ರಾಯಚೂರು: ಗಣೇಶ ವಿಸರ್ಜನೆ ವೇಳೆ ಎರಡು ಕೋಮಿನ ನಡುವೆ ಗಲಾಟೆ ನಡೆದಿರುವ ಘಟನೆ ಸಿಂಧನೂರು ತಾಲೂಕಿನ ದಡೆಸುಗೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಗಣೇಶ ವಿಸರ್ಜನೆ ವೇಳೆ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಾತಿನ ಚಕಮಕಿ ತಾರಕಕ್ಕೇರಿ ಪರಸ್ಪರ ಬಡದಾಡಿಕೊಂಡಿದ್ದಾರೆ.
ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತ ಮತ್ತಿನಲ್ಲಿ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಭದ್ರತೆಗಾಗಿ ಡಿಎಆರ್ ತುಕಡಿ ನಿಯೋಜನೆ ಮಾಡಲಾಗಿದೆ.
ವಿರಾಟ್ ಕೊಹ್ಲಿ ಶತಕ ಸಿಡಿಸಿದ ಹಿನ್ನೆಲೆ ವಿದ್ಯಾರ್ಥಿಗಳ ಸಂಭ್ರಮಾಚರಣೆ
ವಿರಾಟ್ ಕೊಹ್ಲಿ ಟಿ20 ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ ಹಿನ್ನೆಲೆ ರಾಯಚೂರು ನಗರದ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳ ಸಂಭ್ರಮಾಚರಣೆ ಮಾಡಿದ್ದಾರೆ. ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿದ್ದ ತಟ್ಟೆ ಬಡಿದು, ಕುಣಿದು ಕುಪ್ಪಳಿಸಿದ್ದಾರೆ. ಮೂರು ವರ್ಷದ ಬಳಿಕ ಕೊಹ್ಲಿ ಶತಕ ಹಿನ್ನೆಲೆ ಕೊಹ್ಲಿ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:49 pm, Thu, 8 September 22