BJP: ಬಿಜೆಪಿ ಸೂಚಿಸಿದರೆ ಶಿವಮೊಗ್ಗದ ಹರ್ಷ ಕುಟುಂಬಕ್ಕೆ ಶಾಸಕ ಸ್ಥಾನ: ಈಶ್ವರಪ್ಪ ಭರವಸೆ

ಹರ್ಷ ಸಹೋದರಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ನನಗೆ ಯಾವುದೇ ತಕರಾರು ಇಲ್ಲ. ರಾಜಕಾರಣದಲ್ಲಿ ಅವಕಾಶ ನೀಡಿದರೆ ನಾನು ಮತ್ತೊಬ್ಬ ಹಿಂದೂಗೆ ಕೊಡುತ್ತೇನೆಯೇ ಹೊರತು ಮುಸಲ್ಮಾನರಿಗೆ ಅಲ್ಲ ಎಂದರು.

BJP: ಬಿಜೆಪಿ ಸೂಚಿಸಿದರೆ ಶಿವಮೊಗ್ಗದ ಹರ್ಷ ಕುಟುಂಬಕ್ಕೆ ಶಾಸಕ ಸ್ಥಾನ: ಈಶ್ವರಪ್ಪ ಭರವಸೆ
ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 28, 2022 | 6:40 PM

ರಾಯಚೂರು: ಬಿಜೆಪಿ ಸೂಚಿಸಿದರೆ ಶಿವಮೊಗ್ಗದಲ್ಲಿ ಈಚೆಗೆ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷ (Bajarangadal Activist Harsha) ಕುಟುಂಬಕ್ಕೆ ಶಾಸಕ ಸ್ಥಾನ ಬಿಟ್ಟುಕೊಡಲು ನಾನು ಸಿದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಹರ್ಷ ಸಹೋದರಿಗೆ ಟಿಕೆಟ್ ಕೊಡುವ ವಿಚಾರದಲ್ಲಿ ನನಗೆ ಯಾವುದೇ ತಕರಾರು ಇಲ್ಲ. ರಾಜಕಾರಣದಲ್ಲಿ ಅವಕಾಶ ನೀಡಿದರೆ ನಾನು ಮತ್ತೊಬ್ಬ ಹಿಂದೂಗೆ ಕೊಡುತ್ತೇನೆಯೇ ಹೊರತು ಮುಸಲ್ಮಾನರಿಗೆ ಅಲ್ಲ. ಆದರೆ ಕಾಂಗ್ರೆಸ್ ನಾಯಕರು ಹೀಗೆ ಮಾಡಬಲ್ಲರಾ? ಕಾಂಗ್ರೆಸ್​ನವರಿಗೆ ಸ್ಥಾನ ಬೇಕು. ಮುಸಲ್ಮಾನರ ವೋಟು ಬೇಕು. ಕೊನೆಗೆ ಬಿಜೆಪಿಯನ್ನು ಟೀಕಿಸಬೇಕು. ಅದಷ್ಟೇ ಅವರ ಗುರಿ ಎಂದು ಹೇಳಿದರು. ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಪ್ರಸ್ತಾಪಿಸಿ ಈಶ್ವರಪ್ಪ ಕಾಂಗ್ರೆಸ್ ಪಕ್ಷವನ್ನು ಮನಸೋಯಿಚ್ಛೆ ಟೀಕಿಸಿದರು. ಮುಸ್ಲಿಮರು ಕಾಂಗ್ರೆಸ್ ಪಕ್ಷದ ಬೀಗರು. ನಾನೊಬ್ಬನೇ ಹಿಂದುವಲ್ಲ. ಪಕ್ಷ ಸೂಚಿಸಿದರೇ ಹರ್ಷನ ಸಹೋದರಿಗೆ ಸೀಟು ಬಿಟ್ಟು ಕೊಡಲು ನಾನು ಸಿದ್ಧನಿದ್ದೇನೆ. ಆದರೆ ಎಂದಿಗೂ ಮುಸ್ಲಿಮರಿಗೆ ಕೊಡುವುದಿಲ್ಲ ಎಂದು ಟೀಕಿಸಿದರು.

ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಇಬ್ಬರೂ ಕನಸು ಕಾಣುತ್ತಿದ್ದಾರೆ. ಬರೆದಿಟ್ಟುಕೊಳ್ಳಿ, ಅಧಿಕೃತವಾಗಿ ವಿರೋಧ ಪಕ್ಷದ ನಾಯಕರಾಗಲು 24 ಸೀಟು ಬೇಕು. ಮುಂದಿನ ಚುನಾವಣೆಯಲ್ಲಿ ನಿಮ್ಮಿಂದ ಅದೂ ಸಾಧ್ಯವಿಲ್ಲ ಎಂದು ಟಾಂಗ್ ಕೊಟ್ಟರು.

ಕರ್ನಾಟಕದಲ್ಲಿ ಇದೀಗ ಹಿಜಾಬ್ ವಿವಾದ ಉದ್ಭವಿಸಲು ಎಸ್​ಡಿಪಿಐ ಮತ್ತು ಪಿಎಫ್​​ಐ‌ ಮುಖ್ಯ ಕಾರಣ. ಆ ಸಂಘಟನೆಗಳನ್ನು ನಿಷೇಧಿಸುವಂತೆ ಮುಸ್ಲಿಂ ಮುಖಂಡರೇ ಒತ್ತಾಯಿಸುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತ್ರ ಹಿಜಾಬ್ ವಿವಾದಕ್ಕೆ ಬಿಜೆಪಿ ಕಾರಣ ಎನ್ನುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದಲ್ಲಿ ಎರಡು ಬಣಗಳಿವೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು. ಉಡುಪಿ ಕಾಲೇಜಿನಲ್ಲಿದ್ದ 96 ಮಕ್ಕಳ ಪೈಕಿ ಆರು ಮಂದಿ ಮಾತ್ರ ಹಿಜಾಬ್ ಹಾಕಿಕೊಳ್ಳುತ್ತಿದ್ದರು. ಆ 6 ಜನರಿಗೆ ಯಾರು ಹಿಜಾಬ್ ಹಾಕಲು ಹೇಳಿದವರು ಯಾರು ಅಂತ ಕೇಳಬೇಕಿತ್ತು. ಆದರೆ ಈ ಮಕ್ಕಳು ಶಾಲೆ ಬೇಕಾದರೂ ಬಿಡುತ್ತೇವೆ. ಹಿಜಾಬ್ ಬಿಡುವುದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಮಕ್ಕಳಿಂದ ಕಾಂಗ್ರೆಸ್​ನವರು ತಮಗೆ ಬೇಕಾದಂತೆ ಹೇಳಿಕೆ ನೀಡುತ್ತಿದ್ದಾರೆ. ಇಂಥ ಗಿಮಿಕ್​ಗಳಿಂದ ಮತ ಸಿಗಬಹುದು ಎನ್ನುವ ಭ್ರಮೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಅಭಿಪ್ರಾಯಪಟ್ಟರು.

ಹರ್ಷ ಕುಟುಂಬಕ್ಕೆ ₹50 ಸಾವಿರ ಸಹಾಯ ಘೋಷಿಸಿದ ಮಂತ್ರಾಲಯ ಸ್ವಾಮೀಜಿ

ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಸುಬುದೇಂದ್ರ ತೀರ್ಥ ಸ್ವಾಮೀಜಿ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಬಜರಂಗದಳದ ಮೃತ ಹರ್ಷ ಕುಟುಂಬಕ್ಕೆ ಸಹಾಯಾರ್ಥವಾಗಿ ರಾಯರ ಪ್ರಸಾದರೂಪವಾಗಿ ₹ 50 ಸಾವಿರ ಹಣವನ್ನು ಮಂತ್ರಾಲಯ ಸಂಸ್ಥಾನ ಘೋಷಿಸಿದೆ. ಸದ್ಯ ಆ ಹಣವನ್ನು ಹರ್ಷ ಕುಟುಂಬಸ್ಥರಿಗೆ ತಲುಪಿಸಲು ಮಂತ್ರಾಲಯ ಮಠ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: ಸಾಲು ಸಾಲು ಸಂಕಷ್ಟದ ನಡುವೆ ಕುಟುಂಬ ಸಮೇತರಾಗಿ ಸಚಿವ ಕೆ ಎಸ್ ಈಶ್ವರಪ್ಪ ಅವಧೂತ ವಿನಯ್ ಗುರೂಜಿ ಭೇಟಿ

ಇದನ್ನೂ ಓದಿ: ಹರ್ಷ ಮನೆಗೆ ಪ್ರತಾಪ್​​ ಸಿಂಹ ಭೇಟಿ; ಸಾಂತ್ವನ ಹೇಳಿ 5 ಲಕ್ಷ ರೂ. ನೆರವು

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?