Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ನೀರಾವರಿ ನಿಗಮದ ಮೇಲೆ ಲೋಕಾಯುಕ್ತ ದಾಳಿ: ನಾಲ್ವರು ಇಂಜಿನಿಯರ್​ಗಳು ಬಲೆಗೆ

ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ಕರ್ನಾಟಕ ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳು ಸಿಕ್ಕಿಬಿದಿದ್ದಾರೆ.

ರಾಯಚೂರು ನೀರಾವರಿ ನಿಗಮದ ಮೇಲೆ ಲೋಕಾಯುಕ್ತ ದಾಳಿ: ನಾಲ್ವರು ಇಂಜಿನಿಯರ್​ಗಳು ಬಲೆಗೆ
ನೀರಾವರಿ ಇಲಾಖೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 10, 2022 | 5:34 PM

ರಾಯಚೂರು: ನಗರದ ಹೈದ್ರಾಬಾದ್ ರಸ್ತೆಯಲ್ಲಿರುವ ಕರ್ನಾಟಕ ನೀರಾವರಿ ನಿಗಮದ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ (Lokayukta raid) ಮಾಡಿದ್ದು, ರೆಡ್ ಹ್ಯಾಂಡ್ ಆಗಿ ನಾಲ್ಕು ಜನ ನೀರಾವರಿ ಇಲಾಖೆ ಅಧಿಕಾರಿಗಳು ಸಿಕ್ಕಿಬಿದಿದ್ದಾರೆ. ಬಿಲ್ ಕ್ಲಿಯರ್ ಮಾಡಲು 5-10 ಸಾವಿರ ರೂ. ಲಂಚ ಸ್ವೀಕರಿಸಲಾಗಿದೆ. ಬಳ್ಳಾರಿ ಮೂಲದ ಗುತ್ತಿಗೆದಾರ ಈಶ್ವರಯ್ಯ ನೀಡಿದ ದೂರಿನನ್ವಯ ಲಂಚ ಪಡೆಯುವಾಗ ರೆಡ್​ಹ್ಯಾಂಡ್ ಆಗಿ ಇಂಜಿನಿಯರ್ಸ್ ಸಿಕ್ಕಿಬಿದಿದ್ದಾರೆ. ಸದ್ಯ ನಾಲ್ಕು ಇಂಜಿನಿಯರ್ಸ್​ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿಗಳ ಮನೆ ಮೇಲೆ ಇಡಿ ರೇಡ್

ಬೆಂಗಳೂರು: ರಾಜ್ಯದಲ್ಲಿ ನಡೆದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ (PSI recruitment scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ ED raid) ತನಿಖೆಗೆ ಇಳಿದಿದೆ. ಹಗರಣದ ಪ್ರಮುಖ ಆರೋಪಿಗಳ ಮನೆ ಮೇಲೆ ಇ.ಡಿ ಅಧಿಕಾರಿಗಳು ಇಂದು ರೇಡ್ ಮಾಡಿದ್ದಾರೆ. ADGP ಅಮೃತ್​ ಪಾಲ್ ಹಾಗೂ DYSP ಶಾಂತ​ಕುಮಾರ್ ಮನೆ ಮೇಲೆ ದಾಳಿಗಳು ನಡೆದಿವೆ.

ಅಕ್ರಮ ಹಣ ವರ್ಗಾವಣೆ (ಮನಿ ಲ್ಯಾಂಡ್ರಿಂಗ್ –Money Laundering) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದರಂತೆ ಇಡಿ ಅಧಿಕಾರಿಗಳು ಇಂದು 11 ಕಡೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ. ಇಡಿ ಅಧಿಕಾರಿಗಳ ತಂಡವು ಸಹಕಾರನಗರದ ಅಮೃತ್ ಪಾಲ್ ನಿವಾಸದ ಮೇಲೆ ದಾಳಿ‌ ನಡೆಸಿ ಪರಿಶೀಲನೆ ನಡೆಸುತ್ತಿದೆ. ಇನ್ನು ಶಾಂತಕುಮಾರ್ ಮನೆ ಪೊಲೀಸ್ ಕ್ವಾರ್ಟರ್ಸ್ ​ನಲ್ಲಿದೆ. ಮನೆ ಬಾಗಿಲ ಮೇಲೆ ಶಾಂತಕುಮಾರ್ ಎಂಬ ನಾಮಫಲಕವಿದೆ. ಮಾಧ್ಯಮದವ್ರು ಅದನ್ನು ಚಿತ್ರೀಕರಿಸ್ತಿದ್ದಂತೆ ಕುಟುಂಬಸ್ಥರು ಕರ್ಚೀಫ್ ಮತ್ತು ಟವಲ್ ನಿಂದ ನಾಮಫಲಕ ಮುಚ್ಚಿದರು. PSI ನೇಮಕಾತಿ ಹಗರಣದಲ್ಲಿ ಸದ್ಯ ಅಮೃತ್ ಪಾಲ್ ಮತ್ತು ಶಾಂತಕುಮಾರ್ ಜೈಲಿನಲ್ಲಿ ವಾಸವಾಗಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಿನ್ನೆಲೆ ಕಳೆದ ಆಗಸ್ಟ್ ನಲ್ಲಿ ಪ್ರಕರಣ ದಾಖಲಾಗಿತ್ತು. ಮತ್ತೊಬ್ಬ ಆರೋಪಿ ಶ್ರೀಧರ್ ಮನೆಯಲ್ಲಿ 1.5 ಕೋಟಿ ಹಣ ಪತ್ತೆಯಾಗಿತ್ತು. ಇದುವರೆಗೆ‌ ಪ್ರಕರಣ ಸಂಬಂಧ 4 ಕೋಟಿಗೂ ಹೆಚ್ಚು ಹಣ ವಶಕ್ಕೆ ಪಡೆಯಲಾಗಿತ್ತು. ಇ.ಡಿ ಅಧಿಕಾರಿಗಳು ಮನಿ ಲ್ಯಾಂಡ್ರಿಂಗ್ ಕೇಸ್ ಸಂಬಂಧಿಸಿದಂತೆ ಐದು ಗಂಟೆಗಳಿಂದ ನಿರಂತರವಾಗಿ ಬ್ಯಾಂಕ್ ದಾಖಲೆಗಳ ಪರಿಶೀಲನೆ ನಡೆಸ್ತಿದ್ದಾರೆ. ಐವರು ಇ.ಡಿ. ಅಧಿಕಾರಿಗಳ ತಂಡದಿಂದ ದಾಳಿ, ಪರಿಶೀಲನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Thu, 10 November 22

ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ