AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕುಸಿದುಬಿದ್ದು ಯುವಕ ದುರಂತ ಸಾವು

ಐದು ದಿನದಿಂದ ಗಣಪನಿಗೆ ಪೂಜೆ ಪುನಸ್ಕಾರ ಮಾಡಿದವರು, ನಿನ್ನೆ ಸಂಭ್ರಮದಿಂದ ಗಣೇಶ ಮೂರ್ತಿಗಳ ವಿಸರ್ಜನೆ (Ganesha Visarjan) ಮಾಡಿದರು. ಈ ಸಂಭ್ರಮದ ವೇಳೆ ಕೆಲ ಕಹಿ ಘಟನೆಗಳು ಸಂಭವಿಸಿವೆ. ರಾಜ್ಯದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ (heart attack) ಸಾವನ್ನಪ್ಪಿರುವಂತಹ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ. ಇದೀಗ ಈ ಪಟ್ಟಿಗೆ ರಾಯಚೂರು ಸಹ ಸೇರ್ಪಡೆಯಾಗಿದೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕುಸಿದುಬಿದ್ದು ಯುವಕ ದುರಂತ ಸಾವು
Abhishek
ಭೀಮೇಶ್​​ ಪೂಜಾರ್
| Edited By: |

Updated on: Sep 01, 2025 | 10:07 PM

Share

ರಾಯಚೂರು, (ಸೆಪ್ಟೆಂಬರ್ 01): ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಾಏಕಿ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಅದೇ ರೀತಿ ಘಟನೆ ರಾಯಚೂರಿನಲ್ಲೂ ಸಹ ಸಂಭವಿಸಿದೆ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ. ನಿನ್ನೆ (ಆಗಸ್ಟ್ 31_ ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಇಂದು (ಸೆಪ್ಟೆಂಬರ್ 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ‌ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಇಬ್ಬರು ಸಾವು

ಡ್ಯಾನ್ಸ್ ಮಾಡುತ್ತಿರುವಾಗಲೇ ವ್ಯಕ್ತಿಗೆ ಹೃದಯಾಘಾತ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ.

ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಯುವಕರ ಜೊತೆ ಡಿಜೆ ಹಾಡಿಗೆ ಮಂಜುನಾಥ್ ಭರ್ಜರಿ ಹೆಜ್ಜೆ ಹಾಕುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿದೆ.

ನಾಗವಲ್ಲಿ ಹಾಡಿಗೆ ಡ್ಯಾನ್ಸ್: ಹೃದಯಾಘಾತದಿಂದ ವ್ಯಕ್ತಿ ಸಾವು

ಇದೇ ರೀತಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ (40) ಮೃತ ವ್ಯಕ್ತಿ. ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್​​ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ