ರಾಯಚೂರು, ಮೇ.29: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಆರಂಭಿಕ ಬಾಲ್ಯದ ಆರೈಕೆ ಶಿಕ್ಷಣ (ಇಸಿಸಿಇ) ಆರಂಭಕ್ಕೆ ಶಾಲಾ ಶಿಕ್ಷಣ ಇಲಾಖೆ (Education Department) ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ಹೊಸ ಆದೇಶದಿಂದ ಅಂಗನವಾಡಿ ಕೇಂದ್ರಗಳು (Anganwadi) ಬಂದ್ ಆಗುತ್ತವಾ ಎಂಬ ಆತಂಕ ಹುಟ್ಟುಕೊಂಡಿದೆ. ಇನ್ನು ಸರ್ಕಾರದ ಹೊಸ ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿ ಜೂನ್ 3ರಂದು ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜಿಲ್ಲೆಗಳ ಅಂಗನವಾಡಿ ನೌಕರರು ಅಂಗನವಾಡಿ ಬಂದ್ ಮಾಡಿ ಕಲಬುರಗಿ ಚಲೊ ಅಭಿಯಾನ ನಡೆಸಲು ಮುಂದಾಗಿದ್ದಾರೆ.
ಎಲ್‍ಕೆಜಿ, ಯುಕೆಜಿ ತರಗತಿಗಳನ್ನ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರೊ ಹೊಸ ಯೋಜನೆಗೆ ಅಂಗನವಾಡಿ ಕಾರ್ಯಕರ್ತೆಯರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಹೊಸ ಆದೇಶಕ್ಕೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಬೀದಿಗೆ ಬೀಳೋ ಸ್ಥಿತಿ ಉಂಟಾಗಲಿದೆ. ರಾಜ್ಯದ 1 ಲಕ್ಷ 30 ಸಾವಿರ ಜನ ಅಂಗನವಾಡಿ ಕಾರ್ಯಕರ್ತೆಯರ ಉದ್ಯೋಗ ಕೈ ತಪ್ಪೋ ಭೀತಿ ಇದೆ. ಹೀಗಾಗಿ ರಾಯಚೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಇದೇ ಜೂನ್ 3 ರಂದು ಕಲಬುರ್ಗಿಯಲ್ಲಿ ಕಲ್ಯಾಣ ಕರ್ನಾಟಕ ಎಂಟು ಜಿಲ್ಲೆಗಳಿಂದ ಹೋರಾಟ ನಡೆಸಲು ತಯಾರಿ ನಡೆಯುತ್ತಿದೆ.
ಇದನ್ನೂ ಓದಿ: ಗೃಹಜ್ಯೋತಿ ಸ್ಕೀಮ್: ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?
ಸರ್ಕಾರಿ ಶಾಲೆಯಲ್ಲಿ ಎಲ್‍ಕೆಜಿ, ಯುಕೆಜಿ ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ. ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳನ್ನ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿಗೆ ಸೇರಿಸುವ ಈ ಯೋಜನೆಯಿಂದ ಅಂಗನವಾಡಿ ಕೇಂದ್ರಗಳಿಗೆ ಮುಚ್ಚುವ ಭೀತಿ ಎದುರಾಗಿದೆ. 3-6 ವರ್ಷದ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿದರೆ ಅಂಗನವಾಡಿ ಕೇಂದ್ರಗಳು ಖಾಲಿ ಖಾಲಿ ಆಗಲಿವೆ. ಹೀಗಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‍ಕೆಜಿ, ಯುಕೆಜಿ ಆರಂಭಿಸಲು ಕಾರ್ಯಕರ್ತೆಯರು ಮನವಿ ಸಲ್ಲಿಸಿದ್ದಾರೆ. ಈ ಮಧ್ಯೆ ಹೊಸ ಯೋಜನೆ ಹಿಂಪಡೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸುಮಾರು 262 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. 4-5 ನೇ ವರ್ಷದ ಮಕ್ಕಳಿಗಾಗಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ