ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು (Raichur) ತಾಲೂಕಿನ ಬಿ.ಯದ್ಲಾಪೂರ ಗ್ರಾಮದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ಕೊಚ್ಚಿ ಹೋದ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ.

ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
ಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
Follow us
ಭೀಮೇಶ್​​ ಪೂಜಾರ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 13, 2024 | 5:07 PM

ರಾಯಚೂರು, ಅ.13: ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ರಾಯಚೂರು (Raichur) ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ. ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚ ಹೋದವರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ. ಪ್ರತಿ ದಿನದಂತೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುವಾಗ ಈ ದುರ್ಘಟನೆ ನಡೆದಿದೆ. ಈ ಘಟನೆ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ವಿಜಯಪುರ: ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಹೊರ ಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಟ್ರ್ಯಾಕ್ಟರ್ ಚಾಲಕ ತೌಶಿಫ್ ಲಟೋರಿ (24) ಎಂಬ ಯುವಕನ ಶವ ಪತ್ತೆಯಾಗಿದೆ. ಶವದ ಬಳಿ ಬಿಯರ್ ಬಾಟಲ್ ಪತ್ತೆಯಾಗಿದ್ದು, ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿ, ಜಮೀನಿನಲ್ಲಿ ಎಳೆದಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗಾರರ ಪತ್ತೆಗೆ ಮೃತ  ಯುವಕನ ಪೋಷಕರು ಮನವಿ ಮಾಡಿದ್ದು, ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ ಸೇರಿದಂತೆ  ಶ್ವಾನದಳ ಕೂಡ ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಮುರ್ಡೇಶ್ವರದಲ್ಲಿ ಬೆಂಗಳೂರು ಮೂಲದ ಯುವಕನ ರಕ್ಷಣೆ

ಉತ್ತರ ಕನ್ನಡ: ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗುತ್ತಿದ್ದ ಬೆಂಗಳೂರು ಮೂಲದ ಯುವಕ ಪುನೀತ್ (20) ಎಂಬಾತನ ರಕ್ಷಣೆ ಮಾಡಲಾಗಿದೆ. ಸಮುದ್ರದಲ್ಲಿ ಆಟ ಆಡುವಾಗ ಅಲೆಗಳ ಅಬ್ಬರಕ್ಕೆ ಯವಕ ಕೊಚ್ಚಿ ಹೋಗುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನ ರಕ್ಷಣೆ ಮಾಡಿದ್ದಾರೆ.

ದಸರಾ ರಜೆ ಹಿನ್ನೆಲೆ ಸದ್ಯ ಕಡಲ ತೀರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಸಂಜೆ ವೇಳೆಗೆ ಇನ್ನಷ್ಟು ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಪ್ರವಾಸಿಗರ ರಕ್ಷಣೆಗೆಂದು ಆರು ಜನ ಲೈಫ್ ಗಾರ್ಡ್ ಜೊತೆಗೆ ಪ್ರವಾಸೊದ್ಯಮ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.  ಕೆಲವು ದಿನದ ಹಿಂದೆ ಬೆಂಗಳೂರು ಮೂಲದ ವಿದ್ಯಾರ್ಥಿ ಸಮುದ್ರದಲ್ಲಿ ಕೊಚ್ಚಿ ಹೋದ ಹಿನ್ನೆಲೆ ನಿರ್ಬಂಧ ಮಾಡಲಾಗಿತ್ತು. ನಿನ್ನೆಯಿಂದ  ಜಿಲ್ಲಾಡಳಿತ ಮುರ್ಡೇಶ್ವರದ ಸಮುದ್ರಕ್ಕಿಳಿಯಲು ಅವಕಾಶ ಮಾಡಿಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Sun, 13 October 24

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ