ರಾಯಚೂರು: ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿದ್ದ 7 ಜನರು ಅಸ್ವಸ್ಥ

ರಾಯಚೂರು ಜಿಲ್ಲೆಯ ಮಸ್ಕಿ(Maski) ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿ ಒಂದೇ ಕುಟುಂಬದ ಏಳು ಜನ ಅಸ್ವಸ್ಥರಾದ ಘಟನೆ ನಡೆದಿದೆ. ಸದ್ಯ ಅಸ್ವಸ್ಥರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು: ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿದ್ದ 7 ಜನರು ಅಸ್ವಸ್ಥ
ರಾಯಚೂರು: ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿದ್ದ 7 ಜನರು ಅಸ್ವಸ್ಥ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 11, 2024 | 9:03 PM

ರಾಯಚೂರು, ಅ.11: ರೊಟ್ಟಿ, ಬೆಂಡೆಕಾಯಿ ಪಲ್ಯ ಸೇವಿಸಿ ಒಂದೇ ಕುಟುಂಬದ ಏಳು ಜನ ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ(Maski) ತಾಲ್ಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ, ಮಳಾಪ್ಪ, ಬಸಲಿಂಗಪ್ಪ, ಗೌರಮ್ಮ, ಗುರುಬಸಮ್ಮ ಹಾಗೂ ಮಲ್ಲಿಕಾರ್ಜುನ ಸೇರಿದಂತೆ ಒಟ್ಟು 7 ಜನರಲ್ಲಿ ತೀವ್ರ ವಾಂತಿ-ಭೇದಿ ಕಾಣಿಸಿಕೊಂಡಿದೆ. ಬೆಳಗ್ಗೆ ಎಲ್ಲರೂ ಹೊಲದಲ್ಲೇ ಕುಳಿತು ಒಟ್ಟಾಗಿ ಊಟ ಮಾಡಿದ್ದರು. ಊಟದ ಬಳಿಕ ಏಕಾಏಕಿ ಅಸ್ವಸ್ಥರಾಗಿದ್ದು, ಕೂಡಲೇ ಏಳು ಜನರಿಗೆ ಲಿಂಗಸಗೂರು ತಾಲೂಕು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅಸ್ವಸ್ಥರು ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿನ್ನೆಯಷ್ಟೇ ಲಿಂಗಸುಗೂರು(Lingasugur) ತಾಲೂಕಿನ‌ ಪರಂಪುರ ತಾಂಡಾದಲ್ಲಿ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ನಡೆದಿತ್ತು. ಸುಮಾರು 250 ಕುಟುಂಬಗಳು ವಾಸಿಸುವ ತಾಂಡಾ ನಿವಾಸಿಗಳು ಸೇರಿಕೊಂಡು ದೇವರ ಕಾರ್ಯಕ್ಕಾಗಿ ಮಾಂಸದ ಅಡುಗೆ ಮಾಡಿಸಿದ್ದರು. ಮಧ್ಯಾಹ್ನ ಊಟ ಸೇವಿಸಿದ ಬಳಿಕ ಮಕ್ಕಳು, ಹಿರಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಕೂಡಲೇ ಅಸ್ವಸ್ಥರಾದವರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇಂದು ಒಂದೇ ಕುಟುಂಬದ ಏಳು ಜನ ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ:ರಾಯಚೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸದೂಟ ಸೇವಿಸಿ 20ಕ್ಕೂ ಹೆಚ್ಚು ಜನರು ಅಸ್ವಸ್ಥ

ಇನ್ನು ಇತ್ತೀಚೆಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಮಡಿಕಲ್ ಮತ್ತು ಕರ್ಕಿಕಳಿ ಎಂಬಲ್ಲಿಯೂ ಕೂಡ ಕಲುಷಿತ ನೀರು ಕುಡಿದು ಎರಡು ವಾರ್ಡ್​ಗಳ 500ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು. ಬಳಿಕ ಸ್ಥಳಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕಲುಷಿತ ನೀರು ಕುಡಿದ ಪರಿಣಾಮದಿಂದ ಕಾಯಿಲೆಗಳು ಶುರುವಾಗಿದೆ ಎಂದು ದೃಢಪಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Fri, 11 October 24

ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್