AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನ ರೇಕಲಮರಡಿ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20ಕ್ಕೂ ಹೆಚ್ಚು ಜನ ಅಸ್ವಸ್ಥ

ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 25 ಜನ ಅಸ್ವಸ್ಥಗೊಂಡಿದ್ದು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಜನ ಬಳಲುತ್ತಿದ್ದಾರೆ. ಈ ಪೈಕಿ ಮೂವರಿಗೆ ಲಿಂಗಸುಗೂರು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರಿನ ರೇಕಲಮರಡಿ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20ಕ್ಕೂ ಹೆಚ್ಚು ಜನ ಅಸ್ವಸ್ಥ
ಕಲುಷಿತ ನೀರಿನಿಂದ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ
Follow us
ಆಯೇಷಾ ಬಾನು
|

Updated on:May 28, 2023 | 9:39 AM

ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು(Contaminated Water) ಸೇವಿಸಿ ಬಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಸಂಬಂಧ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು. ಆದ್ರೆ ಈಗ ರೇಕಲಮರಡಿ ಗ್ರಾಮದ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20 ಕ್ಕು ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ರಾಯಚೂರು(Raichur)ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಗೊರೆಬಾಳ ಗ್ರಾಮದಲ್ಲಿ ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಕಲುಷಿತ ನೀರಿನಿಂದಾಗಿ ಜನ ಜೀವದ ಜೊತೆ ಹೋರಾಡುವಂತಹ ಪರಿಸ್ಥಿತಿಯಲ್ಲಿದ್ದಾರೆ.

ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 25 ಜನ ಅಸ್ವಸ್ಥಗೊಂಡಿದ್ದು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಜನ ಬಳಲುತ್ತಿದ್ದಾರೆ. ಈ ಪೈಕಿ ಮೂವರಿಗೆ ಲಿಂಗಸುಗೂರು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಕೆಲವರಿಗೆ ಲಿಂಗಸುಗೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಊರಿಗೆ ಸರಬರಾಜು ಆಗುತ್ತಿರುವ ನೀರಿನಿಂದ ಈ ಸಮಸ್ಯೆ ಉಂಟಾಗಿರುವ ಶಂಕೆ ವ್ಯಕ್ತವಾಗಿದ್ದು ಸದ್ಯ ಗೊರೆಬಾಳ ಗ್ರಾಮದಲ್ಲೇ ವೈದ್ಯರ ತಂಡ ಠಿಕಾಣಿ ಹೂಡಿದೆ. ಈಗಾಗಲೇ ಗ್ರಾಮದ ನೀರಿನ ಸ್ಯಾಂಪಲ್ಸ್ ಪಡೆದು ವೈದ್ಯರು ಪರೀಕ್ಷೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ: ಪಿಡಿಒ ಅಮಾನತು, ಎಫ್​​ಐಆರ್​ ದಾಖಲು

ಕಲುಷಿತ ನೀರು ಕುಡಿದು 30 ಜನ ಅಸ್ವಸ್ಥ

ಮೇ.26 ರಂದು ಬೆಳಗ್ಗೆ ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, 30 ಜನ ಅಸ್ವಸ್ಥರಾದ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿತ್ತು. ಹನುಮೇಶ್(5) ಮೃತ ಬಾಲಕ. ಇನ್ನು ಅಸ್ವಸ್ಥರಾದವರಿಗೆ ಸಿರವಾರ, ದೇವದುರ್ಗ, ಅರಕೇರಾ ಹಾಗೂ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಈ ಘಟನೆಗೆ ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಆರೋಪ ಕೇಳಿಬಂದಿದೆ. ಅಲ್ಲದೇ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ (Health Department) ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಿತ್ತು.

ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಗ್ರಾಮದಲ್ಲೇ ಬೀಡು ಬಿಟ್ಟಿದ್ದು, ಮಕ್ಕಳು, ವೃದ್ಧರು ಮೇಲೆ ನಿಗಾ ಇರಿಸಿದ್ದರು. ರೋಗದ ಲಕ್ಷಣಗಳಿರುವವರಿಗೆ ಗ್ಲುಕೋಸ್‌ ಜೊತೆ, ಔಷಧಿ ನೀಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ದೇವದುರ್ಗ ಕ್ಷೇತ್ರದ ಜೆಡಿಸ್ ಶಾಸಕಿ ಕರಿಯಮ್ಮ ನಾಯಕ್ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು. ಇದೆ ವೇಳೆ ಮೃತ ಬಾಲಕ ಹನುಮೇಶ್​ ಕುಟುಂಬಸ್ಥರಿಗೆ ಶಾಸಕಿ ಕರಿಯಮ್ಮ ನಾಯಕ್ ಸಾಂತ್ವಾನ ಹೇಳಿದ್ದರು.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಶಾಸಕಿ ಕರಿಯಮ್ಮ ನಾಯಕ್ ಅಧಿಕಾರಿಗಳ ಜೊತೆ ಚರ್ಚಿಸಿ ಮೃತನ ಕುಟುಂಬಸ್ಥರಿಗೆ ಪರಿಹಾರ ನೀಡಲಾಗುತ್ತೆ. ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಪಿಡಿಓ ಅವರ ಬಗ್ಗೆ ಮಾಹಿತಿ ಪಡೆಯಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದ್ದರು.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:39 am, Sun, 28 May 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್