AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ಮನೆ ಹುಡುಕುವ ನೆಪದಲ್ಲಿ ಮನೆಗಳ್ಳತನ: 4 ಜಿಲ್ಲೆಗಳಲ್ಲಿ ಕಳ್ಳರ ಕೈಚಳಕ; 45.95 ಲಕ್ಷದ ಚಿನ್ನಾಭರಣ ಜಪ್ತಿ

ಬಾಡಿಗೆ ಮನೆ ನೆಪದಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಮನೆಗಳ್ಳರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 45 ಲಕ್ಷ ರೂ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ರಾಯಚೂರು ಮಾತ್ರವಲ್ಲದೆ ಪಕ್ಕದ ಜಿಲ್ಲೆಗಳಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

ಬಾಡಿಗೆ ಮನೆ ಹುಡುಕುವ ನೆಪದಲ್ಲಿ ಮನೆಗಳ್ಳತನ: 4 ಜಿಲ್ಲೆಗಳಲ್ಲಿ ಕಳ್ಳರ ಕೈಚಳಕ; 45.95 ಲಕ್ಷದ ಚಿನ್ನಾಭರಣ ಜಪ್ತಿ
ಕುಖ್ಯಾತ ಕಳ್ಳರ ಬಂಧನ
ಭೀಮೇಶ್​​ ಪೂಜಾರ್
| Edited By: |

Updated on: Nov 18, 2026 | 6:12 PM

Share

ರಾಯಚೂರು, ನವೆಂಬರ್​​ 18: ಬಾಡಿಗೆ ಮನೆ ಹುಡುಕುವ ನೆಪದಲ್ಲಿ ಏರಿಯಾಗಳಲ್ಲಿ ಸುತ್ತಾಡಿ, ಬೀಗ ಹಾಕಿದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್​ ಮನೆಗಳ್ಳರನ್ನು ರಾಯಚೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜನಸಾಮಾನ್ಯರಂತೆ ಓಡಾಡುತ್ತಾ ಮನೆಗಳ್ಳತನಕ್ಕೆ ಸಂಚು ರೂಪಿಸುತ್ತಿದ್ದರು. ಇವರ ಬೆನ್ನಲ್ಲೇ ಹಲವು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ಬಂಧಿತರಿಂದ ಬರೋಬ್ಬರಿ 45 ಲಕ್ಷದ 95 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

45 ಲಕ್ಷದ 95 ಸಾವಿರ ರೂ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣ ವಶಕ್ಕೆ 

ರಾಯಚೂರಿನಲ್ಲಿ ಮಾತ್ರವಲ್ಲದೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಕೈಚಳಕ ತೋರಿಸುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ರಾಯಚೂರು ಪಶ್ಚಿಮ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ನಗರದ ನಿವಾಸಿಗಳಾದ ಅಮರ್ ಸಿಂಗ್ (29) ಹಾಗೂ ಧನರಾಜ್ ಸಿಂಗ್ (24) ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 45 ಲಕ್ಷದ 95 ಸಾವಿರ ರೂ ಮೌಲ್ಯದ 300 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಆಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: ಹಗಲು ಹಳೇ ಪಾತ್ರೆ ಮಾರಾಟ, ರಾತ್ರಿ ಮನೆಗಳ್ಳತನ: ಕೊನೆಗೂ ಸಿಕ್ಕಿಬಿದ್ದ ಖತರ್ನಾಕ್ ಮಂಕಿ ಕ್ಯಾಪ್ ಗ್ಯಾಂಗ್

ಇನ್ನು ಆರೋಪಿಗಳ ವಿಚಾರಣೆ ವೇಳೆ ಬರೋಬ್ಬರಿ ಐದು ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಯಚೂರು ಮಾತ್ರವಲ್ಲದೆ ಯಾದಗಿರಿ, ಬಳ್ಳಾರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲೂ ಈ ಖದೀಮರು ಕಳ್ಳತನ ಮಾಡಿರುವುದು ಪತ್ತೆಯಾಗಿದೆ.

ಖದೀಮರ ಕಳ್ಳತನದ ಸ್ಟೈಲ್ ಡಿಫರೆಂಟ್

ಪೊಲೀಸರ ತನಿಖೆ ವೇಳೆ ಆರೋಪಿ ಅಮರ್ ಸಿಂಗ್ ಹಾಗೂ ಧನರಾಜ್​ರ ಖರಾಮತ್ತು ಬಯಲಾಗಿದೆ. ಈ ಖದೀಮರ ಕಳ್ಳತನದ ಸ್ಟೈಲ್ ಡಿಫರೆಂಟ್. ಬಾಡಿಗೆ ಮನೆ ಹುಡುಕುವ ನೆಪದಲ್ಲಿ ಸ್ಥಳೀಯರಂತೆ ಓಡಾಡಿ, ಏರಿಯಾಗಳ ಮೇಲೆ ಕಣ್ಣಿಡುತ್ತಿದ್ದರು. ಬಳಿಕ ಬೈಕ್‌ನಲ್ಲಿ ಸುತ್ತಾಡಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದರು. ಸರಿಯಾದ ಸಮಯ ನೋಡಿ ಮನೆಗಳಿಗೆ ನುಗ್ಗಿ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ದೋಚುತ್ತಿದ್ದರು.

ಅಕ್ಕಪಕ್ಕದ ಜಿಲ್ಲೆಗಳಲ್ಲೂ ಕಳ್ಳತನ

ಇನ್ನು ಕೇವಲ ರಾತ್ರಿ ವೇಳೆಯಲ್ಲಷ್ಟೇ ಅಲ್ಲದೆ, ಹಗಲಿನಲ್ಲೂ ತಮ್ಮ ಕೈಚಳಕ ತೋರಿಸುತ್ತಿದ್ದರು. ರೈಲಿನಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಪ್ರಯಾಣಿಸಿ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕಳ್ಳತನಕ್ಕೆ ಇಳಿಯುತ್ತಿದ್ದ ಆರೋಪಿಗಳ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.

LIVE TV

ಇತ್ತ ಇತ್ತೀಚೆಗೆ ವ್ಯಕ್ತಿಯೊಬ್ಬರ ಮನೆಯಲ್ಲಿ ಗಣೇಶ ಹಬ್ಬದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಆಸಾಮಿಗಳು ಮನೆ ಗುಡಿಸಿ ಗುಂಡಾಂತರ ಮಾಡುತ್ತಿದ್ದರು. ಸದ್ಯ ಪೊಲೀಸರ ತನಿಖೆಯಲ್ಲಿ ಈ ಪ್ರಕರಣ ಕೂಡ ಪತ್ತೆಯಾಗಿದ್ದು, ಚಿನ್ನಾಭರಣ ಪತ್ತೆಯಾಗಿದೆ. ಪೊಲೀಸರ ಈ ಕಾರ್ಯಕ್ಕೆ ದೂರುದಾರರ ಕಡೆಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಎಸ್ಸಿ ಓದಿ ಶೋಕಿಗಾಗಿ ಕಳವು: ಸಿನಿಮಾ ಸ್ಟೈಲ್​​ನಲ್ಲಿ ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

ಸದ್ಯ ಆರೋಪಿಗಳ ಬಂಧನದ ಬಳಿಕ ರಾಯಚೂರು ಗ್ರಾಮೀಣ ಠಾಣೆ, ಶಕ್ತಿನಗರ ಠಾಣೆ ಹಾಗೂ ಪಶ್ಚಿಮ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಒಟ್ಟಿನಲ್ಲಿ ಜನಸಾಮಾನ್ಯರಂತೆ ಓಡಾಡುತ್ತಾ ಮನೆಗಳ್ಳತನ ಮಾಡುತ್ತಿದ್ದ ಖದೀಮರಿಗೆ ರಾಯಚೂರು ಪೊಲೀಸರ ಕಾರ್ಯಾಚರಣೆ ಬಿಸಿ ಮುಟ್ಟಿಸಿದೆ. ಈ ಆರೋಪಿಗಳು ಇನ್ನೂ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆ ಹಿನ್ನೆಲೆ ತನಿಖೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ತಾವೇ ಖುದ್ದಾಗಿ ತೆರಳಿ ಟ್ರಂಪ್​ಗೆ ಅದ್ದೂರಿ ಸ್ವಾಗತ ಕೋರಿದ ಚೀನಾ ಅಧ್ಯಕ್ಷ
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
"ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದವರು ಈಗ ಕೊಡ್ತಾರಾ?"
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ