ರಾಯಚೂರು: ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿ ನೀಡಿದ್ದಕ್ಕೆ ವೈದ್ಯರ ಮೇಲೆ ಪಿಡಿಓ ಗರಂ

ಲಿಂಗಸಗೂರು ತಾಲೂಕು ಮಟ್ಟದ ವೈದ್ಯರು ನೀಡಿದ ಕಲುಷಿತ ನೀರು ವರದಿಗೆ ಪಿಡಿಓ ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರ ವರದಿ ಒಪ್ಪಲ್ಲ ಎಂದಿದ್ದಾರೆ. ಇದರೊಂದಿಗೆತಾಲೂಕು ಮಟ್ಟದ ಅಧಿಕಾರಿ ಹಾಗೂ ಪಿಡಿಒ ಸತ್ಯ ಮುಚ್ಚಿಡುವ ಯತ್ನ ಮಾಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ರಾಯಚೂರು: ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿ ನೀಡಿದ್ದಕ್ಕೆ ವೈದ್ಯರ ಮೇಲೆ ಪಿಡಿಓ ಗರಂ
ಸಾಂದರ್ಭಿಕ ಚಿತ್ರ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on:Aug 11, 2023 | 9:26 AM

ರಾಯಚೂರು, (ಆಗಸ್ಟ್ 11): ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕಲುಷಿತ ನೀರು (contaminated water)ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ವೈದ್ಯರ ತಂಡ ನೀರಿನ ವರದಿ ನೀಡಿದೆ. ಒಟ್ಟು 24 ವಾಟರ್ ಸ್ಯಾಂಪಲ್​​ ಪೈಕಿ 3 ವಾಟರ್​ ಸ್ಯಾಂಪಲ್ ಅನ್​ಫಿಟ್ ಎಂದು ಲಿಂಗಸುಗೂರು ತಾಲೂಕು ಮಟ್ಟದ ವೈದ್ಯರ ತಂಡ ವರದಿ ನೀಡಿದೆ. ಆದ್ರೆ, ಈ ವರದಿಯನ್ನು ಚಿತ್ತಾಪುರ ಗ್ರಾಮಪಂಚಾಯಿತಿ ಪಿಡಿಓ ಶಶಿಕಲಾ ಪಾಟೀಲ್ ಒಪ್ಪುತ್ತಿಲ್ಲ. ಇದರೊಂದಿಗೆ ತಾಲೂಕು ಮಟ್ಟದ ಅಧಿಕಾರಿ, ಪಿಡಿಓ ಸೇರಿಕೊಂಡು ಸತ್ಯ ಮುಚ್ಚಿಡುವ ಯತ್ನ ಮಾಡಿದ್ರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ

ವೈದ್ಯರ ವರದಿ ಒಪ್ಪ. ನಮ್ಮ ಇಲಾಖೆ ನೀಡುವ ವರದಿಯನ್ನು ಮಾತ್ರ ಒಪ್ಪುತ್ತೇನೆ ಎಂದಿರುವ PDO ಶಶಿಕಲಾ, ಅಧಿಕಾರಿ ಅಮರೇಶ್​ ಯಾದವ್, ತಾಲೂಕು ವೈದ್ಯರ ತಂಡ ನೀಡಿರುವ ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಏಕೆ ಎಂದು ಟಿಹೆಚ್​ಒ ಅಮರೇಗೌಡ ವಿರುದ್ಧ ಪಿಡಿಒ, ಹಿರಿಯ ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟಿಹೆಚ್​ಒ ಅಮರೇಗೌಡ , ನಮ್ಮ ವರದಿಯಲ್ಲಿ ಬಂದಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಸತ್ಯ ಹೇಳಿದ್ದೇನೆ. ನಮ್ಮ ವರದಿ ಸರಿ ಇದೆ ಎಂದಿದ್ದಾರೆ.

ತಾಲ್ಲೂಕು ವೈದ್ಯರ ತಂಡದ ವರದಿ ಬಿಲ್ ಕುಲ್ ಒಪ್ಪಲ್ಲ ಎಂದು ಹಿರಿಯ ಅಧಿಕಾರಿ ಎಂದು ಲೆಕ್ಕಿಸದೇ ಟಿಎಚ್​ಓ ಮೇಲೆ ದರ್ಪ ಮೆರೆದಿದ್ದಾರೆ. ಮತ್ತೊಂದೆಡೆ ಪಂಚಾಯಿತಿ ತಮ್ಮ ತಪ್ಪು ಬೆಳಕಿಗೆ ಬರತ್ತೆ ಎಂದು ಪಿಡಿಓ ಮೇಡಂ ಗರಂ ಆಗಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಪಂಚಾಯಿತಿ ಅಧಿಕಾರಿಗಳು ಹಾಗೂ ವೈದ್ಯರ ಜಟಾಪಟಿಯಿಂದಾಗಿ ಚಿತ್ತಾಪುರ ಗ್ರಾಮಸ್ಥರು ಹೈರಾಣಾಗಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಚರಂಡಿ ಬಂದ್ ಮಾಡಿಸಿ ಎಂದು ಟಿವಿ9 ಕ್ಯಾಮೆರಾ ಎದುರು ಅಳಲು ತೋಡಿಕೊಂಡಿದ್ದರು.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:25 am, Fri, 11 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ