Tipu Sultan: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ, ಸಿರವಾರದಲ್ಲಿ ಪ್ರತಿಭಟನೆ

ಕೆಲ ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದಾರೆ. ಈ ಹಿನ್ನೆಲೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಮುಸ್ಲಿಂ ಮುಖಂಡರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದು ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Tipu Sultan: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ, ಸಿರವಾರದಲ್ಲಿ ಪ್ರತಿಭಟನೆ
ಸಿರವಾರದಲ್ಲಿ ಪ್ರತಿಭಟನೆ
Follow us
| Updated By: ಆಯೇಷಾ ಬಾನು

Updated on:Jan 31, 2024 | 11:26 AM

ರಾಯಚೂರು, ಜ.31: ಟಿಪ್ಪು ಸುಲ್ತಾನ್ (Tipu Sultan) ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ನಡೆದಿದೆ. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಹಿನ್ನೆಲೆ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದಲ್ಲಿ ಘಟನೆ ಖಂಡಿಸಿ ಮುಸ್ಲಿಂ ಮುಖಂಡರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ರಸ್ತೆ ತಡೆದು ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರೋರಾತ್ರಿ ಕೆಲ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿರುವುದು ಮುಸ್ಲಿಮರ ಕಣ್ಣಿಗೆ ಬಿದ್ದಿದ್ದು ಇದರಿಂದ ತಮ್ಮ ಮನಸ್ಸಿಗೆ ನೋವಾಗಿ ಮುಸ್ಲಿಂ ಮುಖಂಡರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಸಿರವಾರ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ಬಂದ್ ಮಾಡಿ ರಸ್ತೆ ಮಧ್ಯೆ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮತ್ತೊಂದು ಕಡೆ ಹಸಿರು ಧ್ವಜ ಹಾರಾಟ, ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ

ಸ್ಥಳದಲ್ಲಿ ನಿರ್ಮಾಣವಾಗಿರುವ ಸದ್ಯದ ಪರಿಸ್ಥಿತಿಯನ್ನು ಗಮನಿಸಿ ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆಯಾಗಿದೆ. ಟಿಪ್ಪು ಸುಲ್ತಾನ್‌ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳ ಪತ್ತೆಗೆ ಸ್ಥಳೀಯ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆ ಸೇರಿದಂತೆ ಅಗತ್ಯ ತನಿಖಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಸಿರು ಧ್ವಜ ಹಾರಾಟ, ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರಿನ ಚಾವರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಸಿರು ಮತ್ತು ಹಳದಿ‌ ಬಣ್ಣದ ಧ್ವಜ ಹಾರಿಸಿರುವ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಶಶಾಂಕ್​ ಜೆಎಸ್​ ಎಂಬುವರು ಟ್ವೀಟ್ ಮಾಡಿ “ಚಾವರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಜೆ ನಗರ ಪೊಲೀಸ್​ ಠಾಣೆ ಎದುರಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಹಸಿರು ಧ್ವಜ ಹಾರಿಸಲಾಗಿದೆ. ಇದಕ್ಕೆ ಹೇಗೆ ಅವಕಾಶ ಮಾಡಿಕೊಟ್ಟಿದ್ದೀರಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ಪ್ರಶ್ನಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:25 am, Wed, 31 January 24

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?