10 ವರ್ಷಗಳ ಪ್ರೀತಿ, ಹತ್ತಾರು ಬಾರಿ ದೈಹಿಕ ಸಂಬಂಧ: ಈಗ ಮದುವೆ ಮಾತು ಬಂದಾಗ ಯುವಕನಿಂದ ಕೊಲೆ ಬೆದರಿಕೆ

ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಪ್ರೀತಿ ಹೆಸರಿನಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಯುವಕನೊಬ್ಬ 10 ವರ್ಷ ಪ್ರೀತಿಸಿ, ಮದುವೆ ಭರವಸೆ ನೀಡಿ ದೈಹಿಕ ಸಂಬಂಧ ಹೊಂದಿದ್ದ. ಇದೀಗ ಬೇರೊಬ್ಬರನ್ನು ಮದುವೆಯಾಗಲು ಸಿದ್ಧನಾಗಿದ್ದು, ಸಂತ್ರಸ್ತ ಯುವತಿ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪ್ರೀತಿ ದೋಖಾ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ.

10 ವರ್ಷಗಳ ಪ್ರೀತಿ, ಹತ್ತಾರು ಬಾರಿ ದೈಹಿಕ ಸಂಬಂಧ: ಈಗ ಮದುವೆ ಮಾತು ಬಂದಾಗ ಯುವಕನಿಂದ ಕೊಲೆ ಬೆದರಿಕೆ
ಪ್ರೀತಿ ಹೆಸರಿನಲ್ಲಿ ವಂಚನೆ ಪ್ರಕರಣ
Edited By:

Updated on: Apr 26, 2026 | 2:45 PM

ರಾಯಚೂರು, ಏ.26: ಪ್ರೀತಿ ಹೆಸರಿನಲ್ಲಿ ದೋಖಾ ಮಾಡಿರುವ ಪ್ರಕರಣಗಳು ಹೆಚ್ಚಾಗು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಪ್ರೀತಿ ಮಾಡಿ ಎಲ್ಲವೂ ಮುಗಿದ ಮೇಲೆ ಪ್ರೀತಿ ಬೇಕಾಗಿರುವುದಿಲ್ಲ. ಇಂತಹ ಘಟನೆಗಳು ಇದೀಗ ಹೆಚ್ಚಾಗಿದೆ. ಇಂತಹದೇ ಒಂದು ಘಟನೆ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ 10 ವರ್ಷಗಳಿಂದ ಪ್ರೀತಿಸುವ ನಾಟಕವಾಡಿ, ಈಗ ಬೇರೊಬ್ಬ ಯುವತಿಯೊಂದಿಗೆ ಮದುವೆಯಾಗಲು ಸಿದ್ಧನಾಗಿದ್ದ ಯುವಕನ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲಿಂಗಸುಗೂರು ಪಟ್ಟಣದ ನಿವಾಸಿ ಶಿವು ಅಲಿಯಾಸ್ ಶಿವಕುಮಾರ್ ಎಂಬಾತನ ಮೇಲೆ ಈ ಯುವತಿ ದೂರು ನೀಡಿದ್ದಾಳೆ. ಸಂತ್ರಸ್ತೆಯ ಆರೋಪದಂತೆ, ಕಳೆದ ಒಂದು ದಶಕದಿಂದ ಶಿವು ಆಕೆಯನ್ನು ಪ್ರೀತಿಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಹತ್ತಿರವಾಗಿದ್ದ ಆತ, ಹಲವು ಬಾರಿ ಯುವತಿಯ ಮೇಲೆ ಬಲವಂತವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಎಂಗೇಜ್ಮೆಂಟ್ ಆದ ರಾತ್ರಿಯೇ ಯುವತಿ ಪ್ರಿಯತಮನೊಂದಿಗೆ ಪರಾರಿ! ಲವ್ ಜಿಹಾದ್ ಶಂಕೆ

ಇತ್ತೀಚೆಗೆ ಶಿವು ಸಂತ್ರಸ್ತೆಯನ್ನು ಬಿಟ್ಟು ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸುತ್ತಿದ್ದ. ಈ ವಿಷಯ ತಿಳಿದ ಸಂತ್ರಸ್ತೆ ನ್ಯಾಯಕ್ಕಾಗಿ ಕೇಳಿದಾಗ, ಆರೋಪಿ ಶಿವಕುಮಾರ್ ಮತ್ತು ಆತನ ಕುಟುಂಬಸ್ಥರು ಸಂತ್ರಸ್ತೆಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಯುವತಿ ನ್ಯಾಯಕ್ಕಾಗಿ ಬೀದಿಯಲ್ಲಿ ನಿಂತು ಹೋರಾಟ ನಡೆಸುತ್ತಿದ್ದಾಳೆ. ಆರೋಪಿ ಶಿವು ಹಾಗೂ ಆತನಿಗೆ ಸಾಥ್ ನೀಡಿದ ಕುಟುಂಬಸ್ಥರ ವಿರುದ್ಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Sun, 26 April 26

ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
Follow Us