ರಾಯಚೂರು: ಚಿರತೆ ಹೆದರಿಸಲು ಹೋದವರ ಮೇಲೆ ಚಿರತೆ ದಾಳಿ, ಮೂವರಿಗೆ ಗಂಭೀರ ಗಾಯ

ಚಿರತೆಯನ್ನು ಹೆದರಿಸಲು ಕೈಗೆ ಸಿಕ್ಕ ಆಯುಧ ತೆಗೆದುಕೊಂಡು ಹೋಗಿದ್ದ ಮೂವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರು: ಚಿರತೆ ಹೆದರಿಸಲು ಹೋದವರ ಮೇಲೆ ಚಿರತೆ ದಾಳಿ, ಮೂವರಿಗೆ ಗಂಭೀರ ಗಾಯ
ಘಟನಾ ಸ್ಥಳ
Follow us
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು

Updated on: Jul 07, 2024 | 2:53 PM

ರಾಯಚೂರು, ಜುಲೈ.07: ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ (Leopard) ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಂಗನಾಥ್ ಎಂಬಾತ ಬಹಿರ್ದೆಸೆಗೆ ಹೋದಾಗ ಚಿರತೆ ಪ್ರತ್ಯಕ್ಷವಾಗಿತ್ತು. ಇನ್ನು ಚಿರತೆ ಪ್ರತ್ಯಕ್ಷವಾದ ಬಗ್ಗೆ ರಮೇಶ್ ಮತ್ತು ಮಲ್ಲಣ್ಣನಿಗೆ ರಂಗನಾಥ್ ಮಾಹಿತಿ ನೀಡಿದ್ದು ಮೂವರು ಸೇರಿ ಆಯುಧ ತೆಗೆದುಕೊಂಡು ಚಿರತೆಗೆ ಬೆದರಿಸಲು ಯತ್ನಿಸಿದ್ದಾರೆ. ಈ ವೇಳೆ ರಂಗನಾಥ್, ಮಲ್ಲಣ್ಣ ಹಾಗೂ ರಮೇಶ್ ಮೇಲೆ ಚಿರತೆ ದಾಳಿ ನಡೆಸಿದೆ.

ಗಾಯಾಳುಗಳಿಗೆ ದೇವದುರ್ಗ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಎನ್.ಗಣೇಕಲ್, ಜಾಲಹಳ್ಳಿ, ಕಮದಾಳು, ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದ ನಿವಾಸಿಗಳಲ್ಲಿ ಆತಂಕ‌‌ ಮನೆ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದೇವದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿರತೆ ದಾಳಿ ಬೆಚ್ಚಿಬಿದ್ದ ಗ್ರಾಮಸ್ಥರು

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ವಗಲಗೆರೆ ಗ್ರಾಮದ ರೈತ ರಾಜಣ್ಣಗೆ ಸೇರಿದ ಮೇಕೆ, ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಒಂದೇ ದಿನ 2 ಬಾರಿ ಚಿರತೆ ದಾಳಿಯಿಂದ ವಗಲಗೆರೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆ ಗೈಡ್​ಲೈನ್ಸ್

ಮತ್ತೆ ಕಂಪಿಸಿದ ಭೂಮಿ, ನಿವಾಸಿಗಳಲ್ಲಿ ಆತಂಕ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ತಿಕೋಟ ತಾಲೂಕಿನ ಸೋಮದೇವರಹಟ್ಟಿ, ಘೋಣಸಗಿ ಕಳ್ಳಕವಟಗಿ, ಹುಬನೂರ, ಟಕ್ಕಳಕಿ ಭಾಗದಲ್ಲಿ ರಾತ್ರಿ 9.26ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದ್ರಿಂದ ಭಯಗೊಂಡ ನಿವಾಸಿಗಳು ಮನೆಗಳಿಂದ ಹೊರ ಓಡಿಬಂದ್ರು.

ವಿಶೇಷ ಊಟ ಸೇವಿಸಿದ ಅಸ್ವಸ್ಥಗೊಂಡ ವಿದ್ಯಾರ್ಥಿಗಳು

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರೊ ಮೊರಾರ್ಜಿ ದೇಸಾಯಿ ಹಾಸ್ಟೆಲ್​​ನಲ್ಲಿ ಊಟ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮೊನ್ನೆ ಅಮವಾಸ್ಯೆ ಹಿನ್ನೆಲೆಯಲ್ಲಿ ವಿಶೇಷ ಊಟ ಸಿದ್ಧಪಡಿಸಲಾತ್ತು. ರಾತ್ರಿ ವಿದ್ಯಾರ್ಥಿಗಳು ಊಟ ಸೇವಿಸದ ಬಳಿಕ ವಾಂತಿ, ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ 31 ವಿದ್ಯಾರ್ಥಿಗಳ ಪೈಕಿ 29 ಮಕ್ಕಳಿಗೆ ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದ್ರೆ, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ