AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ: ಆದೇಶ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಕಲಬುರಗಿ ಚಲೊ ಅಭಿಯಾನ

ಎಲ್​ಕೆಜಿ, ಯುಕೆಜಿ ತರಗತಿಗಳನ್ನ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರೊ ಹೊಸ ಯೋಜನೆಗೆ ಅಂಗನವಾಡಿ ಕಾರ್ಯಕರ್ತೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಹೊಸ ಆದೇಶ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಜೂನ್ 3ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಅಂಗನವಾಡಿ ನೌಕರರು ಅಂಗನವಾಡಿ ಬಂದ್ ಮಾಡಿ ಕಲಬುರಗಿ ಚಲೊ ಅಭಿಯಾನ ನಡೆಸಲು ಮುಂದಾಗಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿ: ಆದೇಶ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಕಲಬುರಗಿ ಚಲೊ ಅಭಿಯಾನ
ಸರ್ಕಾರದ ಹೊಸ ಆದೇಶದಿಂದ ಅಂಗನವಾಡಿಗಳು ಬಂದ್ ಆಗುವ ಆತಂಕ
ಭೀಮೇಶ್​​ ಪೂಜಾರ್
| Edited By: |

Updated on: May 29, 2024 | 12:40 PM

Share

ರಾಯಚೂರು, ಮೇ.29: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ (ಇಸಿಸಿಇ) ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ (Education Department) ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಹೊಸ ಆದೇಶದಿಂದ ಅಂಗನವಾಡಿ ಕೇಂದ್ರಗಳು (Anganwadi) ಬಂದ್ ಆಗುತ್ತವಾ ಎಂಬ ಆತಂಕ ಹುಟ್ಟುಕೊಂಡಿದೆ. ಇನ್ನು ಸರ್ಕಾರದ ಹೊಸ ಆದೇಶ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಜೂನ್ 3ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಅಂಗನವಾಡಿ ನೌಕರರು ಅಂಗನವಾಡಿ ಬಂದ್ ಮಾಡಿ ಕಲಬುರಗಿ ಚಲೊ ಅಭಿಯಾನ ನಡೆಸಲು ಮುಂದಾಗಿದ್ದಾರೆ.

ಎಲ್​ಕೆಜಿ, ಯುಕೆಜಿ ತರಗತಿಗಳನ್ನ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರೊ ಹೊಸ ಯೋಜನೆಗೆ ಅಂಗನವಾಡಿ ಕಾರ್ಯಕರ್ತೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಹೊಸ ಆದೇಶಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಬೀದಿಗೆ ಬೀಳೋ ಸ್ಥಿತಿ ಉಂಟಾಗಲಿದೆ. ರಾಜ್ಯದ 1 ಲಕ್ಷ 30 ಸಾವಿರ ಜನ ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಕೈ ತಪ್ಪೋ ಭೀತಿ ಇದೆ. ಹೀಗಾಗಿ ರಾಯಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಇದೇ ಜೂನ್ 3 ರಂದು ಕಲಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಎಂಟು ಜಿಲ್ಲೆಗಳಿಂದ ಹೋರಾಟ ನಡೆಸಲು ತಯಾರಿ ನಡೆಯುತ್ತಿದೆ.

ಇದನ್ನೂ ಓದಿ: ಗೃಹಜ್ಯೋತಿ ಸ್ಕೀಮ್: ಕರೆಂಟ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

ಸರ್ಕಾರಿ ಶಾಲೆಯಲ್ಲಿ ಎಲ್​ಕೆಜಿ, ಯುಕೆಜಿ ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ. ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳನ್ನ ಸರ್ಕಾರಿ ಶಾಲೆಗಳಲ್ಲಿ ಎಲ್​ಕೆಜಿ, ಯುಕೆಜಿಗೆ ಸೇರಿಸುವ ಈ ಯೋಜನೆಯಿಂದ ಅಂಗನವಾಡಿ ಕೇಂದ್ರಗಳಿಗೆ ಮುಚ್ಚುವ ಭೀತಿ ಎದುರಾಗಿದೆ. 3-6 ವರ್ಷದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಅಂಗನವಾಡಿ ಕೇಂದ್ರಗಳು ಖಾಲಿ ಖಾಲಿ ಆಗಲಿವೆ. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ, ಯುಕೆಜಿ ಆರಂಭಿಸಲು ಕಾರ್ಯಕರ್ತೆಯರು ಮನವಿ ಸಲ್ಲಿಸಿದ್ದಾರೆ. ಈ ಮಧ್ಯೆ ಹೊಸ ಯೋಜನೆ ಹಿಂಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸುಮಾರು 262 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. 4-5 ನೇ ವರ್ಷದ ಮಕ್ಕಳಿಗಾಗಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್