು ಸಭೆ ಕರೆದಿದ್ದಾರೆ. 80 ಜನರಿಗೆ ಗುರುತಿನ ಚೀಟಿ ನೀಡುವ ಕುರಿತು ವಿಶೇಷ ವರದಿ ನೀಡಲು ಖಡಕ್ ಸೂಚನೆ ನೀಡಿದ್ದಾರೆ. ಜೊತಗೆ ತಕ್ಷಣ ಗುರುತಿನ ಚೀಟಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಸತೀಶ್, ಜಿಲ್ಲೆಯ ಸಫಾಯಿ‌ ಕರ್ಮಚಾರಿಗಳು ತಮಗೆ ಐಡಿ ಕಾರ್ಡ್​ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಆಯೋಗದಿಂದ ಕೊಡುವ ಗುರುತಿನ ಚೀಟಿ ಅವರಿಗೆ ಕೊಟ್ಟರೆ ಅದರಿಂದ ಬಹಳಷ್ಟು ಲಾಭವಿದೆ. ಈಗಾಗಲೇ ಆರು ಜನರಿಗೆ ಸಿಕ್ಕಿದೆ. 80 ಜನರಿಗೆ ಮರುಪರಿಶೀಲನೆ ಆಗಿದೆ. ಸರ್ಕಾರದಿಂದ ಅನುಮೋದನೆ ಬಂದರೆ ಕಾರ್ಡ್​ನ ಕೊಡುತ್ತೇವೆ. ಇದರ ಜೊತೆಗ ಕಾರ್ಡ್​ನಿಂದ ಸಿಗುವ ಸೌಲಭ್ಯಗಳನ್ನು ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ಮದುವೆ; ಚಿಕ್ಕಮಗಳೂರು ಡಿಸಿಯಿಂದ ಗೀತಾಗೆ ನೋಟಿಸ್

ಬೆಚ್ಚಿಬೀಳಿಸುವ ಸುದ್ದಿ: ನಾಯಿಕೊಡೆಗಳಂತೆ ಹುಟ್ಕೊಂಡಿದ್ದ ಕಾಂಡೋಮ್ ಕತೆಗೆ ಬಿಗ್ ಟ್ವಿಸ್ಟ್! ಸುರಂಗಮಾರ್ಗದಲ್ಲಿ ನಡೆಯುತ್ತಿದೆ ವೇಶ್ಯಾವಾಟಿಕೆ

(different protest front of dc office in raichur)

Published On - 2:47 pm, Tue, 21 September 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ