AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vote From Home: ರಾಯಚೂರು; ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಮೃತಪಟ್ಟ 82ರ ವೃದ್ಧೆ

ರಾಜ್ಯ ವಿಧಾನಸಭೆ ಚುನಾವಣೆಗೆ ಮನೆಯಿಂದಲೇ ಮತದಾನ ಮಾಡಿದ ಕೇವಲ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ.

Vote From Home: ರಾಯಚೂರು; ಮತ ಚಲಾಯಿಸಿ ಅರ್ಧ ಗಂಟೆಯಲ್ಲೇ ಮೃತಪಟ್ಟ 82ರ ವೃದ್ಧೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: May 04, 2023 | 3:47 PM

Share

ರಾಯಚೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಮನೆಯಿಂದಲೇ ಮತದಾನ (Vote From Home) ಮಾಡಿದ ಕೇವಲ ಅರ್ಧ ಗಂಟೆಯಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ನಡೆದಿದೆ. ಮೃತರು ಅಲಬನೂರು ಗ್ರಾಮದ ಮಂಗಮ್ಮ (82) ಆಗಿದ್ದಾರೆ. ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಈ ಬಾರಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದ್ದು, ಅದರಂತೆ ಮೇ 3ರಂದು ಮಂಗಮ್ಮ ಅವರ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿದ್ದರು. ಮಧ್ಯಾಹ್ನ ಸುಮಾರು 12.19ರ ವೇಳೆಗೆ ಮಂಗಮ್ಮ ಮತದಾನ ಮಾಡಿದ್ದರು. ಮಧ್ಯಾಹ್ನ 12.50ಕ್ಕೆ ಅಸುನಿಗಿದ್ದಾರೆ.

ಮಂಗಮ್ಮ ಅವರ ಮನೆಗೆ ಬುಧವಾರ ಪಿಆರ್​ಒ ದಿನೇಶ ಕೆಪಿ ಹಾಗೂ ಎಪಿಆರ್​​ಒ ಬಸಪ್ಪ ಹೆಚ್ ಹಾಗೂ ಇತರ ಸಿಬ್ಬಂದಿ ತೆರಳಿದ್ದರು. 349 ಸಂಖ್ಯೆಯ ಮತಪತ್ರವನ್ನು ಮಂಗಮ್ಮ ಅವರಿಗೆ ನೀಡಲಾಗಿತ್ತು. ಈ ವಿಚಾರವನ್ನು ಚುನಾವಣಾಧಿಕಾರಿ ಅರುಣ ಹೆಚ್ ದೃಢಪಡಿಸಿದ್ದಾರೆ.

ಮತ ಚಲಾಯಿಸಿದ್ದ ಶತಾಯುಷಿ ಅಜ್ಜನಿಗೆ ಆಯೋಗ, ಮೋದಿ ಮೆಚ್ಚುಗೆ

ಬೆಳಗಾವಿಯಲ್ಲಿ 103 ವರ್ಷದ ವೃದ್ಧ ಮಹಾದೇವ ಮಹಾಲಿಂಗ ಮಾಳಿ ಮನೆಯಿಂದಲೇ ಮತದಾನ ಮಾಡಿದ್ದಕ್ಕೆ ಅವರನ್ನು ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಶ್ಲಾಘಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಕೂಡ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬುಧವಾರ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಮನೆಯಿಂದ ಮತ ಚಲಾಯಿಸಿದ 103 ವರ್ಷದ ಅಜ್ಜನಿಗೆ ಕೇಂದ್ರ ಚುನಾವಣಾ ಆಯೋಗದಿಂದ ಶಹಬ್ಬಾಶ್ ​ಗಿರಿ

ರಾಜ್ಯದಲ್ಲಿ ಇದೇ ಮೊದಲ ಬಾರಿ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಹಾಗೂ ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚುನಾವಣಾ ಅಯೋಗದ ಸಿಬ್ಬಂದಿ ಅವರ ಮನೆ ಬಾಗಿಲಿಗೆ ತೆರಳಿ ಬ್ಯಾಲೆಟ್ ಪೇಪರ್ ನೀಡುತ್ತಾರೆ. ಮತದಾನದ ಪ್ರಕ್ರಿಯೆಯನ್ನು ಚಿತ್ರೀಕರಣ ಮಾಡಲಾಗುತ್ತದೆ. ಮತದಾನದ ನಂತರ ಮತ ಪೆಟ್ಟಿಗೆಗಳನ್ನು ಈಗಾಗಲೇ ಮೀಸಲಿಟ್ಟಿರುವ ಸ್ಟ್ರಾಂಗ್ ರೂಮ್​​ಗೆ ಶಿಪ್ಟ್ ಮಾಡಲಾಗುತ್ತದೆ. ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಲಾಗುತ್ತದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ