ರಾಯಚೂರು: ಶಕ್ತಿ ಯೋಜನೆ ಹೆಸರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಭಾಗ್ಯ ಸಿಕ್ಕಿದೆ(Free Bus Travel For Women Scheme). ಹೀಗಾಗಿ ಎಲ್ಲಾ ಸರ್ಕಾರಿ ಬಸ್ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ. ಸರ್ಕಾರದ ಶಕ್ತಿ ಯೋಜನೆ ಎಫೆಕ್ಟ್ನಿಂದಾಗಿ ರಾಯಚೂರಿನ(Raichur) ಗ್ರಾಮೀಣ ಭಾಗದ ಬಸ್‌ಗಳಲ್ಲಿ ಕಂಡಕ್ಟರ್ಗಳು ಪರದಾಡುವಂತಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪ್ರಯಾಣಿಕರಿಗೆ ಟಿಕೆಟ್ ನೀಡಲು ಹರಸಾಹಸ ಪಡುತ್ತಿರುವುದು ಕಂಡು ಬಂದಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್-ಅಂಕಲಿಮಠ-ಮುದೇನೂರು ಮಾರ್ಗದಲ್ಲಿ ಬಸ್ ಫುಲ್ ರಶ್ ಆಗಿದೆ. ಈ ಹಿನ್ನೆಲೆ ಟಿಕೆಟ್ ಕೊಡಲಾಗದೇ ಬಸ್ ಕಂಡಕ್ಟರ್ ಪರದಾಡಿದ್ದಾರೆ. ಪ್ರಯಾಣಿಕರಿಗೆ ಟಿಕೆಟ್ ನೀಡಲು ಸ್ಥಳವಿಲ್ಲದೇ ಕೊನೆಗೆ ಸೀಟ್ ಮೇಲಿನ ರಾಡ್ ಮೇಲೆ ಕುಳಿತು ಟಿಕೆಟ್ ನೀಡಿದ್ದಾರೆ. ಸದ್ಯ ಕಂಡಕ್ಟರ್ನ ಪಜೀತಿಯ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ
ಮುದಗಲ್-ಮುದೇನೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಶಕ್ತಿ ಯೋಜನೆ ಜಾರಿಯಾದ ಒಂದು ತಿಂಗಳಲ್ಲಿ 16 ಕೋಟಿಗೂ ಹೆಚ್ಚು ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.
ಜುಲೈ 4 ರಂದು 70 ಲಕ್ಷ ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದು ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ