ರಾಯಚೂರು: ಬೈಕ್​ಗೆ ಡಿಕ್ಕಿಯಾಗಿ ಹೊಲಕ್ಕೆ ನುಗ್ಗಿದ ಕೆಎಸ್​ಆರ್​ಟಿಸಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

|

Updated on: Jun 22, 2023 | 10:11 PM

ಬೈಕ್​ಗೆ ಡಿಕ್ಕಿಯಾದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಘಟನೆ ​ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ರಾಯಚೂರು: ಬೈಕ್​ಗೆ ಡಿಕ್ಕಿಯಾಗಿ ಹೊಲಕ್ಕೆ ನುಗ್ಗಿದ ಕೆಎಸ್​ಆರ್​ಟಿಸಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ರಾಯಚೂರಿನಲ್ಲಿ ಬೈಕ್​ಗೆ ಡಿಕ್ಕಿ ಹೊಡೆದು ಹೊಲಕ್ಕೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
Follow us on

ರಾಯಚೂರು: ಬೈಕ್​ಗೆ ಡಿಕ್ಕಿಯಾದ (Accident) ಕೆಎಸ್​ಆರ್​ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ನಂದಿಹಾಳ ಗ್ರಾಮದ ಬಳಿ ನಡೆದಿದೆ. ಮಂತ್ರಾಲಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ನಂದಿಹಾಳದ ವಳಿ ಬೈಕ್​ಗೆ ಡಿಕ್ಕಿಯಾಗಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿ ಬೈಕ್ ಸವಾರ ಸಾವು

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಸುಮಾರು 25 ವರ್ಷದ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಗಳೂರು ಪಟ್ಟಣದ ಹೊರ ವಲಯದ ಜಗಳೂರ-ಕೊಟ್ಟೂರ ರಸ್ತೆ ಕೆರೆ ಎರಿದ ಬಸವೇಶ್ವರ ದೇವಸ್ಥಾನ ಮುಂದೆ ನಡೆದಿದೆ. ಜಗಳೂರು‌ ಕಡೆಗೆ ಬೈಕ್​ನಲ್ಲಿ ಬರುತ್ತಿದ್ದ ಯುವಕನಿಗೆ ಮುಂಭಾಗದಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಜಗಳೂರು ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Puducherry: ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಆಟೋ ಬಸ್ಸಿಗೆ ಡಿಕ್ಕಿ, 8 ಮಕ್ಕಳಿಗೆ ಗಂಭೀರ ಗಾಯ

ಬೆಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಆರೋಪ: ಹಸುಗಳ ರಕ್ಷಣೆ

ಬೆಂಗಳೂರು: ನಗರದಲ್ಲಿ ಅಕ್ರಮ ಗೋ ಸಾಗಾಟ ಆರೋಪ ಕೇಳಿಬಂದಿದ್ದು, ಜೆಜೆ ನಗರ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಹಸುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜೆಜೆ ನಗರದ ಚರ್ಚ್ ರಸ್ತೆ ಬದಿಯಲ್ಲೇ ಹಸುಗಳನ್ನ ಕಟ್ಟಿ ಹಾಕಲಾಗಿತ್ತು. ಈ ಕುರಿತು ಎನ್​ಜಿಓ ಕಾರ್ಯಕರ್ತರೊಬ್ಬರು ಜೆಜೆ ನಗರ ಪೊಲೀಸರಿಗೆ ವಿಡಿಯೋ ಸಹಿತ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ಕು ಹಸುಗಳನ್ನು ರಕ್ಷಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ