Kuruba Community: ಕುರುಬ ಸಮುದಾಯವನ್ನು ಕಡೆಗಣಿಸಬೇಡಿ, ಕಾಂಗ್ರೆಸ್​ಗೆ ಸಿದ್ದರಾಮಾನಂದಪುರಿ ಸ್ವಾಮೀಜಿ ಎಚ್ಚರಿಕೆ

ಕಾಂಗ್ರೆಸ್​​ನಲ್ಲಿ ದೇವರಾಜ್ ಅರಸ್ ಕಾಲದಲ್ಲಿ 25 ಟಿಕೆಟ್ ನೀಡುವುದನ್ನು ನೋಡಿದ್ದೇವೆ. ಆದರೆ ಇದೀಗ ಕುರುಬ ಸಮುದಾಯಕ್ಕೆ 15 ಸ್ಥಾನಕ್ಕೆ ಇಳಿದಿದೆ. ಈ ಬಾರಿ ಕಾಂಗ್ರೆಸ್​​ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕುರುಬ ಸಮುದಾಯದ ಆರು ಜನಕ್ಕೆ ಟಿಕೆಟ್ ನೀಡಲಾಗಿದೆ.

Kuruba Community: ಕುರುಬ ಸಮುದಾಯವನ್ನು ಕಡೆಗಣಿಸಬೇಡಿ, ಕಾಂಗ್ರೆಸ್​ಗೆ ಸಿದ್ದರಾಮಾನಂದಪುರಿ ಸ್ವಾಮೀಜಿ ಎಚ್ಚರಿಕೆ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 28, 2023 | 5:21 PM

ಕುರುಬ ಸಮುದಾಯಕ್ಕೆ ( Kuruba community) ಅನ್ಯಾಯವಾಗಿದೆ, ಮುಂದೆ ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಈ ಸಮುದಾಯ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದಂತೆ ಜಾತಿ ಸಮೀಕರಣಗಳು, ಜಾತಿ ರಾಜಕೀಯಗಳು ಶುರುವಾಗಿದೆ. ಮೂರು ಪಕ್ಷಗಳು ಮದಗಜಗಳಂತೆ ಊರು ಊರು ಸುತ್ತಾಡಿ ಈ ಬಾರಿ ಪಕ್ಷವನ್ನು ಅಧಿಕಾರಿಕ್ಕೆ ತರಬೇಕು ಎಂಬ ಹಂಬಲದಲ್ಲಿದೆ. ಈ ಮಧ್ಯೆ ಸರ್ಕಾರ ಮಿಸಲಾತಿ ಸರ್ಕಸ್ ಕೂಡ ಮಾಡುತ್ತಿದೆ. ಇದೀಗ ಕಾಂಗ್ರೆಸ್ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಅನೇಕ ಕಾಂಗ್ರೆಸಿಗರೇ ಅಸಮಾಧಾನ ಹೊರ ಹಾಕಿದ್ದಾರೆ. ಇದರ ಜತೆಗೆ ಕುರುಬ ಸಮುದಾಯವನ್ನು ಕಾಂಗ್ರೆಸ್ ಪಕ್ಷ ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ನಮ್ಮ ಕುರುಬ ಸಮುದಾಯವನ್ನ ಕಡೆಗಣಿಸದಂತೆ ಕಾಂಗ್ರೆಸ್​​ಗೆ ನೇರ ಎಚ್ಚರಿಕೆಯನ್ನು ಕುರುಬ ಸಮುದಾಯದ ಸ್ವಾಮೀಜಿಗಳು ನೀಡಿದ್ದಾರೆ.

ರಾಯಚೂರು ನಗರದಲ್ಲಿ ದೇವದುರ್ಗ ತಾಲ್ಲೂಕಿನ ತಿಂಥಣಿಯ ಕನಕಗುರುಪೀಠದ ಸ್ವಾಮೀಜಿ ಸಿದ್ದರಾಮಾನಂದಪುರಿಗಳು ಮಾದ್ಯಮಗೋಷ್ಠಿಯನ್ನು ನಡೆಸಿ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್​​ನಲ್ಲಿ ದೇವರಾಜ್ ಅರಸ್ ಕಾಲದಲ್ಲಿ 25 ಟಿಕೆಟ್ ನೀಡುವುದನ್ನು ನೋಡಿದ್ದೇವೆ. ಆದರೆ ಇದೀಗ ಕುರುಬ ಸಮುದಾಯಕ್ಕೆ 15 ಸ್ಥಾನಕ್ಕೆ ಇಳಿದಿದೆ. ಈ ಬಾರಿ ಕಾಂಗ್ರೆಸ್​​ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಕುರುಬ ಸಮುದಾಯದ ಆರು ಜನಕ್ಕೆ ಟಿಕೆಟ್ ನೀಡಲಾಗಿದೆ.

ಇದನ್ನೂ ಓದಿ: Kuruba community: ಬಿಜೆಪಿಯಲ್ಲಿ ಸಂಘ ನಿಷ್ಠ ಕುರುಬರನ್ನು ಕಡೆಗಣಿಸಿ, ವಲಸಿಗರಿಗೆ ಮಣೆ ಹಾಕ್ತಿದ್ದಾರಾ ಸಿಎಂ ಬೊಮ್ಮಾಯಿ?

ಈ ಬಗ್ಗೆ ಸಿದ್ದರಾಮಾನಂದಪುರಿ ಸ್ವಾಮೀಜಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಕುರುಬ ಸಮುದಾಯವನ್ನು ತಾತ್ಸಾರ ಮಾಡಬೇಡಿ. ಕುರುಬರ ನಾಯಕರನ್ನು ಗಂಭೀರವಾಗಿ ಪರಿಗಣಿಸದೇ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಕಾಂಗ್ರೆಸ್ ಸಾಮಾಜಿಕ ನ್ಯಾಯ ಎಂದು ಹೇಳುತ್ತಾರೆ. ಆದರೆ ಟಿಕೆಟ್ ನೀಡುವಾಗ ಈ ವಿಚಾರವನ್ನು ಅನುಸರಿಸುವುದಿಲ್ಲ ಎಂದು ಹೇಳಿದ್ದಾರೆ.

ನಾವು ಸ್ವಾಮಿಜಿಗಳು ರಾಜಕಾರಣದಲ್ಲಿ ಪ್ರವೇಶ ಮಾಡಬಾರದು, ಆದರೆ ಸಮುದಾಯದ ಹಿತದೃಷ್ಟಿಯಿಂದ ಈ ಬಗ್ಗೆ ಪ್ರಶ್ನಿಸಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಕುರುಬ ಸಮುದಾಯವನ್ನು ಕಡೆಗಣಿಸಬಾರದು. ಚುನಾವಣೆ ಸಮಯದಲ್ಲಿ ನಮ್ಮ ಬಳಿ ಹೇಗೆ ಮತ ಕೇಳಲು ಬರುತ್ತಿರ ಎಂಬುದನ್ನು ನೋಡಬೇಕಾಗುತ್ತೆ. ಉತ್ತರ ಕರ್ನಾಟಕದದಲ್ಲಿ ನೀವು ಚುನಾವಣೆ ಮಾಡಲು ಸಾಧ್ಯವೇ ಇಲ್ಲ. ಒಂದು ವೇಳೆ ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡದೇ ಇದ್ದರೆ ಕುರುಬ ಸಮುದಾಯದ ಆಕಾಂಕ್ಷಿಗಳಿಗೆ ಸ್ವತಂತ್ರ ನಿರ್ಣಯ ಕೈಗೊಳ್ಳಲು ಸೂಚಿಸುತ್ತೇನೆ ಎಂದು ಹೇಳಿದ್ದಾರೆ.

Published On - 5:21 pm, Tue, 28 March 23

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್