AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಕೋಟ್ಯಂತರ ರೂ ಲೂಟಿ

ರಾಯಚೂರಿನ ಲೋಕೋಪಯೋಗಿ ಇಲಾಖೆಯಲ್ಲಿ ಬೃಹತ್ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಮಸ್ಕಿ-ಲಿಂಗಸುಗೂರು ರಸ್ತೆ ಕಾಮಗಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ ಎತ್ತುವಳಿ ಮಾಡಲಾಗಿದೆ ಎನ್ನಲಾಗಿದೆ. ಅದರಲ್ಲೂ ಪಿಡಬ್ಲ್ಯುಡಿ ಇಇ ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಲೂಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ರಾಯಚೂರು PWD ಇಲಾಖೆಯಲ್ಲಿ ಭ್ರಷ್ಟಾಚಾರ: ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಕೋಟ್ಯಂತರ ರೂ ಲೂಟಿ
ಭ್ರಷ್ಟಾಚಾರ Image Credit source: tv9 kannada
ಭೀಮೇಶ್​​ ಪೂಜಾರ್
| Edited By: |

Updated on: Jun 28, 2026 | 8:07 PM

Share

ರಾಯಚೂರು, ಜೂನ್​​ 28: ಇತ್ತೀಚೆಗೆ ಇಡಿ ದಾಳಿಯಲ್ಲಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಬಾಮೈದ ಮಂಜುನಾಥ್ ಲಂಚಾವಾತಾರ (corruption) ಅನಾವರಣವಾಗಿತ್ತು. ಬರೋಬ್ಬರಿ 13 ಕೋಟಿ ರೂ ಮೌಲ್ಯದ ಆಸ್ತಿ ವಶಕ್ಕೆ ಪಡೆಯಲಾಗಿತ್ತು. ಇದೀಗ ಸತೀಶ್ ಜಾರಕಿಹೊಳಿ ಸಂಬಂಧಿ ಎಂದು ಹೇಳಿಕೊಂಡು ಓರ್ವ ವ್ಯಕ್ತಿ ಬರೋಬ್ಬರಿ 3.48 ಕೋಟಿ ರೂ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಆ ಮೂಲಕ ಲೋಕೋಪಯೋಗಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎನ್ನಲಾಗುತ್ತಿದೆ.

3 ಕೋಟಿ 48 ಲಕ್ಷ ರೂ ಹಣ ಗುಳುಂ

ರಾಯಚೂರು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ವೆಂಕಟೇಶ್ ಗಲಗ ವಿರುದ್ಧ ಇದೀಗ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಮಸ್ಕಿಯಿಂದ ಲಿಂಗಸುಗೂರು ರಸ್ತೆ ಕಾಮಗಾರಿಯಲ್ಲಿ ನಯಾಪೈಸೆಯಷ್ಟು ಕೆಲಸ ಮಾಡದಿದ್ದರೂ, ನಕಲಿ ದಾಖಲೆಗಳು ಸೃಷ್ಟಿಸುವ ಮೂಲಕ ಕಾಮಗಾರಿ ಆಗಿದೆ ಎಂದು ಬರೋಬ್ಬರಿ 3 ಕೋಟಿ 48 ಲಕ್ಷ ರೂ ಹಣ ಗುಳುಂ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಇಡಿ ದಾಳಿ ಮಾಡಿದ ವೈ ಮಂಜುನಾಥ ಯಾರು? ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಡಿಟೇಲ್ಸ್ ಇಲ್ಲಿದೆ

ಇನ್ನು ಈ ರಸ್ತೆ ಕಾಮಗಾರಿಯ ಅಧಿಕೃತ ಟೆಂಡರ್ ‘ಅಮ್ಮಾಪುರ ಆ್ಯಂಡ್​ ಕಂಪನಿ’ ಹೆಸರಿಗೆ ಮಂಜೂರಾಗಿತ್ತು. ಆದರೆ, ಇದೇ ಕಾಮಗಾರಿಯ ಮಧ್ಯೆ ‘ಭೀಮಾಶಂಕರ ದೋರನಹಳ್ಳಿ’ ಎಂಬ ಹೆಸರಿನಲ್ಲಿ ಮತ್ತೊಂದು ನಕಲಿ ಟೆಂಡರ್ ಹಾಗೂ ನಕಲಿ ವರ್ಕ್ ಡನ್ ದಾಖಲೆಗಳನ್ನು ಸೃಷ್ಟಿಸಿ ಈ ಬೃಹತ್ ವಂಚನೆ ಎಸಗಲಾಗಿದೆ ಎನ್ನಲಾಗುತ್ತಿದೆ. ಈ ಬ್ರಹ್ಮಾಂಡ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಪಾಲರು ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಅಧಿಕೃತವಾಗಿ ದೂರು ಸಲ್ಲಿಕೆಯಾಗಿದೆ.

ಆರೋಪ ತಳ್ಳಿಹಾಕಿದ ಇಇ ವೆಂಕಟೇಶ ಗಲಗ

ಆರೋಪ ಕುರಿತಾಗಿ ಪ್ರತಿಕ್ರಿಯೆ ನೀಡಿರುವ PWD ಇಇ ವೆಂಕಟೇಶ ಗಲಗ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ‘ಈ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಬೇರೊಂದು ಇಲಾಖೆಯಿಂದ ಫೈಲ್ ಅಪ್ರೂವ್ ಆಗಿ ಬಂದ ಹಿನ್ನೆಲೆಯಲ್ಲಿ ಈ ಕಾಮಗಾರಿಯನ್ನು ನೀಡಲಾಗಿತ್ತು. ಆದರೆ, ನಮ್ಮ ಲೋಕೋಪಯೋಗಿ ಇಲಾಖೆಯಿಂದ ಯಾವುದೇ ಹಣ ಆ ಆರೋಪಿತರಿಗೆ ಸಂದಾಯವಾಗಿಲ್ಲ. ಈ ಇಡೀ ಪ್ರಕರಣದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ