Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು
ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು.
ರಾಯಚೂರು: ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ; ಓರ್ವ ಸಾವು
ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ತೆರಿಯೂರಿನ ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಚಾಲಕ ಭರತ್ ಕುಮಾರ್(24) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:Vijayapur News: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವು ನಾಯಕ್, ಪರಮೇಶ್ ಮೃತ ದುರ್ದೈವಿಗಳು. ಇನ್ನು ಐವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಇವರು ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿಗೆ ವಾಪಸ್ ಬರುತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ