ರಾಯಚೂರು, ಜನವರಿ 28: ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ (woman) ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಸದ್ಯ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ರಕ್ಷಿಸಿದ ಜಾಲಹಳ್ಳಿ ಠಾಣೆ ಪೊಲೀಸರು ಹಲ್ಲೆ ಆರೋಪದಡಿ ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.
ಬಸವರಾಜ ನಾಯಕ, ಯಂಕಮ್ಮ, ದುರ್ಗಮ್ಮ, ರೇಣುಕಾರಿಂದ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಬಸವರಾಜನ ಅಣ್ಣ ರಂಗಪ್ಪ ಸಾವಿಗೆ ಮಹಿಳೆ ಕಾರಣವೆಂದು ಆರೋಪಿಸಿದ್ದಾರೆ. 20 ದಿನಗಳ ಹಿಂದೆ ಮೂರ್ಛೆ ರೋಗದಿಂದ ರಂಗಪ್ಪ ಮೃತಪಟ್ಟಿದ್ದರು.
ಇದನ್ನೂ ಓದಿ: ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?
ರಂಗಪ್ಪಗೆ ಪರಿಯವಿದ್ದ ಮಹಿಳೆ ಜೊತೆ ತೆರಳಿದ್ದಾಗ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಅನುಮಾನದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿ ನಿಂದಿಸಲಾಗಿದೆ. ನೂರಾರು ಜನರ ಎದುರು ಮನಬಂದಂತೆ ಬೈದು, ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಬೋರ್ ವೆಲ್ ಮೋಟರ್ ಕದ್ದೊಯ್ಯುತ್ತಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದಿದ್ದ ಘಟನೆ ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಗ್ರಾಮದಲ್ಲಿ ನಡೆದಿತ್ತು. ಬೈಕ್ನಲ್ಲಿ ಬಂದ ಮೂವರು ಮೋಟರ್ ಕಳ್ಳತನ ಮಾಡಿ ಬೈಕ್ನಲ್ಲಿ ಇಟ್ಟುಕೊಂಡು ಹೋಗುತ್ತಿರುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದಿದ್ದರು.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವಕನ ಕೊಲೆ: ಮೂವರು ಆರೋಪಿಗಳ ಕಾಲಿಗೆ ಗುಂಡೇಟು
ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿತ್ತು. ಒಂದೇ ಬೈಕ್ನಲ್ಲಿ ಬಂದಿದ್ದ ಮೂವರು ಕಳ್ಳರು ಯಾರು ಇಲ್ಲದ ವೇಳೆ ನೋಡಿ ಕಳ್ಳತನಕ್ಕೆ ಸ್ಕೇಚ್ ಹಾಕಿದ್ದರು. ಬೋರ್ ವೆಲ್ ಮೋಟರ್ ಕದ್ದು ಬೈಕ್ನಲ್ಲಿಟ್ಟು ಹೋಗುತ್ತಿದ್ದರು. ಆದರೆ ಈ ವೇಳೆ ಓರ್ವ ಕಳ್ಳನನ್ನು ಹಿಡಿದಿದ್ದ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿದ್ದರು. ಇನ್ನುಳಿದ ಇಬ್ಬರು ಬೈಕ್ ಸಮೇತ ಪರಾರಿ ಆಗಿದ್ದರು. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.