ರಾಯಚೂರಿನಲ್ಲಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ 6 ನಕಲಿ ಪತ್ರಕರ್ತರನ್ನು ಬಂಧಿಸಿದ ಪೊಲೀಸರು
ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದರು. ಕ್ಯಾಮರಾ ಮತ್ತು ಲೋಗೋ ಹಿಡಿದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.
ರಾಯಚೂರು: ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ನಲ್ಲಿ ಪೊಲೀಸರು 6 ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ ಆರು ಜನ ನಕಲಿ ಪತ್ರಕರ್ತರನ್ನು ಬಂಧಿಸಲಾಗಿದೆ.
ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಸೇರಿದಂತೆ ಮೂವರು ಯುವತಿಯರು, ಮೂವರು ಯುವಕರು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದರು. ಕ್ಯಾಮರಾ ಮತ್ತು ಲೋಗೋ ಹಿಡಿದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಅಕ್ಕಿ ಮಾರಾಟಗಾರ ವಿರೇಶ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕ್ಯಾಮರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಜಪ್ತಿ ಮಾಡಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ನಗದು ಜಪ್ತಿ
ಹಾವೇರಿ ಜಿಲ್ಲೆ ಹಾನಗಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮಾ ಸ್ಟೈಲ್‌ನಲ್ಲಿ ಕಾರು ಚೇಸ್ ಮಾಡಿ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳು ಮತ್ತು 85 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು ಆರೋಪಿಗಳು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆ ಸಾಗರದ ಕಡೆ ಹಣ ಸಾಗಿಸುತ್ತಿದ್ರು ಎಂದು ತಿಳಿದು ಬಂದಿದೆ.
ಫಯಾಜಖಾನ್ (31 ವರ್ಷ), ಇಮ್ರಾನ್ ಖಾನ್ (27 ವರ್ಷ) ಮತ್ತು ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್ (23 ವರ್ಷ) ಮತ್ತು ಸಯ್ಯದ ಅಮೀನ್ (29 ವರ್ಷ) ಬಂಧಿತರು. ಎಸ್ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆದಿದೆ. ಹಾನಗಲ್ ಸಿಪಿಐ ಶಿವಶಂಕರ ಗಣಾಚಾರಿ ಹಾಗೂ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:52 am, Wed, 31 August 22