ಮದ್ಯದ ದರ ಏರಿಕೆ ಮಾಡುವ ಸುಳಿವು ನೀಡಿದ ಸಚಿವ ಆರ್​ಬಿ ತಿಮ್ಮಾಪುರ

ರಾಜ್ಯ ಸರ್ಕಾರ ಬಡವರ ನೆಚ್ಚಿನ‌ ಕೆಲ ಮದ್ಯದ ಬ್ರ್ಯಾಂಡ್​ಗಳ ದರ ಹೆಚ್ಚಿಸಿದೆ ಎಂದು ವಂದತಿ ಹರಿದಾಡುತ್ತಿತ್ತು. ಇದಕ್ಕೆ ಅಬಕಾರಿ ಇಲಾಖೆ ಸಚಿವ ಆರ್​ಬಿ ತಿಮ್ಮಾಪುರ ಪ್ರತಿಕ್ರಿಯಿಸಿ ಯಾವುದೇ ಮದ್ಯದ ದರ ಏರಿಕೆ ಮಾಡಿಲ್ಲ ಎಂದು ಹೇಳಿದ್ದರು. ಆದರೆ ಈಗ ಸಚಿವರೇ ಮದ್ಯದ ಬೆಲೆ ಏರಿಕೆ ಮಾಡುವ ಸುಳಿವು ನೀಡಿದ್ದಾರೆ.

ಮದ್ಯದ ದರ ಏರಿಕೆ ಮಾಡುವ ಸುಳಿವು ನೀಡಿದ ಸಚಿವ ಆರ್​ಬಿ ತಿಮ್ಮಾಪುರ
ಸಚಿವ ಆರ್​ ಬಿ ತಿಮ್ಮಾಪುರ
Follow us
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ

Updated on: Jan 30, 2024 | 6:35 PM

ರಾಯಚೂರು, ಜನವರಿ 30: ಅಬಕಾರಿ ಇಲಾಖೆ ಸಚಿವ ಆರ್​.ಬಿ.ತಿಮ್ಮಾಪುರ (RB Timmapur) ಮದ್ಯದ ದರ ಏರಿಕೆ ಮಾಡುವ ಸುಳಿವು ಕೊಟ್ಟಿದ್ದಾರೆ. ಮದ್ಯದ ಬೆಲೆ (Liquor Price) ಏರಿಸಿದರೆ ಒಳ್ಳೇದಲ್ವಾ? ಮದ್ಯದ (Alcohol) ಬೆಲೆ ಏರಿಕೆ ಮಾಡಿದರೆ ನಷ್ಟ ಯಾರಿಗೆ..? ಮದ್ಯದ ಬೆಲೆ ಏರಿಸಿದರೆ ಕುಡುಕರ ಸಂಖ್ಯೆ ಕಡಿಮೆ ಆಗಲ್ವಾ? ರಾಜ್ಯದಲ್ಲಿ ಹೆಚ್ಚುವರಿ ಮದ್ಯ ಅಂಗಡಿಗಳಿಗೆ ಸದ್ಯಕ್ಕೆ ಅನುಮತಿ ಇಲ್ಲ ಎಂದು ಹೇಳಿದರು. ರಾಯಚೂರಿನಲ್ಲಿ (Raichur) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಆಂಧ್ರ ಪ್ರದೇಶ‌‌ಕ್ಕೆ ಹೋಲಿಕೆ ಮಾಡಿದರೇ ಕ್ವಾಲಿಟಿ ಡ್ರಿಂಕ್ಸ್ ನಮ್ದೆ. ಆಮದು ಆಗದೆ ರೀತಿ ನಾವು ತಡೆಯುತ್ತೇವೆ. ಅಕ್ರಮವಾಗಿ ಆಮದು ಮಾಡಿಕೊಂಡವರ ಮೇಲೆ ಕೇಸ್​ ಅನ್ನು ಈಗಾಗಲೇ ಹಾಕುತ್ತಿದ್ದೇವೆ ಎಂದರು.

ಬಿಯರ್ ಪ್ರಿಯರಿಗೆ ದರ ಏರಿಕೆ ಶಾಕ್ ನೀಡಲು ಮುಂದಾದ ಸರ್ಕಾರ

ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿರುವುದಾಗಿ ವರದಿಯಾಗಿದೆ. ಪ್ರತಿ 650 ಮಿಲಿ ಬಿಯರ್ ಬಾಟಲಿಗೆ 8-10 ರೂ. ವರೆಗೆ ದರ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ‘ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968’ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆ ರೂಪಿಸಲಾಗಿದ್ದು, ಇದರಲ್ಲಿ ದರ ಹೆಚ್ಚಳವನ್ನು ಪ್ರಸ್ತಾಪಿಸಲಾಗಿತ್ತು. ದರ ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕಾಗಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬಿಯರ್ ಮಾರಾಟದಲ್ಲಿ ದೊಡ್ಡ ಮಟ್ಟದ ಬೆಳವಣಿಗೆ ಕಂಡುಬಂದಿರುವುದರಿಂದ ಆ ಮೂಲದಿಂದ ಹೆಚ್ಚು ಆದಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ಸುಂಕವನ್ನು ಹೆಚ್ಚಿಸುವತ್ತ ಮನ ಮಾಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್; ಬಡವರ ಫೇವರಿಟ್ ಬ್ರ್ಯಾಂಡ್​ಗಳ ದರ ಹೆಚ್ಚಳ

ಕರಡು ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಿಯರ್‌ ಬಾಟಲಿಯ ಮೇಲೆ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಶೇಕಡಾ 10 ರಷ್ಟು ಹೆಚ್ಚಿಸಲಾಗುತ್ತದೆ.

ಒಂದು ವೇಳೆ ದರ ಹೆಚ್ಚಳ ಜಾರಿಗೆ ಬಂದಿದ್ದೇ ಆದಲ್ಲ, ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ಮದ್ಯದ ಬೆಲೆಯಲ್ಲಿ ಮಾಡಿದ ಏರಿಕೆಯಾಗಲಿದೆ. ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 175ರಿಂದ ಶೇ 185ಕ್ಕೆ ಹೆಚ್ಚುವರಿ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದರು.

ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವೇ ನಿರ್ಣಾಯಕ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM