ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ: ವೈದ್ಯರನ್ನು ಕರೆಸಿ ಶಾಲೆಯಲ್ಲೇ ಮಕ್ಕಳಿಗೆ ಚಿಕಿತ್ಸೆ

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವಂತಹ ಘಟನೆ  ತಾಲೂಕಿನ ಅಪ್ಪನದೊಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸದ್ಯ ವೈದ್ಯರನ್ನು ಕರೆಸಿ ಶಾಲೆಯಲ್ಲೇ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ: ವೈದ್ಯರನ್ನು ಕರೆಸಿ ಶಾಲೆಯಲ್ಲೇ ಮಕ್ಕಳಿಗೆ ಚಿಕಿತ್ಸೆ
ಸರ್ಕಾರಿ ಶಾಲೆ
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on:Jul 01, 2023 | 3:52 PM

ರಾಯಚೂರು: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು (students) ಅಸ್ವಸ್ಥರಾಗಿರುವಂತಹ ಘಟನೆ  ತಾಲೂಕಿನ ಅಪ್ಪನದೊಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಸದ್ಯ ವೈದ್ಯರನ್ನು ಕರೆಸಿ ಶಾಲೆಯಲ್ಲೇ ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಇಂದು ಮಧ್ಯಾಹ್ನ ಬಿಸಿಯೂಟಕ್ಕೆ ಸಿಬ್ಬಂದಿಗಳು ಉಪ್ಪಿಟ್ಟು ಮಾಡಿದ್ದರು. ಅಡುಗೆ ಪಾತ್ರೆಯ ತಳಹದಿಯಲ್ಲಿ ಹಲ್ಲಿ ಪತ್ತೆಯಾಗಿದೆ. ಘಟನೆಗೆ ಸದ್ಯ ಇಬ್ಬರು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪ ಕೇಳಿಬಂದಿದೆ.

ಸರ್ಕಾರಿ ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶಾಲೆ ಆವರಣದಲ್ಲಿ ಮಕ್ಕಳ ಪೋಷಕರು ಜಮಾಯಿಸಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಬಡವರ ದೃಷ್ಟಿಯಲ್ಲಿಟ್ಟುಕೊಂಡೆ ಇನ್ಫೋಸಿಸ್ ಮತ್ತು ಅದಮ್ಯ ಚೇತನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 5 ರೂಪಾಯಿಗೆ ಊಟ ಕೊಡ್ತಿದೆ!

ಮದುವೆ ಊಟ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

ಹಾವೇರಿ: ಮದುವೆ ಸಮಾರಂಭದಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವಂತಹ  ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಪ್ಪದಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಚಪ್ಪದಹಳ್ಳಿಯ ಶಂಕರಪ್ಪ ಹಿತ್ತಲಮನಿ ಎಂಬುವರ ಪುತ್ರಿಯ ಮದುವೆ ಕಾರ್ಯಕ್ರಮದಲ್ಲಿ ಜನರು ಊಟ ಮಾಡಿದ್ದರು. ಮೇ. 23ರ ರಾತ್ರಿಯಿಂದ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವರಿಗೆ ರಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಬಿಸಿ ಊಟ ಸೇವಿಸಿದ 35 ಸೈನಿಕರು ಅಸ್ವಸ್ಥ

ಹಾಸನ: ಮಧ್ಯಾಹ್ನದ ಬಿಸಿ ಊಟ ಸೇವಿಸಿದ 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ಇತ್ತೀಚೆಗೆ ಕಂಡುಬಂದಿತ್ತು. ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಕೊಪ್ಪಳ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಭ್ರೂಣ ಪತ್ತೆ! ಡಿಹೆಚ್​ಒ ವಿರುದ್ಧ ಸಚಿವ ತಂಗಡಗಿ ಗರಂ

ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದಿದ್ದರು ಎನ್ನಲಾಗಿದೆ. ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗಿತ್ತು. ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:51 pm, Sat, 1 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ