ರಾಯಚೂರು: ಬೈಕ್ಗೆ ಡಿಕ್ಕಿಯಾಗಿ ಹೊಲಕ್ಕೆ ನುಗ್ಗಿದ ಕೆಎಸ್ಆರ್ಟಿಸಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಬೈಕ್ಗೆ ಡಿಕ್ಕಿಯಾದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ರಾಯಚೂರು: ಬೈಕ್ಗೆ ಡಿಕ್ಕಿಯಾದ (Accident) ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಂದಿಹಾಳದ ವಳಿ ಬೈಕ್ಗೆ ಡಿಕ್ಕಿಯಾಗಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ
ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವು
ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು 25 ವರ್ಷದ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ಪಟ್ಟಣದ ಹೊರ ವಲಯದ ಜಗಳೂರ-ಕೊಟ್ಟೂರ ರಸ್ತೆ ಕೆರೆ ಎರಿದ ಬಸವೇಶ್ವರ ದೇವಸ್ಥಾನ ಮುಂದೆ ನಡೆದಿದೆ. ಜಗಳೂರು ಕಡೆಗೆ ಬೈಕ್ನಲ್ಲಿ ಬರುತ್ತಿದ್ದ ಯುವಕನಿಗೆ ಮುಂಭಾಗದಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: Puducherry: ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಆಟೋ ಬಸ್ಸಿಗೆ ಡಿಕ್ಕಿ, 8 ಮಕ್ಕಳಿಗೆ ಗಂಭೀರ ಗಾಯ
ಬೆಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಆರೋಪ: ಹಸುಗಳ ರಕ್ಷಣೆ
ಬೆಂಗಳೂರು: ನಗರದಲ್ಲಿ ಅಕ್ರಮ ಗೋ ಸಾಗಾಟ ಆರೋಪ ಕೇಳಿಬಂದಿದ್ದು, ಜೆಜೆ ನಗರ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಹಸುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜೆಜೆ ನಗರದ ಚರ್ಚ್ ರಸ್ತೆ ಬದಿಯಲ್ಲೇ ಹಸುಗಳನ್ನ ಕಟ್ಟಿ ಹಾಕಲಾಗಿತ್ತು. ಈ ಕುರಿತು ಎನ್ಜಿಓ ಕಾರ್ಯಕರ್ತರೊಬ್ಬರು ಜೆಜೆ ನಗರ ಪೊಲೀಸರಿಗೆ ವಿಡಿಯೋ ಸಹಿತ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ಕು ಹಸುಗಳನ್ನು ರಕ್ಷಣೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ