AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಕೃಷಿ ವಿವಿಯಲ್ಲಿ 75 ಪ್ರೊಫೆಸರ್ ಹುದ್ದೆಗಳಿಗೆ ಕೋಟಿ ಕೋಟಿ ಡೀಲ್ ಆರೋಪ: ತನಿಖೆಗೆ ಆದೇಶಿಸಿದ ಡಿಸಿ

ರಾಯಚೂರು ಕೃಷಿ ವಿವಿಯಲ್ಲಿ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ. ಅಭ್ಯರ್ಥಿಗಳಿಂದ ಹಣ ಪಡೆದು ನೇಮಕಾತಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈಶಾನ್ಯ ಪದವೀಧರ ಕ್ಷೇತ್ರದ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಆದೇಶ ಹೊರಡಿಸಲಾಗಿದೆ. ಈ ಗಂಭೀರ ಆರೋಪಗಳ ಬೆನ್ನಲ್ಲೇ, ಜಿಲ್ಲಾಧಿಕಾರಿ ಪೂವಿತಾ.ಎಸ್ ಅವರು ತನಿಖೆಗೆ ಆದೇಶಿಸಿ ತಂಡ ರಚಿಸಿದ್ದಾರೆ.

ರಾಯಚೂರು ಕೃಷಿ ವಿವಿಯಲ್ಲಿ 75 ಪ್ರೊಫೆಸರ್ ಹುದ್ದೆಗಳಿಗೆ ಕೋಟಿ ಕೋಟಿ ಡೀಲ್ ಆರೋಪ: ತನಿಖೆಗೆ ಆದೇಶಿಸಿದ ಡಿಸಿ
ಕೃಷಿ ವಿಶ್ವವಿದ್ಯಾಲಯ
ಭೀಮೇಶ್​​ ಪೂಜಾರ್
| Edited By: |

Updated on: Nov 06, 2026 | 7:00 PM

Share

ಮುಖ್ಯಾಂಶಗಳು

  • ರಾಯಚೂರು ಕೃಷಿ ವಿವಿ ನೇಮಕಾತಿಯಲ್ಲಿ ಅಕ್ರಮ ಆರೋಪ
  • ತನಿಖೆಗೆ ಆದೇಶಿಸಿದ ರಾಯಚೂರು ಡಿಸಿ ಎಸ್​.ಪೂವಿತಾ
  • ಅಭ್ಯರ್ಥಿಗಳಿಂದ ಹಣ ಪಡೆದು ನೇಮಕಾತಿ ಮಾಡಿದ ಆರೋಪ

ರಾಯಚೂರು, ನವೆಂಬರ್​​ 06: ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮತ್ತೊಂದೆಡೆ ಈಶಾನ್ಯ ಪದವಿಧರ ಕ್ಷೇತ್ರದ ಪರಿಷತ್ ಚುನಾವಣೆ ನೀತಿ ಸಂಹಿತೆ ಮಧ್ಯೆಯೇ ನೇಮಕಾತಿ ಆದೇಶ ಮಾಡಿರುವ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಇದೀಗ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.

ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ

ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅಭ್ಯರ್ಥಿಗಳಿಂದ ಹಣ ಪಡೆದು, ಡೀಲ್ ಮಾಡಿಕೊಂಡವರಿಗೆ ನೇಮಕಾತಿ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷ ಆರೋಪಿಸಿದ್ದಾರೆ.  ಒಬ್ಬೊಬ್ಬ ವಿದ್ಯಾರ್ಥಿಯಿಂದ ಲಕ್ಷ ಲಕ್ಷ ಹಣ ಪಡೆದು ಕೋಟಿಗಟ್ಟಲೇ ಅವ್ಯವಹಾರ ನಡೆಸಲಾಗಿದೆ ಅನ್ನೋದು ಹೋರಾಟಗಾರರ ಆರೋಪ.

ಇದನ್ನೂ ಓದಿ: ಪರೀಕ್ಷಾ ಅಕ್ರಮಕ್ಕೆ ಲೈಫ್ ಟೈಮ್ ಶಿಕ್ಷೆ: ಇನ್ನುಂದೆ ಅಕ್ರಮಕೋರರಿಗೆ ಸರ್ಕಾರಿ ನೌಕರಿ ಬಾಗಿಲು ಬಂದ್!

ಹಣ ಕೊಟ್ಟು ಡೀಲ್ ಮಾಡಿಕೊಂಡಿರುವವರಿಗೆ ನೇಮಕಾತಿ ನೀಡಲಾಗಿದೆ ಅಂತ ಜೆಡಿಎಸ್ ಜಿಲ್ಲಾಧ್ಯಕ್ಷ ವಿರುಪಾಕ್ಷ ಆರೋಪಿಸಿದ್ದಾರೆ. ಸದ್ಯ ಸಂಚಲನಕ್ಕೆ ಕಾರಣವಾಗಿದೆ. ಇನ್ನು ಈ ಬೆನ್ನಲ್ಲೇ ರಾಯಚೂರು ಕೃಷಿ ವಿವಿ ಆಡಳಿತ ಮಂಡಳಿ ಮತ್ತೊಂದು ಎಡವಟ್ಟಿ ಮಾಡಿರುವ ಆರೋಪವೂ ಕೇಳಿಬಂದಿದೆ. ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಅಮದರೆ ಅಕ್ಟೋಬರ್ 28ರಂದು ಏಕಾಏಕಿ ವಿಶ್ವವಿದ್ಯಾಲಯದ ಕುಲಪತಿ ಹಾಗೂ ಆಡಳಿತ ಮಂಡಳಿ ನೇಮಕಾತಿ ಆದೇಶ ಹೊರಡಿಸಿದೆ ಎಂದು ಆರೋಪಿಸಲಾಗಿದೆ. ಆದೇಶ ಪ್ರತಿಯನ್ನಇಮೇಲ್ ಮೂಲಕ ಕಳುಹಿಸಲಾಗಿದ್ದು, ಮತ್ತಷ್ಟು ಸಂಶಯಕ್ಕೆ ಕಾರಣವಾಗಿದೆ. ಇದು ಕೆಪಿಎಸ್ ಹಗರಣವನ್ನ ಮೀರಿಸುವ ಹಗರಣ ಎನ್ನುವ ಆರೋಪ ಕೇಳಿಬಂದಿದೆ.

LIVE TV

ಜಿಲ್ಲಾಡಳಿತದ ಅಂಗಳ ತಲುಪಿದ ಕೇಸ್​: ತನಿಖೆಗೆ ಆದೇಶ

ಕೃಷಿ ವಿವಿ ನೇಮಕಾತಿಯಲ್ಲಿ ಅಕ್ರಮ ಆರೋಪ ಬಾರೀ ಸಂಚಲನಕ್ಕೆ ಕಾರಣವಾಗ್ತಿದ್ದಂತೆ, ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಹಾಗೂ ಜಿಲ್ಲಾಡಳಿತ ಅಲರ್ಟ್ ಆಗಿದೆ. ಈ ಪ್ರಕರಣ ಇದೀಗ ಜಿಲ್ಲಾಡಳಿತದ ಅಂಗಳ ತಲುಪಿದ್ದು, ರಾಯಚೂರು ಜಿಲ್ಲಾಧಿಕಾರಿ ಪೂವಿತಾ.ಎಸ್​ ತನಿಖೆಗೆ ಆದೇಶಿಸಿದ್ದಾರೆ. ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ತನಿಖಾ ತಂಡ ರಚಿಸಿದ್ದಾರೆ. ಸಹಾಯಕ ಆಯುಕ್ತ ನಾಗೇಂದ್ರ ಕುಮಾರ್ ಬಾಬು ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಹಿನ್ನೆಲೆ, ಅನುಸರಿಸಲಾದ ನಿಯಮಗಳು ಮತ್ತು ಕಾರ್ಯವಿಧಾನಗಳು ಹಾಗೂ ನೇಮಕಾತಿಗೆ ಸಂಬಂಧಿಸಿದ ಅನುಮೋದನೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ತನಿಖಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಸಚಿವ ಅಜಯ್ ಸಿಂಗ್ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಪ್ರತಿಕ್ರಿಯಿಸಿದ್ದು, ‘ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೆ ಜಿಲ್ಲಾಡಳಿತದಿಂದ ತನಿಖೆ ನಡೆಸಲಾಗುತ್ತದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ನೇಮಕಾತಿ ಆದೇಶ ಹೊರಡಿಸಿದ್ದರೆ, ಈ ಕುರಿತು ಕೃಷಿ ಇಲಾಖೆ ಕಾರ್ಯದರ್ಶಿಯಿಂದ ಮಾಹಿತಿ ಪಡೆಯಲಾಗುತ್ತದೆ. ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದರೆ ನೇಮಕಾತಿ ರದ್ದುಪಡಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: 13 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಸಂಕಷ್ಟದಲ್ಲಿ ಕರ್ನಾಟಕದ 32 ವಿಶ್ವವಿದ್ಯಾಲಯಗಳು

ಒಟ್ಟಿನಲ್ಲಿ ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಈಗ ತನಿಖೆ ಸುಳಿಗೆ ಸಿಲುಕಿದೆ. ಹಣದ ಡೀಲ್ ಆರೋಪದ ಸತ್ಯಾಸತ್ಯತೆ ಏನು? ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆಯೇ? ಅನ್ನೋದು ಈಗ ಕುತೂಹಲಕ್ಕೆ ಕಾರಣವಾಗಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಯಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More