ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ PSI ಮಣಿಕಂಠ ಸಸ್ಪೆಂಡ್

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್​ ಠಾಣೆ ಪಿಎಸ್​​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ PSI ಮಣಿಕಂಠ ಸಸ್ಪೆಂಡ್
ಮಣಿಕಂಠ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on: Sep 27, 2023 | 8:11 AM

ರಾಯಚೂರು, (ಸೆಪ್ಟೆಂಬರ್ 27): ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಪೊಲೀಸ್​ ಠಾಣೆ (Maski Police Station) ಪಿಎಸ್​​ಐ ಮಣಿಕಂಠ (Manikanta) ಅವರನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ (Bellary) ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ಟ್ರ್ಯಾಕ್ಟರ್​ ಚಾಲಕ ನಿರುಪಾದಿ ಎನ್ನುವರಿಗೆ ಮನಬಂದಂತೆ ಬಾಸುಂಡೆ ಬರುವಂತೆ ಥಳಿಸಿದ್ದರು. ಈ ಬಗ್ಗೆ ನಿರುಪಾದಿ ಪತ್ನಿ ಲಕ್ಷ್ಮೀ ನೀಡಿದ್ದ ದೂರಿನ ಅನ್ವಯ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲೇ ಎಫ್​ಐಆರ್ ದಾಖಲಾಗಿತ್ತು. ಅಲ್ಲದೇ ವಾಲ್ಮೀಕಿ ಸಂಘ, ಮಣಿಕಂಠ ಅವರನ್ನು ಅಮಾನತು ಮಾಡುವಂತೆ ಠಾಣೆ ಮುಂದೆ ಪ್ರತಿಭಟನೆ ಮಾಡಿತ್ತು. ಇದೀಗ ಈ ಪ್ರಕರಣದಲ್ಲಿ ಪಿಎಸ್​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್​ನಲ್ಲಿ ಮರಳು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮರಳು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ ತನ್ನ ಜೀಪ್​ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದರು. ಹಾಗೇ ಪಿಎಸ್​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಈ ಸಂಬಂಧ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!