ರಾಯಚೂರು: 2021-22ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ; ಜಿಲ್ಲೆಯ 15 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರಾಗಿ, ದೇಶದ ಉಪ ರಾಷ್ಟ್ರಪತಿಗಳಾಗಿ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಗಿಯಾಗಿ ಖ್ಯಾತಿ ಪಡೆದು ರಾಜ್ಯ ಮತ್ತು ದೇಶಕ್ಕೆ ನೀಡಿದ ಸೇವೆ ಎಲ್ಲರ ಮಾರ್ಗದರ್ಶನವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ತಿಳಿಸಿದ್ದಾರೆ.

ರಾಯಚೂರು: 2021-22ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ; ಜಿಲ್ಲೆಯ 15 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
ಜಿಲ್ಲೆಯ 15 ಜನ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ
Follow us
TV9 Web
| Updated By: preethi shettigar

Updated on: Sep 12, 2021 | 7:46 AM

ರಾಯಚೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದ್ದು, ಇದರಿಂದ ಮತ್ತಷ್ಟು ಶಿಕ್ಷಣ ವ್ಯವಸ್ಥೆ ಬದಲಾಗಿದೆ. ಶೈಕ್ಷಣಿಕವಾಗಿ ಮತ್ತಷ್ಟು ಸದೃಢವಾಗುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ನಗರ ಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾ ಕೃಷ್ಣನ್ ಅವರ 134ನೇ ಜನ್ಮದಿನೋತ್ಸವ ಅಂಗವಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ.ನಮೋಶಿ ಮಾತನಾಡಿದರು.

ಶಿಕ್ಷಣದ ಸರ್ವತೋಮುಖ ಅಭಿವೃದ್ಧಿ ಆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಿದೆ. ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ನಿರಂತರ ಶ್ರಮವಹಿಸುತ್ತಿದೆ. ಶಿಕ್ಷಕರನ್ನು ದೇಶದ ಅತ್ಯಂತ ಬುದ್ಧಿವಂತಶೀಲರೆಂದು ಹೇಳಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಮಾಡುತ್ತಿದ್ದು, ಶಿಕ್ಷಕರ ವರ್ಗಕ್ಕೆ ಅತ್ಯಂತ ಸಂತಸದ ದಿನವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅಭಿಪ್ರಾಯಪಟ್ಟಿದ್ದಾರೆ.

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕರಾಗಿ, ದೇಶದ ಉಪ ರಾಷ್ಟ್ರಪತಿಗಳಾಗಿ ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಗಿಯಾಗಿ ಖ್ಯಾತಿ ಪಡೆದು ರಾಜ್ಯ ಮತ್ತು ದೇಶಕ್ಕೆ ನೀಡಿದ ಸೇವೆ ಎಲ್ಲರ ಮಾರ್ಗದರ್ಶನವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ತಿಳಿಸಿದ್ದಾರೆ.

ಬಳಿಕ ಕೊವಿಡ್ ವಿಚಾರವಾಗಿ ಮಾತನಾಡಿದ ಅವರು, ಕೊವಿಡ್​ನಿಂದ ಕಳೆದ ಎರಡು ವರ್ಷಗಳ ಕಾಲ ಶಾಲಾ ಕಾಲೇಜುಗಳು ಬಂದ್ ಆಗಿದ್ದವು. ಇದರಿಂದ ಶಿಕ್ಷಕರ ವರ್ಗವು ಕೊವಿಡ್​ನಲ್ಲಿ ಸೇವೆ ಸಲ್ಲಿಸಿದ್ದಾರೆ. ಮಕ್ಕಳ ಹಿತಾ ಕಾಪಾಡಲು ಶ್ರಮ ವಹಿಸಿದ್ದಾರೆ. ಅಂತೆಯೇ ಜಿಲ್ಲೆಯಲ್ಲಿ ಶಿಕ್ಷಕರು ಕೊವಿಡ್​ ವ್ಯಾಕ್ಸಿನೇಷನ್ ಜನರಿಗೆ ಹಾಕಿಸಲು ಮುಂದಾಗಬೇಕು. ಕೊವಿಡ್​ ನಿಯಂತ್ರಣಕ್ಕೆ ವ್ಯಾಕ್ಸಿನೇಷನ್ ಮದ್ದಾಗಿದ್ದು ಡಿಸೆಂಬರ್ ವೇಳೆಗೆ ಪ್ರಧಾನಿಗಳು ಶೇ.100 ರಷ್ಟು ಮಾಡಲು ಗುರಿ ಹೊಂದಿದ್ದಾರೆ. ಅದಕ್ಕೆ ತಕ್ಕಂತೆ ನಾವು ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.

ಬಳಿಕ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಶಾಸಕ ಶಿವರಾಜ ಪಾಟೀಲ್ ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯ ಸಾಧನೆಯ ಹಿಂದೆ ಶಿಕ್ಷಕರ ಪ್ರೇರಣೆಯಿದೆ. ಇಂದು ವೈದ್ಯನಾಗಿ, ಎರಡು ಬಾರಿ ಶಾಸಕನಾಗಿ ನಿಮ್ಮ ಮುಂದೆ ನಿಲ್ಲಲು ಅಕ್ಷರ ಕಲಿಸಿದ ಎಲ್ಲ ಶಿಕ್ಷಕರುಗಳೇ ಕಾರಣ. ಪ್ರತಿಯೊಬ್ಬ ವ್ಯಕ್ತಿಯೂ ಶಿಕ್ಷಣ ಪಡೆದು ದೇಶದ ಅಭಿವೃದ್ದಿಗೆ ಬೆಂಬಲಿಸಬೇಕಿದೆ. ಸ್ಪರ್ಧಾತ್ಮಕವಾಗಿ ಬೆಳೆಯುತ್ತಿರುವ ಶಿಕ್ಷಣದೊಂದಿಗೆ ಶಿಕ್ಷಕರು ಹೆಜ್ಜೆಯಿಡಬೇಕಿದೆ ಎಂದು ಹೇಳಿದ್ದಾರೆ.

ಬಳಿಕ ಹಟ್ಟಿ ಚಿನ್ನದ ಗಣಿ ನಿಗಮ ನಿಯಮಿತ ಅಧ್ಯಕ್ಷ ಮಾನಪ್ಪ ವಜ್ಜಲ್, ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಇವರು ಆದರ್ಶ ಶಿಕ್ಷಕರಾಗಿ ಮಾದರಿಯಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಎಲ್ಲಾ ಶಿಕ್ಷಕರು ಮೈಗೂಡಿಸಿಕೊಳ್ಳಬೇಕಿದೆ. ಸಮಾಜದಲ್ಲಿ ಶಿಕ್ಷಕರಿಗೆ ಉನ್ನತವಾದ ಗೌರವವಿದೆ. ಅದನು ಉಳಿಸಿಕೊಂಡು ಸಮಾಜದ ಬದಲಾವಣೆಗೆ ಕಾರಣರಾಗಬೇಕೆಂದು ಹೇಳಿದರು.

ಪ್ರಶಸ್ತಿಯನ್ನು ಜಿಲ್ಲೆಯ 15 ಜನ ಶಿಕ್ಷಕರಿಗೆ ಪ್ರದಾನ ಮಾಡಲಾಯಿತು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದಲ್ಲಿ, ಮಾನವಿ ತಾಲೂಕಿನ ಬೊಮ್ಮನಾಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ನಾಗ್ಯಾ ನಾಯ್ಕ, ಸಿಂಧನೂರು ತಾಲೂಕಿನ ತಾತಪ್ಪ, ಕ್ಯಾಂಪ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಆನಂದ ಮಾಂಡ್ರೆ, ದೇವದುರ್ಗ ತಾಲೂಕಿನ ಕಲಂಗೇರದೊಡ್ಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಮಹಾದೇವಿ ಅರಟಾಳ, ಲಿಂಗಸೂಗೂರು ತಾಲೂಕಿನ ಬಾರಿಗಿಡದೊಡ್ಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಚಂದ್ರು ಎ.ಕಬ್ಬಲಗೇರಿ, ದೇವದುರ್ಗ ತಾಲೂಕಿನ ವಗಡಂಬಳ್ಳಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಮಹಾವೀರ ಚಂದ್ರನಾಥ ಅಕ್ಕಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರ ವಿಭಾಗದಲ್ಲಿ ಲಿಂಗಸೂಗೂರು ತಾಲೂಕಿನ ರೋಡಲಬಂಡಾ ಯುಕೆಪಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಶೇಖರಗೌಡ ಪೊಲೀಸ್ ಪಾಟೀಲ, ಮಾನವಿ ತಾಲೂಕಿನ ಹಿರೇಹಣಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ನಂದಿನಿ, ಸಿಂಧನೂರು ತಾಲೂಕಿನ ರವುಡಕುಂದ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಸೀಮಾ ಜೆ. ರೆಡ್ಡಿ, ರಾಯಚೂರು ತಾಲೂಕಿನ ಹೀರಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಪಂಪಣ್ಣ, ದೇವದುರ್ಗ ತಾಲೂಕಿನ ಗಾಲೇರದೊಡ್ಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ಮಾನಪ್ಪ. ಪ್ರೌಢ ಶಾಲಾ ಶಿಕ್ಷಕರ ವಿಭಾಗದಲ್ಲಿ ಮಾನವಿ ತಾಲೂಕಿನ ಬಲ್ಲಟಗಿ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಸಿದ್ದನಗೌಡ, ಮಸ್ಕಿ ಬಾಲಕಿಯರ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಭೀಮಪ್ಪ, ದೇವದುರ್ಗ ತಾಲೂಕಿನ ಮದರಕಲ್ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕ ಉತ್ತಮ ಮಾಲೆ, ರಾಯಚೂರಿನ ಪೊಲೀಸ್ ಕಾಲೋನಿಯ ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕಿ ಕೋಮಲಾ ಡಿ, ಸಿಂಧನೂರು ತಾಲೂಕಿನ ಬಳಗಾನೂರು ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ರವೀಂದ್ರ ವೈ ಇವರಿಗೆ ಅತ್ಯುತ್ತಮ ಶಿಕ್ಷಕ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: ದೈಹಿಕ ಶಿಕ್ಷಕರಿಗೆ ಕ್ರೀಡಾ ಇಲಾಖೆಯಿಂದ ತರಬೇತಿ, ವೈಮಾನಿಕ ತರಬೇತಿ ಶಾಲೆ ಪುನಾರಂಭ: ನಾರಾಯಣಗೌಡ ಮಾಹಿತಿ

Teachers’ Day: 44 ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ