AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!

ಮಂತ್ರಾಲಯದ ಕನ್ನಡಿಗರಿಗಾಗಿ ನಿರ್ಮಿಸಿದ ಕರ್ನಾಟಕ ಅತಿಥಿ ಗೃಹ ಭೀಕರ ಅವ್ಯವಸ್ಥೆಯಲ್ಲಿದೆ. ಶೌಚಾಲಯಗಳು ದುರ್ವಾಸನೆ, ಒಡೆದ ಪೈಪ್‌ಗಳು, ನೀರಿನಲ್ಲಿ ವಿದ್ಯುತ್ ಪ್ರವಾಹದಂತಹ ಸಮಸ್ಯೆಗಳಿವೆ. ಹಾಸಿಗೆಗಳಲ್ಲಿ ತಿಗಣೆ, ಎಸಿ ಕೆಟ್ಟು ಹೋಗಿದ್ದರೂ ಅಧಿಕ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಉಪಲೋಕಾಯುಕ್ತರ ಸೂಚನೆಯಂತೆ ಪ್ರಕರಣ ದಾಖಲಾಗಿದ್ದು, ನಿರ್ವಹಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ. ಯಾತ್ರಾರ್ಥಿಗಳಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ತನಿಖೆ ಮಹತ್ವ ಪಡೆದಿದೆ.

ಮಂತ್ರಾಲಯದ ಕರ್ನಾಟಕ ಅತಿಥಿ ಗೃಹದಲ್ಲಿ ಭ್ರಷ್ಟಾಚಾರದ ಹೊಗೆ: ಅಸ್ವಚ್ಛತೆ, ದುರಾಡಳಿತ ವಿರುದ್ಧ ಉಪಲೋಕಾಯುಕ್ತರ ಗರಂ!
ಸಾಂದರ್ಭಿಕ ಚಿತ್ರ
Ramesha M
| Edited By: |

Updated on: Mar 31, 2026 | 9:10 PM

Share

ರಾಯಚೂರು, ಮಾ.31: ಮಂತ್ರಾಲಯಕ್ಕೆ ಭೇಟಿ ನೀಡುವ ಕನ್ನಡಿಗರಿಗಾಗಿ ನಿರ್ಮಿಸಲಾದ ‘ಕರ್ನಾಟಕ ಅತಿಥಿ ಗೃಹ’ವು ಈಗ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಅತಿಥಿ ಗೃಹದ ದುರವಸ್ಥೆಯನ್ನು ಕಂಡು ಆಘಾತಕ್ಕೊಳಗಾದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆಯಂತೆ, ರಾಯಚೂರು ಲೋಕಾಯುಕ್ತ ಡಿವೈಎಸ್‌ಪಿ ರವಿ ಪುರುಷೋತ್ತಮ್ ಅವರು ನೀಡಿದ ವರದಿಯ ಆಧಾರದ ಮೇಲೆ ಇದೀಗ ಸ್ವಯಂಪ್ರೇರಿತ ದೂರು ದಾಖಲಾಗಿದೆ.

2022ರ ಆಗಸ್ಟ್‌ನಲ್ಲಿ ಲೋಕಾರ್ಪಣೆಗೊಂಡ ಈ ಸುಸಜ್ಜಿತ ಅತಿಥಿ ಗೃಹವು ಕೇವಲ ಮೂರೇ ವರ್ಷಗಳಲ್ಲಿ ಪಾಳುಬಿದ್ದಂತಾಗಿದೆ. ಲೋಕಾಯುಕ್ತರ ತನಿಖಾ ವರದಿಯಲ್ಲಿ ಈ ಕೆಳಗಿನ ಗಂಭೀರ ಲೋಪಗಳು ಪತ್ತೆಯಾಗಿವೆ. 50 ಶೌಚಾಲಯಗಳ ಸ್ವಚ್ಛತೆಗೆ ಇರುವುದು ಕೇವಲ ಇಬ್ಬರು ಸಿಬ್ಬಂದಿ. ಫ್ಲಷ್ ವ್ಯವಸ್ಥೆಯೇ ಇಲ್ಲದೆ ಶೌಚಾಲಯಗಳು ನಾರುತ್ತಿವೆ.

ನೀರಿಗಾಗಿ ಇಟ್ಟಿದ್ದ 8 ಸಿಂಟೆಕ್ಸ್ ಪೈಕಿ 5 ಒಡೆದು ಹೋಗಿವೆ. ಡ್ರೈನೇಜ್ ಪೈಪ್‌ಗಳು ಒಡೆದು ಯಾತ್ರಾರ್ಥಿಗಳು ದುರ್ವಾಸನೆಯಲ್ಲಿ ಕಾಲ ಕಳೆಯುವಂತಾಗಿದೆ. ಗೀಸರ್ ವೈರಿಂಗ್ ಲೋಪದಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗುತ್ತಿದ್ದು, ನಲ್ಲಿ ನೀರಿನಲ್ಲಿ ವಿದ್ಯುತ್ ಪ್ರವಹಿಸುತ್ತಿದೆ. ಇದು ಜೀವಹಾನಿಗೆ ಆಹ್ವಾನ ನೀಡುವಂತಿದೆ.

ಇನ್ನು ಸ್ನಾನಕ್ಕೆ ಒಂದು ಬಕೆಟ್ ಬಿಸಿನೀರಿಗೆ 30 ರೂಪಾಯಿ ವಸೂಲಿ ಮಾಡಲಾಗುತ್ತಿದೆ. ಹಾಸಿಗೆಗಳಲ್ಲಿ ತಿಗಣೆ ಮತ್ತು ಸೊಳ್ಳೆಗಳ ಕಾಟವಿದ್ದು, ಬೆಡ್ ಶೀಟ್‌ಗಳನ್ನು ದಿನನಿತ್ಯ ಸ್ವಚ್ಛಗೊಳಿಸುತ್ತಿಲ್ಲ. 10 ಎಸಿ ರೂಮ್‌ಗಳಲ್ಲಿ 6 ಎಸಿಗಳು ಕೆಟ್ಟುಹೋಗಿದ್ದರೂ ಯಾತ್ರಾರ್ಥಿಗಳಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!

ಈ ಭ್ರಷ್ಟಾಚಾರ ಮತ್ತು ದುರಾಡಳಿತದ ಹಿನ್ನೆಲೆಯಲ್ಲಿ ಅತಿಥಿ ಗೃಹದ ಪತ್ರಾಂಕಿತ ವ್ಯವಸ್ಥಾಪಕ ಆಂಜನೇಯಲು ಮತ್ತು ಸಹಾಯಕ ನರಸನಗೌಡ ವಿರುದ್ಧ ಪ್ರಕರಣ ದಾಖಲಿಸಲು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಆದೇಶಿಸಿದ್ದಾರೆ. ಅಲ್ಲದೆ, ಈ ಆದೇಶದ ಪ್ರತಿಯನ್ನು ಮುಜರಾಯಿ ಸಚಿವರಿಗೂ ಕಳುಹಿಸಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesha M
Ramesha M
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ