AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಕಲುಷಿತ ನೀರು ದುರಂತ: ಸಂತ್ರಸ್ತರಲ್ಲಿ ಮೂತ್ರಪಿಂಡ ಸಮಸ್ಯೆ ಉಲ್ಬಣ, ಮೃತರಿಗೆ ಪರಿಹಾರ ಘೋಷಿಸಿದ ಸಿಎಂ

ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ನಿರಂತರ ನಿಗಾ ವಹಿಸುತ್ತಿದ್ದಾರೆ

ರಾಯಚೂರಿನಲ್ಲಿ ಕಲುಷಿತ ನೀರು ದುರಂತ: ಸಂತ್ರಸ್ತರಲ್ಲಿ ಮೂತ್ರಪಿಂಡ ಸಮಸ್ಯೆ ಉಲ್ಬಣ, ಮೃತರಿಗೆ ಪರಿಹಾರ ಘೋಷಿಸಿದ ಸಿಎಂ
ರಾಯಚೂರಿನಲ್ಲಿ ನಗರಸಭೆ ಕಾರ್ಯವೈಖರಿ ಖಂಡಿಸಿ ಜನರು ಪ್ರತಿಭಟನಾ ಜಾಥಾ ನಡೆಸಿದರು.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jun 06, 2022 | 11:07 AM

Share

ರಾಯಚೂರು/ಬೆಂಗಳೂರು: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 20ಕ್ಕೂ ಹೆಚ್ಚಿನ ಪರಿಸ್ಥಿತಿ ಬಿಗಡಾಯಿಸಿದೆ. ಮೂತ್ರಪಿಂಡ ಸಮಸ್ಯೆ ಎದುರಿಸುತ್ತಿರುವ ಹಲವರಿಗೆ ಡಯಾಲಿಸಿಸ್ ಮಾಡಬೇಕಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ನಿರಂತರ ನಿಗಾ ವಹಿಸುತ್ತಿದ್ದಾರೆ. ನಿನ್ನೆ ಸಂಜೆಯವರೆಗೆ ಆರೋಗ್ಯ ಸಾಮಾನ್ಯ ಸ್ಥಿತಿಯಲ್ಲಿದ್ದವರು ನಂತರ ವಾಂತಿ-ಭೇದಿ ಸೇರಿದಂತೆ ಹಲವು ಸಮಸ್ಯೆಗಳಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಮಲ್ಲಮ್ಮ, ಅಬ್ದುಲ್ ಗಫುರ್ ಹಾಗೂ ಮೊಹಮದ್ ನೂರ್ ಎಂದು ಗುರುತಿಸಲಾಗಿದೆ. ಈ ಮೂವರೂ ಈ ಮೊದಲು ಚಿಕಿತ್ಸೆ ಪಡೆದಿದ್ದರು. ಆದರೆ ಇದ್ದಕ್ಕಿದ್ದಂತೆ ಸಮಸ್ಯೆಗಳು ಉಲ್ಬಣಿಸಿ ಮೃತಪಟ್ಟರು. ಕಲುಷಿತ ನೀರೇ ವಿಷ ಜಲವಾಗುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.

ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. ಕಲುಷಿತ ನೀರು ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣ ತನಿಖೆಗೆ ಸೂಚನೆ ನೀಡಲಾಗಿದೆ. ನೀರಿನ ಮಾದರಿಗಳನ್ನು ಸಂಗ್ರಹಿಸಿ, ತಪಾಸಣೆಗೆ ಒಳಪಡಿಸಲಾಗಿದೆ. ಡಿವೈಎಸ್​ಪಿ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಅಧಿಕಾರಿಗಳ ಲೋಪದೋಷದ ಬಗ್ಗೆಯೂ ತನಿಖೆ ವೇಳೆ ಗಮನ ಹರಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದೆ. ಅವರು ತಾಂತ್ರಿಕ ವರದಿ ನೀಡುತ್ತಾರೆ ಎಂದು ತಿಳಿಸಿದರು.

ನೀರು ಶುದ್ಧೀಕರಣ ಘಟಕ ಸ್ವಚ್ಛತೆಗೆ ನಿರ್ಲಕ್ಷ್ಯ

ರಾಯಚೂರಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿನ ಹಿನ್ನೆಲೆಯಲ್ಲಿ ನಡೆದ ಪ್ರಾಥಮಿಕ ತನಿಖೆಯಲ್ಲಿ ರಾಂಪುರ ಬಳಿ ಇರುವ ನೀರು ಶುದ್ಧೀಕರಣ ಘಟಕವನ್ನು 16 ವರ್ಷಗಳಿಂದ ಸ್ವಚ್ಛಗೊಳಿಸದ ವಿಚಾರ ಬೆಳಕಿಗೆ ಬಂದಿದೆ. ನಿಯಮಗಳ ಪ್ರಕಾರ ಪ್ರತಿ ಮೂರು ತಿಂಗಳಿಗೊಮ್ಮೆ ಘಟಕ ಸ್ವಚ್ಛಗೊಳಿಸುವುದು ಕಡ್ಡಾಯ. ಆದರೆ ಈ ನಿಯಮವನ್ನು ಸಾರಾಸಗಟಾಗಿ ಉಲ್ಲಂಘಿಸಲಾಗಿದೆ. ನೀರಿನ ಗುಣಮಟ್ಟ ಪರೀಕ್ಷೆ ವೇಳೆ ಅಧಿಕಾರಿಗಳು ಮಾಡಿರುವ ತಪ್ಪು ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬಂದ ನಂತರ ನಗರದ 50ಕ್ಕೂ ಹೆಚ್ಚು ಕಡೆ ನೀರಿನ ಮಾದರಿಗಳನ್ನು ಅಧಿಕಾರಿಗಳು ಕಲೆ ಹಾಕಿದ್ದರು.

ಈ ಪೈಕಿ 20ಕ್ಕೂ ಹೆಚ್ಚು ಕಡೆ ನೀರು ಕುಡಿಯಲು ಯೋಗ್ಯ ಸ್ಥಿತಿಯಲ್ಲಿ ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಕಲುಷಿತ ನೀರಿನ ಕಾರಣದಿಂದಾಗಿಯೇ ನಗರದಲ್ಲಿ ವಾಂತಿ-ಭೇದಿ ಸೇರಿ ವಿವಿಧ ಸಮಸ್ಯೆಗಳು ಉಲ್ಬಣಿಸಿವೆ. ಟ್ಯಾಂಕ್​ನಲ್ಲಿ ಓರ್ವ ವ್ಯಕ್ತಿ ಮುಳುಗುವ ಎತ್ತರದಷ್ಟು ಮಣ್ಣು ಶೇಖರಣೆಯಾಗಿದೆ. 15 ದಿನಗಳಿಂದ ಕಾಮಗಾರಿ ನಡೆಸಿದರೂ ಸ್ವಚ್ಛತಾ ಕಾರ್ಯ ಪೂರ್ಣಗೊಂಡಿಲ್ಲ. ಸೆಕೆಂಡ್ ಲೆವಲ್ ಫಿಲ್ಟರೇಶನ್​ನಲ್ಲಿ ಮಣ್ಣು ಶೇಖರಣೆಯಾಗಿದೆ. ವಾಟರ್ ಫಿಲ್ಟರೇಶನ್​ಗೆ ಕೆಮಿಕಲ್ಸ್ ಬಳಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.. ಘಟಕಕ್ಕೆ ನೀರು ಪೂರೈಸುವ ಕೆರೆ ಗಬ್ಬೆದ್ದು ದುರ್ವಾಸನೆ ಬರುತ್ತಿದೆ. 16 ವರ್ಷಗಳಿಂದ ದುರಸ್ತಿ ಅನುದಾನದಲ್ಲಿ ಅವ್ಯವಹಾರ ನಡೆದಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಯಚೂರು ಬಂದ್​ಗೆ ಕರೆ

ರಾಯಚೂರು ನಗರಸಭೆ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ರಾಯಚೂರು ಬಂದ್​ಗೆ ನಾಗರಿಕ ಹೋರಾಟ ವೇದಿಕೆ ಕರೆ ನೀಡಿದೆ. ರಾಯಚೂರು ನಗರದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಆಸ್ಪತ್ರೆಯ ವೆಚ್ಚ ಭರಿಸಬೇಕು ಎಂದು ಒತ್ತಾಯಿಸಲಾಗಿದೆ.

ಎಲ್ಲ ವಿಷಯಗಳಲ್ಲಿ ರಾಜಕೀಯ ಬೇಡ: ಸಿದ್ದರಾಮಯ್ಯ

ಪಠ್ಯಪುಸ್ತಕವನ್ನು ಹಿಂಪಡೆಯಿರಿ ಎಂಬ ಸಿದ್ದರಾಮಯ್ಯ ಹೇಳಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು. ಸಿದ್ದರಾಮಯ್ಯನವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಅವರ ಕಾಲದಲ್ಲೂ ಪಠ್ಯಪುಸ್ತಕ ಪರಿಷ್ಕರಣೆ ಆಗಿರಲಿಲ್ಲವೇ? ಈಗಾಗಲೇ ಸಮಿತಿ ವಿಸರ್ಜನೆ ಮಾಡಿದ್ದೇವೆ. ಪಠ್ಯದಲ್ಲಿ ಸಮಸ್ಯೆಗಳಿದ್ರೆ ಪರಿಷ್ಕರಣೆ ಮಾಡಿ ಮುದ್ರಣ ಮಾಡುತ್ತೇವೆ ಎಂದು ಹೇಳಿದರು.

ಕೊವಿಡ್ ನಿಯಂತ್ರಣದಲ್ಲಿದೆ

ದೇಶದಲ್ಲಿ ಕೊವಿಡ್ ಪ್ರಮಾಣ ಹೆಚ್ಚಳವಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಜಿಲ್ಲೆಗಳ ಪರಿಸ್ಥಿತಿ ವರದಿ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇನೆ. ಆ ವರದಿ ಆಧಾರಿಸಿ ಕೊವೀಡ್ ತಡೆಯುವ ಕುರಿತು ತೆಗೆದುಕೊಳ್ಳಬೇಕಾದ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡುತ್ತೇವೆ. ಸದ್ಯಕ್ಕೆ ರಾಜ್ಯದಲ್ಲಿ ಕೊವೀಡ್ ನಿಯಂತ್ರಣದಲ್ಲಿದೆ ಎಂದು ಹೇಳಿದರು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!