ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್; ಮಾಜಿ ಶಾಸಕ ಪಾಪರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲು

ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್; ಮಾಜಿ ಶಾಸಕ ಪಾಪರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲು

TV9 Web
| Updated By: ಆಯೇಷಾ ಬಾನು

Updated on: Nov 04, 2021 | 10:53 AM

ಮಾಜಿ ಶಾಸಕ ಪಾಪರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಯಚೂರು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಕೇಸ್​ಗೆ ಸಂಬಂಧಿಸಿ ಮಾಜಿ ಶಾಸಕ ಪಾಪರೆಡ್ಡಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಯಚೂರು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಬಿಜೆಪಿ SC ಮೋರ್ಚಾದಿಂದ ಸಿದ್ದರಾಮಯ್ಯ ವಿರುದ್ಧ ಧರಣಿ ನಡೆದಿತ್ತು. ಪ್ರತಿಭಟನೆ ವೇಳೆ ಕರ್ತವ್ಯನಿರತ ಕಾನ್ಸ್‌ಟೇಬಲ್ ಮೇಲೆ ಹಲ್ಲೆ. ಪ್ರತಿಕೃತಿ ದಹಿಸಲು ಅವಕಾಶ ನೀಡದ ಹಿನ್ನೆಲೆ ಹಲ್ಲೆ ನಡೆಸಿದ್ದರು. ಮಾಜಿ ಶಾಸಕ ಪಾಪರೆಡ್ಡಿ, ಬೆಂಬಲಿಗರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.