AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣ; ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್​​ಟೇಬಲ್​ಗಳು ಅಮಾನತು

ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು (Hanuman Flag) ತೆರವುಗೊಳಿಸಿದ ಘಟನೆ ಬಳಿಕ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ​(Tipu Sultan) ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್​​ಟೇಬಲ್​ಗಳನ್ನು ಅಮಾನತುಗಳಿಸಿ ರಾಯಚೂರು (Raichur) ಎಸ್​​ಪಿ ಬಿ.ನಿಖಿಲ್ ಆದೇಶಿಸಿದ್ದಾರೆ.

ಟಿಪ್ಪು ಭಾವಚಿತ್ರಕ್ಕೆ ಅಪಮಾನ ಪ್ರಕರಣ; ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್​​ಟೇಬಲ್​ಗಳು ಅಮಾನತು
ರಾಯಚೂರಿನಲ್ಲಿ ಟಿಪ್ಪು ಬಾವಚಿತ್ರಕ್ಕೆ ಅವಮಾನ, ಇಬ್ಬರು ಕಾನ್ಸ್​ಟೇಬಲ್​ ಅಮಾನತು
ಭೀಮೇಶ್​​ ಪೂಜಾರ್
| Edited By: |

Updated on:Feb 02, 2024 | 3:51 PM

Share

ರಾಯಚೂರು, ಫೆ.02: ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ​(Tipu Sultan) ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್​​ಟೇಬಲ್​ಗಳನ್ನು ಅಮಾನತುಗಳಿಸಿ ರಾಯಚೂರು (Raichur) ಎಸ್​​ಪಿ ಬಿ.ನಿಖಿಲ್ ಆದೇಶಿಸಿದ್ದಾರೆ. ಸಿರವಾರ ಠಾಣೆಯ ಕಾನ್ಸ್​ಟೇಬಲ್​ಗಳಾದ ಇಸ್ಮಾಯಿಲ್ ಹಾಗೂ ರೇವಣಸಿದ್ದ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಹಿನ್ನಲೆ ಅಮಾನತು ಮಾಡಲಾಗಿದೆ.

ಏನಿದು ಘಟನೆ

ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದರು. ಇದನ್ನು ನೋಡಿದ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದರು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಬಳಿಕ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ಬಂದ್ ಮಾಡಿ, ರಸ್ತೆ ಮಧ್ಯೆ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದರು.

ಇದನ್ನೂ ಓದಿ:Tipu Sultan: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ, ಸಿರವಾರದಲ್ಲಿ ಪ್ರತಿಭಟನೆ

ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಅಪಮಾನ ಪ್ರಕರಣದ ಆರೋಪಿ ಅರೆಸ್ಟ್​​

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವ ಭರವಸೆ ಕೊಟ್ಟಿದ್ದರು. ಅದರಂತೆ ಪೊಲೀಸರು ಸ್ಥಳೀಯ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆ ನಡೆಸಿದ್ದರು. ಪ್ರಕರಣದ ಸಂಬಂಧ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್ (23) ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಆಕಾಶ್​ನ ಹಿನ್ನೆಲೆ, ಕೃತ್ಯ ಎಸಗಿದ್ದರ ಉದ್ದೇಶದ ಬಗ್ಗೆ ಹೇಳಿಕೆ ದಾಖಲಿಸಿಕೊಂಡಿದ್ದರು. ಇದೀಗ ಕರ್ತವ್ಯಲೋಪದಡಿ ಇಬ್ಬರು ಪೊಲೀಸ್​ ಪೇದೆಗಳನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Fri, 2 February 24

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ