AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಆರ್‌ಎಸ್‌ಎಸ್ ವಿರುದ್ಧ ಸಮರ ಸಾರಿರುವ ಸರ್ಕಾರ ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ಮೇಲೆ ಸಮರಕ್ಕೆ ಮುಂದಾಗಿದೆ. ಅದರಂತೆ ಶುಕ್ರವಾರ ರಾಯಚೂರು ಪಿಡಿಓ ಪ್ರವೀಣ್ ಕುಮಾರ್​​ರ​ನ್ನು ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ಸದ್ಯ ಈ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ಇದನ್ನು ಕಾನೂನುಬಾಹಿರ ಎಂದು ಖಂಡಿಸಿದ್ದು, ಅಮಾನತನ್ನು ರದ್ದುಗೊಳಿಸಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದಾರೆ.

ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ, ಪಿಡಿಓ ಪ್ರವೀಣ್ ಕುಮಾರ್
ಭೀಮೇಶ್​​ ಪೂಜಾರ್
| Edited By: |

Updated on:Oct 18, 2025 | 1:51 PM

Share

ರಾಯಚೂರು, ಅಕ್ಟೋಬರ್​​ 18: ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್​​ಎಸ್​ಎಸ್​ (RSS) ಚಟುವಟಿಕೆಗಳಿಗೆ ಕಡಿವಾಣ ಹಾಕಿತು. ಬಳಿಕ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. ಶುಕ್ರವಾರ ಆರ್​ಎಸ್​ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಪ್ರವೀಣ್ ಕುಮಾರ್​​ರನ್ನು ಅಮಾನತು ಮಾಡಲಾಗಿದೆ. ಸದ್ಯ ಅಮಾನತು ಆಗಿರುವ ಪ್ರವೀಣ್ ಕುಮಾರ್​ ಜೊತೆಗೆ ಸಂಸದ ತೇಜಸ್ವಿ ಸೂರ್ಯ (Tejasvi Surya) ಮಾತನಾಡಿದ್ದು, ಆತ್ಮಸ್ತೈರ್ಯ ತುಂಬಿದ್ದಾರೆ.

ಪ್ರವೀಣ್ ಕುಮಾರ್​ ತೇಜಸ್ವಿ ಸೂರ್ಯ ಭರವಸೆ 

ಈ ಕುರಿತಾಗಿ ಟ್ವೀಟ್​ ಮಾಡಿರು ಸಂಸದ ತೇಜಸ್ವಿ ಸೂರ್ಯ, ಶ್ರೀ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಳಿಸಿದ ಅಧಿಕಾರಿ ಶ್ರೀ ಪ್ರವೀಣ್ ಕುಮಾರ್​ರೊಂದಿಗೆ ನಾನು ಮಾತನಾಡಿದ್ದು, ಈ ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದೇನೆ ಎಂದರು.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಅನೇಕ ಹೈಕೋರ್ಟ್‌ಗಳ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರವು ಕಾನೂನು ಹೋರಾಟ ಬಯಸಿದರೆ, ನಾವು ತಯಾರಾಗಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು

ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ರಾಯಚೂರಿನ ಸಿರವಾರ ತಾಲೂಕು ಲಿಂಗಸಗೂರು ಪಂಚಾಯಿತಿಯ ಪಿಡಿಓ ಪ್ರವೀಣ್ ಕುಮಾರ್ ಕೆಪಿ ಗಣವೇಶ ಧರಿಸಿ ಲಾಟಿ ಹಿಡಿದು ಭಾಗಿಯಾಗಿದ್ದರು. ಹೀಗಾಗಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಸಸ್ಪೆಂಡ್​ ಮಾಡಲಾಗಿದೆ. ಈ ಪಿಡಿಓ ಸಸ್ಪೆಂಡ್​ ಬೆನ್ನಲ್ಲೇ ಮತ್ತಷ್ಟು ಸಿಬ್ಬಂದಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:50 pm, Sat, 18 October 25

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್