AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ.

Raichur News: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ
ವಿದ್ಯುತ್​ ತಗುಲಿ ಲೈನ್​ಮ್ಯಾನ್​ ಸಾವು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 04, 2023 | 2:53 PM

Share

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ(Arakera) ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ(KEB) ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಆಸ್ತಿ ವಿವಾದ ಹಿನ್ನೆಲೆ‌ ಸಹೋದರರ ನಡುವೆ ಗಲಾಟೆ; ಓರ್ವನ ಬರ್ಬರ ಹತ್ಯೆ ಮತ್ತೋರ್ವನ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಆಸ್ತಿ ವಿವಾದ ಹಿನ್ನೆಲೆ‌ ಸಹೋದರರ ನಡುವೆ ಗಲಾಟೆಯಾಗಿದ್ದು, ಓರ್ವನ ಬರ್ಬರ ಹತ್ಯೆಯಾಗಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸುರೇಶ್ ಖಣಗಾಂವಿಯನ್ನ ಸಹೋದರ ಚಿಕ್ಕಪ್ಪನ ಮಗ ಶಂಕರ್ ಖಣಗಾಂವಿ ಹತ್ಯೆ ಮಾಡಿದ್ದಾನೆ. ಹಲವು ವರ್ಷಗಳಿಂದ ಸುರೇಶ್ ಮತ್ತು ಶಂಕರ್ ನಡುವೆ ಜಮೀನಿನ ವ್ಯಾಜ್ಯವಿತ್ತು. ಇಂದು(ಜೂ.4) ಸುರೇಶ್ ಜಮೀನಿಗೆ ಹೋದ ಅನ್ನೋ ಕಾರಣಕ್ಕೆ ಹತ್ಯೆ ಮಾಡಿದ್ದಾನೆ.ಈ ವೇಳೆ ಜಗಳ ಬಿಡಿಸಲು ಹೋದ ಸದಾ ಖಣಗಾಂವಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:Yadgir New: ಚಲಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಮಹಿಳೆ ಸಾವು

ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಓರ್ವ ಸಾವು

ಮಂಡ್ಯ: ಜಿಲ್ಲೆ ಮದ್ದೂರು ತಾಲೂಕಿನ ಚಳ್ಳನಕೆರೆ ಗೇಟ್ ಬಳಿ ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅಪಘಾತದ ರಭಸಕ್ಕೆ ವಾಹನ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎಂಬುದು ತಿಳಿದಿಲ್ಲ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್