AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ತಿಂಥಿಣಿ ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ

ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಸಿದ್ದರಾಮಾನಂದ ಶ್ರೀಗಳು ರಾಯಚೂರಿನಲ್ಲಿ ಮಾತನಾಡಿ, ಕುರುಬ ಸಮುದಾಯದ ಪೂಜಾರಿಗಳಿಗೆ ಸರ್ಕಾರ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ದೊಡ್ಡ ದೇವಸ್ಥಾನಗಳಿಗೆ ಅನುದಾನ ನೀಡುವ ಸರ್ಕಾರ, ಬಡ ಪೂಜಾರಿಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಭೂಮಿ ಕಬ್ಜಾ, ಮತ್ತು ದೇವಸ್ಥಾನಗಳ ಆಸ್ತಿ ಕಳೆದುಕೊಳ್ಳುವ ಬಗ್ಗೆಯೂ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ತಿಂಥಿಣಿ ಕನಕಗುರುಪೀಠದ ಸ್ವಾಮೀಜಿ ಅಸಮಾಧಾನ
ಕನಕಗುರುಪೀಠದ ಸಿದ್ದರಾಮಾನಂದಶ್ರೀ, ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮೇಶ್​​ ಪೂಜಾರ್
| Edited By: |

Updated on: Jan 13, 2025 | 9:44 AM

Share

ರಾಯಚೂರು, ಜನವರಿ 13: ಕುರುಬ ಸಮುದಾಯದ ಪೂಜಾರಿಗಳ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ದೊಡ್ಡ ದೊಡ್ಡ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಅನುದಾನ ಕೊಡುತ್ತೀರಿ. ಅವರ ಮಾತುಗಳಿಗೆ ಮರಳಾಗಿ ಮನೆ ಬಾಗಿಲು ತೆರೆದಿಟ್ಟುಕೊಳ್ತೀರಿ. ಕಂಬಳಿ ಬಣ್ಣವನ್ನು ನೋಡಿದರೆ ಒಳಗೆ ಬಿಟ್ಟುಕೊಳ್ಳಲು ನಿಮಗೆ ಕಷ್ಟವಾಗುತ್ತದೆ ಎಂದು ಕಾಗಿನೆಲೆ (Kaginele) ಮಹಾಸಂಸ್ಥಾನದ ಕನಕಗುರುಪೀಠದ (Kanak Gurupeeth) ಸಿದ್ದರಾಮಾನಂದಶ್ರೀ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ತಿಂಥಿಣಿಯಲ್ಲಿ ಮಾತನಾಡಿದ ಅವರು, ಕುರುಬರ ಸಂಸ್ಕೃತಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಕನಕಗುರು ಪೀಠ ಸ್ಥಾಪನೆ ನಂತರವೂ ಯಾರೂ ಪೂಜಾರಿಗಳ ಕಷ್ಟ ಕೇಳಿಲ್ಲ. ಈ ಸಂಬಂಧ ಮೂರು ಬಾರಿ ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದೆ. ವಿದ್ಯಾಕೇಂದ್ರ ಸ್ಥಾಪನೆಗೆ 13 ಎಕರೆ ಜಮೀನು ಇದೆ, ಅಭಿವೃದ್ಧಿ ಮಾಡಿ ಎಂದು ಹೇಳಿದ್ದೆ. ತಿಂಗಳಿಗೆ ಇಲ್ಲದಿದ್ದರೂ ವರ್ಷಕ್ಕೊಮ್ಮೆಯಾದರೂ ಸಹಾಯಧನ ನೀಡಿ ಎಂದು ಮುಖ್ಯಮಂತ್ರಿಗಳಿಗೆ ನಮ್ಮ ಪೂಜಾರಿಗಳು ಮೂರು ಬಾರಿ ಕೇಳಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿಗಳು ಎರಡು ಬಾರಿ ಸಭೆ ಕರೆದು ಮುಂದೂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ರಾಜ್ಯ ರಾಜಕಾರಣದಲ್ಲಿ ಈಶ್ವರಪ್ಪ ಸಂಚಲನ

ರಾಜ್ಯಾದ್ಯಂತ ನೂರಾರು ವರ್ಷಗಳ ದೇವಸ್ಥಾನಗಳು ಸರ್ಕಾರಿ ಜಾಗದಲ್ಲಿದ್ದಾವೆ. ಆ ಜಾಗಗಳನ್ನು ಆಯಾ ದೇವಸ್ಥಾನಗಳ ಹೆಸರಿನಲ್ಲೇ ಮಾಡಬೇಕು. ಕಲಬುರ್ಗಿಯ ಉಳಿಬಾವಿಯಲ್ಲಿರುವ ಕಲಬುರ್ಗಿ‌ ವಿಶ್ವವಿದ್ಯಾಲಯದಲ್ಲಿನ ಬೀರ ದೇವರ ಆಸ್ತಿ, ಮಾಳಿಂಗ ರಾಯನ ಆಸ್ತಿ ಸೇರಿದಂತೆ ರಾಜ್ಯಾದ್ಯಂತ ಇರುವ ದೇವಸ್ಥಾನಗಳ ಆಸ್ತಿಗಳನ್ನು ಸರ್ಕಾರ ಮತ್ತು ಖಾಸಗಿಯವರು ಕಬ್ಜಾ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆಯವರು ನಮ್ಮ ಆಸ್ತಿಯನ್ನು ಕಬ್ಜಾ ಮಾಡಿ ದರ್ಗಾ ಕಟ್ಟಿದ್ದಾರೆ. ತಮ್ಮ ದೇವಸ್ಥಾನದ ಜಾಗಕ್ಕಾಗಿ ಬಡಪಾಯಿ ಕುರುಬ ಪೂಜಾರಿಗಳು ಪೊಲೀಸ್​ ಠಾಣೆ, ಕೋರ್ಟ್​ ಮೆಟ್ಟಿಲು ಹತ್ತುವಂತಾಗಿದೆ. ಇದನ್ನು ತಪ್ಪಿಸಲು, ಅತಿಕ್ರಮಣ ಮಾಡಿಕೊಂಡಿರುವ ಭೂಮಿಯನ್ನು ಆಯಾ ದೇವಸ್ಥಾನಗಳ ಹೆಸರಿನಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್