Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಹತ್ತಿಗೆ ಬಂದಿದೆ ಬಂಗಾರದ ಬೆಲೆ, ಆದರೆ ಬೆಳೆ ಕುಸಿತದಿಂದ ರೈತರು ಕಂಗಾಲು

ಹತ್ತಿ ಬೆಳೆಗೆ ಈ ಬಾರಿ ಬಂಗಾರದ ಬೆಲೆ ಚೆನ್ನಾಗಿದ್ದರೂ ಹಲವು ಕಾರಣಗಳಿಂದಾಗಿ ಇಳುವರಿ ಕುಸಿದಿರುವುದರಿಂದ ರೈತರು ಕಂಗಾಲಾಗಿದ್ದಾರೆ.

ರಾಯಚೂರು: ಹತ್ತಿಗೆ ಬಂದಿದೆ ಬಂಗಾರದ ಬೆಲೆ, ಆದರೆ ಬೆಳೆ ಕುಸಿತದಿಂದ ರೈತರು ಕಂಗಾಲು
ಕುಂಠಿತ ಇಳುವರಿಯಿಂದ ಕಂಗಾಲಾದ ರೈತರು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 20, 2022 | 3:10 PM

ರಾಯಚೂರು: ಜಿಲ್ಲೆಯಲ್ಲಿ ಈ ಬಾರಿ ರೈತರು ಹತ್ತಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದಾರೆ. ಸುಮಾರು 2.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಇದೆ. ಮಾರುಕಟ್ಟೆಯಲ್ಲಿ ಹತ್ತಿಗೆ ಬಂಗಾರದ ಬೆಲೆ ಇದೆ. ಕ್ವಿಂಟಲ್ ಹತ್ತಿಯು 8-9 ಸಾವಿರ ರೂಪಾಯಿಯವರೆಗೆ ಮಾರಾಟವಾಗುತ್ತಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಆದರೆ ರಾಯಚೂರು ತಾಲೂಕಿನ ಹಲವು ಗ್ರಾಮಗಳು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದ ಗಡಿಯಲ್ಲಿವೆ. ಆ ಭಾಗದಲ್ಲಿ ಹತ್ತಿ ಬೆಳೆಯ ಸಮಸ್ಯೆ ಎದುರಾಗಿದೆ. ಈ ಹಿಂದೆ ಇರದ ಇಳುವರಿ ಸಮಸ್ಯೆಯನ್ನು ರೈತರು ಈ ಬಾರಿ ಅನುಭವಿಸುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಸ್ಥಿತಿಯಲ್ಲಿದ್ದಾರೆ ರೈತರು.

ರಾಯಚೂರು ತಾಲೂಕಿನ ಗಿಲ್ಲೆಸುಗೂರು, ಸಗಮಕುಂಟಾ, ಮೀರಾಪುರ, ಮಟಮಾರಿ ಸೇರಿ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಹತ್ತಿ ಇಳುವರಿ ಕುಂಠಿತವಾಗಿದೆ. ಈ ಬಾರಿ ಇಳುವರಿ ಕಡಿಮೆಯಾಗಲು ಕಳಪೆ ಬೀಜದ ಸಮಸ್ಯೆಯೇ ಮುಖ್ಯ ಕಾರಣ ಎಂದು ರೈತರು ಆರೋಪಿಸಿದ್ದಾರೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ಗಡಿ ಭಾಗದಲ್ಲಿಯೂ ರೈತರು ಹತ್ತಿ ಬೆಳೆ ಸಮಸ್ಯೆ ಎದುರಿಸುತ್ತಿದ್ದು,ಕೃಷಿ ಇಲಾಖೆಗೆ ಈ ಸಂಬಂಧ ಸರಣಿ ದೂರುಗಳು ಬಂದಿವೆ. ಈ ಸಮಸ್ಯೆಯನ್ನು ಕೃಷಿ ಇಲಾಖೆ ಕೂಡ ಗಂಭೀರವಾಗಿ ಪರಿಣಮಿಸಿದೆ. ಗಡಿ ಭಾಗದಲ್ಲಿ ಹತ್ತಿ ಇಳುವರಿ ಕುಂಠಿತವಾಗಿರುವ ಬಗ್ಗೆ ಅಧ್ಯಯನಕ್ಕೆ ಮುಂದಾಗಿದೆ. ಹತ್ತಿ ಬಿತ್ತನೆ ಪದ್ದತಿ, ಕಳಪೆ ಬೀಜಗಳಿಂದಲೂ ಈ ರೀತಿ ಇಳುವರಿ ಸಮಸ್ಯೆಯಾಗಿರುವ ಸಾಧ್ಯತೆಯಿದೆ. ಈ ಬಾರಿ ಮಳೆಯೂ ಹೆಚ್ಚಾಗಿದ್ದು, ಜೊತೆಗೆ ಕೀಟ ಭಾದೆಯೂ ಕಂಡು ಬಂದಿದೆ. ಆದರೆ ಹತ್ತಿ ಇಳುವರಿ ಕಡಿಮೆಯಾಗಲು ಈ ಪೈಕಿ ಯಾವುದು ಮುಖ್ಯ ಕಾರಣ ಎನ್ನುವುದು ಸ್ಪಷ್ಟವಾಗಿ ತಿಳಿದುಬಂದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ, ಹತ್ತಿ ಇಳುವರಿಯು ಕುಂಠಿತಗೊಂಡಿರುವ ಹೊಲಗಳಿಗೆ ವಿಜ್ಞಾನಿಗಳ ತಂಡ ಭೇಟಿ ನೀಡಿದೆ. ಗಿಲ್ಲೆಸುಗೂರು ಭಾಗದಲ್ಲಿ ಹತ್ತಿ ಇಳುವರಿ ಸಮಸ್ಯೆಗೆ ಕಳಪೆ ಬೀಜ, ರೋಗ ಹಾಗೂ ಕೀಟ ಬಾಧೆ ಕಾರಣ ಎಂದು ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ. ಈ ವರದಿ ಆಧಾರದ ಮೇಲೆ ಹಾನಿಗೊಳಗಾದ ಸಂತ್ರಸ್ತ ರೈತರು ಗ್ರಾಹಕರ ನ್ಯಾಯಾಲಯಕ್ಕೆ ಹೋಗಬಹುದು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಿಸಿಕೊಂಡ ರಾಯಚೂರು ಜಿಲ್ಲಾ ಪೊಲೀಸರು

ವರದಿ: ಭೀಮೇಶ್ ಪೂಜಾರ್ ಟಿವಿ9 ರಾಯಚೂರು

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?