ವೀರಶೈವ ಲಿಂಗಾಯತ ಸಮಾವೇಶಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಠಕ್ಕರ್

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೆದ್ದಾರಿಯಲ್ಲಿ ಕುಳಿತು ಪಂಚಮಸಾಲಿ ಸಮುದಾಯದವರಿಂದ ಇಷ್ಟಲಿಂಗ ಪೂಜೆ ಮಾಡಲಾಗಿದೆ. ಜಯಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದ್ದಾರೆ. ದಾವಣಗೆರೆ ವೀರಶೈವ ಲಿಂಗಾಯತ ಸಮಾವೇಶಕ್ಕೆ ಠಕ್ಕರ್ ಕೊಡಲು ಈ ಸಮಾವೇಶ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.

ವೀರಶೈವ ಲಿಂಗಾಯತ ಸಮಾವೇಶಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಠಕ್ಕರ್
ಜಯಮೃತ್ಯುಂಜಯ ಸ್ವಾಮೀಜಿ
Follow us
ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on: Dec 24, 2023 | 3:14 PM

ರಾಯಚೂರು, ಡಿಸೆಂಬರ್​​ 24: ದಾವಣಗೆರೆ ವೀರಶೈವ ಲಿಂಗಾಯತ ಸಮಾವೇಶಕ್ಕೆ ಠಕ್ಕರ್ ಕೊಡಲು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶ ಮಾಡಲಾಗುತ್ತಿದೆ. ಜಯಮೃತ್ಯುಂಜಯ ಸ್ವಾಮಿಜಿ (Jayamrutyunjaya swamiji) ನೇತೃತ್ವದಲ್ಲಿ ಸಮಾವೇಶ ಮಾಡಲಾಗುತ್ತಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ದಾವಣಗೆರೆಯ ಸಮಾವೇಶಕ್ಕೆ ಆಹ್ವಾನ ನೀಡದ ವಿಚಾರವಾಗಿ ಜಯಮೃತಂಜಯ ಸ್ವಾಮಿ ಮಾತನಾಡಿ, ಈ ಬಗ್ಗೆ ಶಾಮನೂರು ಶಿವಶಂಕರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಸಮುದಾಯದ ಹೋರಾಟಕ್ಕೆ ಬೆಂಬಲ ಕೊಟ್ಟವರು ಮಾಡುವ ಕಾರ್ಯಕ್ರಮ ಮಾತ್ರ ಗೊತ್ತು. ಉಳಿದ ಸಮಾವೇಶ ಗೊತ್ತಿಲ್ಲ. 1 ಕೋಟಿ 30 ಲಕ್ಷ ಜನಸಂಖ್ಯೆ ನಾವಿದ್ದೇವೆ. ಅವರು (ಶಾಮನೂರು ಶಿವಶಂಕರಪ್ಪ) ಹೋರಾಟಕ್ಕೆ ಬೆಂಬಲ ಪತ್ರ ಕೊಡಬೇಕಿತ್ತು ಎನ್ನವ ಅಪೇಕ್ಷೆ ಇದೆ.

ಇದನ್ನೂ ಓದಿ: ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷನಾಗಿದ್ದು ನನ್ನ ಸೌಭಾಗ್ಯ: ಶಾಮನೂರು ಶಿವಶಂಕರಪ್ಪ

ಮೀಸಲಾತಿಗೆ ನ್ಯಾಯ ಕೊಡುವ ಅಥವಾ ಸ್ಪಂದಿಸುವ ಮನಸ್ಸುಗಳಿದ್ದರೆ ಸಮಾವೇಶಕ್ಕೆ ಕರೆಯುತ್ತಿದ್ದರು. ಮಾಧ್ಯಮದವರು ಹೇಳಿದ ಮೇಲೆ ಅಲ್ಲಿ ಕಾರ್ಯಕ್ರಮವಿರುವುದು ಗೊತ್ತಾಗಿದೆ‌ ಎಂದು ಹೇಳಿದ್ದಾರೆ.

ಮೀಸಲಾತಿ ಸಿಗುವವರೆಗೂ ಹೋರಾಟ

ಕಾಂಗ್ರೆಸ್ ಸರ್ಕಾರದ ಮೇಲೆ ಸ್ವಾಮೀಜಿ ಮೃದು ಧೋರಣೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಮೃದು, ಉಗ್ರ ಎರಡು ಇತ್ತು, ತೋರಿಸುವವರು ಹಾಗೇ ಸ್ಟೈಲ್ ಆಗಿ ತೋರಿಸಿದ್ದರು. ಈಗ ಉಗ್ರ ಹೋರಾಟದ ಸಂದರ್ಭ ಇಲ್ಲ. ಯಾಕಂದ್ರೆ ನಮ್ಮ ಪರವಾಗಿ ರಿಪೋರ್ಟ್ ಬಂದಿದೆ. ಹಿಂದಿನ ಸರ್ಕಾರಗಳು ಕೊಟ್ಟ ಮಾತು ತಪ್ಪಿದ್ದಕ್ಕೆ ಹೋರಾಟಗಳು ನಡೆದಿದ್ದವು. ನಮಗೆ ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ, ನಮ್ಮ ಸಮುದಾಯದವರು ಸಿಎಂ ಆದರೂ ಮೀಸಲಾತಿ ಸಿಗುವವರೆಗೂ ಹೋರಾಟ ಅಂತ ನಿರ್ಧರಿಸಿದ್ದೇನೆ ಎಂದರು.

ವೈಜ್ಞಾನಿಕವಾಗಿ ಇನ್ನೊಮ್ಮೆ ಜಾತಿ ಗಣತಿ ಮಾಡಿ

ಜಾತಿಗಣತಿ ಬಗ್ಗೆ ವಿರೋಧ ವಿಚಾರ‌‌ವಾಗಿ ಮಾತನಾಡಿದ್ದು, ಸದ್ಯ ಊಹಾಪೋಹ ಸೃಷ್ಟಿ ಆಗಿದೆ. ವಿನಾ ಕಾರಣ ಜಾತಿ ಗಣತಿ ಬಗ್ಗೆ ಜನರಲ್ಲಿ ಅಸಮಾಧಾನ ಆಗುವ ಮೊದಲು, ಸಮುದಾಯದ ಮಠಾಧೀಶರು, ಶಾಸಕರ ಸಭೆ ಕರೀರಿ ಸಲಹೆ ಕೊಟ್ಟಿದ್ದೆ. ಲಿಂಗಾಯತ ಸಮಾಜದ 60 ಜನ ಶಾಸಕರು ಎಲ್ಲ ಸಹಮತ ವ್ಯಕ್ತಪಡಿಸಿಲ್ಲ. ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ

ನಮ್ಮ ಧರ್ಮಗುರು ಪರವಾಗಿ ನಿನ್ನೆ ಸುತ್ತೂರು ಶ್ರೀಗಳು ಹೇಳಿದ್ದಾರೆ. ಜಾತಿ ಗಣತಿ ಬಗ್ಗೆ ವಿರೋಧವಿಲ್ಲ. ಹಿಂದೆ ಮಾಡಿರುವ ಜಾತಿಗಣತಿ ಸಮೀಕ್ಷೆ ಅದು. ವೈಜ್ಞಾನಿಕವಾಗಿ ಇನ್ನೊಮ್ಮೆ ಜಾತಿ ಗಣತಿ ಮಾಡಿ ಅಂತ ಸಲಹೆ ಕೊಟ್ಟಿದ್ದಾರೆ.

8 ವರ್ಷದ ಹಿಂದಿನ ಸಮೀಕ್ಷೆಯ ಆಧಾರದಲ್ಲಿ ರಿಪೋರ್ಟ್ ಪಡೆಯುವ ಬದಲು ಸಿಎಂ ನಿಜವಾದ ರಿಪೋರ್ಟ್ ಪಡೆದುಕೊಳ್ಳಬೇಕು ಅನ್ನೋದನ್ನೆ ಸುತ್ತೂರು ಶ್ರೀಗಳ ಹೇಳಿಕೆಗೆ ಬೆಂಬಲವಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್